ವಿದ್ಯುತ್ ಶುಲ್ಕದಲ್ಲಿ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ ಸರ್ಕಾರ, ಮತ್ತೆ ಜನತೆಗೆ ಕರೆಂಟ್ ಶಾಕ್.

current bill scaled

ಇದೀಗ ಎಲ್ಲರಿಗೂ ಶಾಕಿಂಗ್ ವಿಷಯ ( Shocking News ) ತಿಳಿದು ಬಂದಿದೆ. ಹೌದು, ಈಗಾಗಲೇ ಜನರು ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಯಾಕೆಂದರೆ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಗೆಯೇ ಅದರ ನಡುವೆ ಮಳೆ ಬೆಳೆ ಇಲ್ಲದೆ ರೈತರು ಕೂಡ ಕಂಗಾಲಾಗಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ, ಬಡತನ, ನಿರುದ್ಯೋಗ, ಇಷ್ಟೆಲ್ಲ ಇದ್ದರೂ ಇದರ ನಡುವೆ ಇದೀಗ ರಾಜ್ಯದ ಜನತೆಗೆ ಶಾಕ್ ನೀಡಿದಂತೆ ಆಗಿದೆ. ಅದು ಏನೆಂದು ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ( Current Bill ) ಏರಿಕೆ ಮಾಡಿದ್ದ ಎಸ್ಕಾಂಗಳು ( Escom ) ಈ ಬಾರಿಯೂ ವಿದ್ಯುತ್ ದರ ಹೆಚ್ಚಳ ಮಾಡಲು ಸಿದ್ದತೆ ನಡೆಸುತ್ತಿವೆ. ಈ ಸಂಬಂಧ ಬೆಸ್ಕಾಂ ( Bescom ) ಸೇರಿ ಇತರೆ ಕಂಪನಿಗಳು ವಿದ್ಯುತ್ ದರ ಏರಿಸುವಂತೆ ಕೆ.ಇ.ಆರ್.ಸಿ ( KERC ) ಮುಂದೆ ಪ್ರಸ್ತಾಪ ಇಟ್ಟಿವೆ. ಇದರಿಂದ ಜನರಿಗೆ ಇದೀಗ ಕರೆಂಟ್ ಶಾಕ್ ಕೊಟ್ಟಂತೆ ಆಗಿದೆ.

ವಿದ್ಯುತ್ ಶುಲ್ಕದಲ್ಲಿ ಹೆಚ್ಚಳ ( Increasing Current Bill ) :

ಈಗಾಗಲೇ ಪ್ರತಿ ಯೂನಿಟ್‍ಗೆ 50-60 ಪೈಸೆ ಏರಿಕೆಗೆ ಎಸ್ಕಾಂಗಳು ಕೆಇಆರ್‌ಸಿ ಮುಂದೆ ಪ್ರಸ್ತಾವನೆ ಇಟ್ಟಿವೆ. ಇದರಿಂದ ಈ ವರ್ಷ 2024 ರಲ್ಲಿ ಏಪ್ರಿಲ್ ತಿಂಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗುವ (Electricity Rate Hike) ಸಾಧ್ಯತೆ ಇದೆ. ಎಂದು ತಿಳಿದು ಬಂದಿದೆ.

ಈ ಹಿಂದೆ ಅಂದರೆ ಡಿಸೆಂಬರ್ ಕೊನೆಯ ವಾರದಲ್ಲಿ ಪ್ರತಿ ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಬೆಸ್ಕಾಂ (BESCOM) ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟವನ್ನು ಸರಿ ಹೊಂದಿಸುವ ಕಾರಣದಿಂದ ಕೆಇಆರ್‌ಸಿ ಮುಂದಾಗಿದೆ.

whatss

ವಿದ್ಯುತ್ ದರ ಹೆಚ್ಚಳ ಕುರಿತು ಸಾರ್ವಜನಿಕರಿಂದ ಆಕ್ರೋಶ :

ಈಗಾಗಲೇ ಸರ್ಕಾರ ಐದು ಗ್ಯಾರಂಟಿಗಳನ್ನು ( Five Guarantees ) ಜಾರಿ ಗೊಳಿಸಿ ಹಲವಾರು ರೀತಿಯ ಖರ್ಚು ವೆಚ್ಚವನ್ನು ಮಾಡಿಕೊಂಡಿದೆ. ಆದರೆ ಇದೀಗ ಈ ಗ್ಯಾರಂಟಿ ಭಾಗ್ಯಗಳಿಗೆ ಆಗುವ ವೆಚ್ಚವನ್ನು ಸರಿದೂಗಿಸಲು ಇದೀಗ ವಿದ್ಯುತ್ ಬೆಲೆ ಏರಿಕೆ ಮಾಡಲಿದೆ. ಹೀಗಾಗಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಲು ಸಿದ್ದತೆ ನಡೆಸಿದ್ದು, ಇದರಿಂದ ಜನರು ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ 1 ರಿಂದ ವಿದ್ಯುತ್ ಬೆಲೆಯಲ್ಲಿ ಹೆಚ್ಚಳ :

ಈಗಾಗಲೇ ಬೆಸ್ಕಾಂ ಮಾತ್ರವಲ್ಲದೇ ಉಳಿದ ನಾಲ್ಕು ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ನಾಲ್ಕು ಎಸ್ಕಾಂಗಳಿಂದ 50-60 ಪೈಸೆ ದರ ಪರಿಷ್ಕರಣೆಗೆ ಪ್ರಸ್ತಾಪ ಸಲ್ಲಿಕೆಯಾಗಿದೆ. ಹಾಗಾಗಿ ಎಲ್ಲಾ ಪರಿಷ್ಕೃತ ದರಗಳು ಏಪ್ರಿಲ್ 1 ( April 1st ) ರಿಂದಲೇ ಜಾರಿಯಾಗುವ ಸಾಧ್ಯತೆ ಇದ್ದು, ರಾಜ್ಯದ ಜನರಿಗೆ ವಿದ್ಯುತ್ ದರದ ಬಿಸಿ ಮೂಡಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!