ಶಾಲೆಯಲ್ಲಿ ಶಿಸ್ತು ಮೀರಿದ ವಿದ್ಯಾರ್ಥಿಯ ಕಾಲಿಗೆ ಬೆತ್ತದಿಂದ ಹೊಡೆದಿದ್ದ ಶಿಕ್ಷಕರೊಬ್ಬರನ್ನು ಆರೋಪದಿಂದ ಮುಕ್ತಗೊಳಿಸಿ ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಕ್ಕಳನ್ನು ಶಿಸ್ತುಬದ್ಧಗೊಳಿಸುವ ಉದ್ದೇಶದಿಂದ ಶಿಕ್ಷಕರು ದಂಡಿಸುವುದು ಸರಿಯಾಗಿದೆ ಎಂದು ಹೈಕೋರ್ಟ್ ಈ ಮೂಲಕ ಸ್ಪಷ್ಟಪಡಿಸಿದೆ.
ತನ್ನ ವಿದ್ಯಾರ್ಥಿಗಳಿಗೆ ಹೊಡೆದಿದ್ದ ಶಾಲಾ ಶಿಕ್ಷಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಇತ್ತೀಚಿನ ತೀರ್ಪಿನಲ್ಲಿ ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಸಿ. ಪ್ರತೀಪ್ ಕುಮಾರ್ ಅವರು ಈ ಸಂದರ್ಭದಲ್ಲಿ ವಿವಿಧ ಹಿಂದಿನ ನ್ಯಾಯಾಂಗ ತೀರ್ಪುಗಳನ್ನು ಉಲ್ಲೇಖಿಸಿದ್ದು, ಶಿಕ್ಷಕರು ಮಗುವಿಗೆ ನೀಡಬಹುದಾದ ದೈಹಿಕ ಶಿಕ್ಷೆಯ ಪ್ರಮಾಣದ ಕುರಿತು ಚರ್ಚಿಸಿದ್ದಾರೆ.
ಮಕ್ಕಳು ಜವಾಬ್ದಾರಿಯುತ ಪ್ರಜೆಗಳಾಗಲು ಕೆಲವು ಸಂದರ್ಭಗಳಲ್ಲಿ ದಂಡನೆ ಅಗತ್ಯವಿರುತ್ತದೆ, ಹಾಗಾಗಿ ಶಿಕ್ಷಕರ ಈ ಕ್ರಮ ಸರಿಯಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ. 2019 ರಲ್ಲಿ ಪಾಲಕ್ಕಾಡ್ ಶಾಲೆಯೊಂದರಲ್ಲಿ 5ನೇ ತರಗತಿಯ ವಿದ್ಯಾರ್ಥಿಯ ಕಾಲಿಗೆ ಬೆತ್ತದಿಂದ ಹೊಡೆದಿದ್ದ ಶಿಕ್ಷಕರ ಕ್ರಮವನ್ನು ಪ್ರಶ್ನಿಸಿ ಪೋಷಕರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.
ಪೋಷಕರು ತಮ್ಮ ಮಕ್ಕಳ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸುತ್ತಾರೆ. ಮಕ್ಕಳನ್ನು ಶಿಸ್ತುಬದ್ಧಗೊಳಿಸಲು ಶಿಕ್ಷೆ ನೀಡುವ ಅಧಿಕಾರ ಶಿಕ್ಷಕರಿಗೆ ಇರುತ್ತದೆ. ಈ ನಿರ್ದಿಷ್ಟ ಪ್ರಕರಣದಲ್ಲಿ ಶಿಕ್ಷಕರು ಶಿಸ್ತು ಕಲಿಸುವ ಉದ್ದೇಶದಿಂದ ಶಿಕ್ಷೆ ನೀಡಿದ್ದಾರೆ ಹೊರತು ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಈ ಮಾಹಿತಿಗಳನ್ನು ಓದಿ
- ಗೃಹಲಕ್ಷ್ಮಿ ಹೊಸ ಅಪ್ಡೇಟ್ : ನಿಮ್ಮ ಹೆಸರು ಈ ಪಟ್ಟಿಯಲ್ಲಿದ್ದರೆ ಮಾತ್ರ ಬಾಕಿ ಕಂತುಗಳ ಹಣ ಜಮಾ! ಕೂಡಲೇ ಚೆಕ್ ಮಾಡಿ
- ಗೃಹಲಕ್ಷ್ಮಿ ಅರ್ಹ ಫಲನುಭವಿಗಳ ಅಧಿಕೃತ ಪಟ್ಟಿ ಬಿಡುಗಡೆ ನಿಮ್ಮ ಹೆಸರು ಇದೆಯಾ? ಈಗಲೇ ಚೆಕ್ ಮಾಡಿ ಇಲ್ಲಿದೆ ಡೈರೆಕ್ಟ್ ಲಿಂಕ್.!
- BIGNEWS : ಗೃಹಲಕ್ಷ್ಮಿ ಬಾಕಿ 4000ರೂ ಹಣ ಈ ದಿನದಂದು ಖಾತೆಗೆ ಜಮೆ? ಅಧಿಕೃತ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್..!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಲಿಂಗರಾಜ ರಾಮಪುರ (Lingaraj Ramapur) ಅವರು NeedsOfPublic.in ನ ಸಂಸ್ಥಾಪಕರು ಮತ್ತು ಪ್ರಧಾನ ಸಂಪಾದಕರಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಐಟಿ (BCA, MCA) ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ (M.A) ಪದವಿ ಪಡೆದಿರುವ ಇವರು ತಾಂತ್ರಿಕ ಮತ್ತು ಮಾಧ್ಯಮ ರಂಗದ ಅಪರೂಪದ ಸಂಗಮವಾಗಿದ್ದಾರೆ. ಡಿಜಿಟಲ್ ಪತ್ರಿಕೋದ್ಯಮಕ್ಕೆ ಕಾಲಿಡುವ ಮುನ್ನ ಬೆಂಗಳೂರಿನ ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ Infosys ಮತ್ತು Concentrix ನಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ಮಾಡಿದ ಜಾಗತಿಕ ಅನುಭವ ಇವರಿಗಿದೆ. 2017 ರಿಂದ ಮಾಧ್ಯಮ ರಂಗದಲ್ಲಿದ್ದು, ಕಳೆದ 9 ವರ್ಷಗಳಿಂದ ಡೇಟಾ-ಆಧಾರಿತ ವರದಿಗಾರಿಕೆ, ನಿಖರವಾದ ಫ್ಯಾಕ್ಟ್-ಚೆಕಿಂಗ್ ಮತ್ತು ಸಾರ್ವಜನಿಕರಿಗೆ ವಿಶ್ವಾಸಾರ್ಹ ಮಾಹಿತಿಯನ್ನು ತಲುಪಿಸುವ ಸಂಪಾದಕೀಯ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.


WhatsApp Group




Leave a Reply