Picsart 25 11 30 23 25 04 524 scaled

ದಿತ್ವಾ ಚಂಡಮಾರುತ ಪ್ರಭಾವ: ಕರ್ನಾಟಕದಲ್ಲಿ ಮುಂದಿನ 2 ದಿನ ಭಾರೀ ಮಳೆಯ ಎಚ್ಚರಿಕೆ!

Categories:
WhatsApp Group Telegram Group

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ದಿತ್ವಾ (Ditva) ಚಂಡಮಾರುತ ಈಗ ತಮಿಳುನಾಡು ಕರಾವಳಿಯ ಕಡೆ ತೀವ್ರಗತಿಯಲ್ಲಿ ಚಲಿಸುತ್ತಿದ್ದು, ಭೂಭಾಗದತ್ತ ತಲುಪಿದೆ. ಇದರಿಂದಾಗಿ ಕರ್ನಾಟಕದ ಹಲವಾರು ಜಿಲ್ಲೆಗಳ ಮೇಲೆ ನೇರ ಪ್ರಭಾವ ಬೀರುತ್ತಿದ್ದು, ಮುಂದಿನ ಎರಡು ದಿನಗಳು ಮಳೆಯ ಹಾವಳಿ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ. ಈಗಾಗಲೇ ಹವಾಮಾನ ಇಲಾಖೆ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ದಿತ್ವಾ ಚಂಡಮಾರುತದ ಪರಿಣಾಮ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ:

ರಾಜಧಾನಿ ಬೆಂಗಳೂರು ಸಹಿತ ದಕ್ಷಿಣ ಒಳನಾಡುಗಳಲ್ಲಿ ಗಟ್ಟಿಯಾಗಿ ಮೋಡ ಕವಿದ ವಾತಾವರಣ, ಹಗಲು ವೇಳೆ ಚಳಿಗಾಲದ ಅನುಭವ, ಗುಡುಗು-ಮಿಂಚು ಸಹಿತ ಮಳೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು, ತಾಪಮಾನದಲ್ಲಿ ಇಳಿಕೆ.  ಗರಿಷ್ಠ: ಸುಮಾರು 25°c, ಕನಿಷ್ಠ: ಸುಮಾರು 16°C.

ಮುಂದಿನ 6 ದಿನಗಳ ಜಿಲ್ಲಾ-ವಾರು ಮಳೆ ಎಚ್ಚರಿಕೆ:

ಯೆಲ್ಲೋ ಅಲರ್ಟ್ ಜಿಲ್ಲೆಗಳು (12):
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಕೊಡಗು ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದೆ. ಕರಾವಳಿಯಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಯೆಲ್ಲೋ ಅಲರ್ಟ್ ಜಿಲ್ಲೆಗಳು (11):

ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಈ ಎಲ್ಲಾ ಜಿಲ್ಲೆಗಳಲ್ಲಿ ಡಿಸೆಂಬರ್ 1 ನೇ ತಾರೀಖು ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುನ್ಸೂಚನೆ ನೀಡಲಾಗಿದೆ.

ಡಿಸೆಂಬರ್ 2:
ಕರಾವಳಿ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ
ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಕೆಲವು ಕಡೆ ಮಧ್ಯಮ ಮಳೆ ಮುನ್ಸೂಚನೆ ನೀಡಲಾಗಿದೆ..
ದಕ್ಷಿಣ ಒಳನಾಡು: ಬೆಂಗಳೂರು, ಕುಮಟೂರು, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 3:
ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ.
ಉತ್ತರ ಒಳನಾಡು: ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಹಗುರದಿಂದ ಸಾಧಾರಣ ಮಳೆಯ ಸಾಧ್ಯತೆ.

ಡಿಸೆಂಬರ್ 4& 5
ಕರಾವಳಿ ಹಗುರದಿಂದ ಸಾಧಾರಣ ಮಳೆ ಮುಂದುವರಿಕೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಒಣಹವೆಯ ಜಿಲ್ಲೆಗಳು: ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ತುಮಕೂರು, ವಿಜಯನಗರ

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆಗಳು:

ಅನಾವಶ್ಯಕ ಹೊರಗೆ ಹೋಗುವುದರಿಂದ ತಪ್ಪಿಸಿಕೊಳ್ಳಿ.
ಕಡಿಮೆ ಎತ್ತರದ ಪ್ರದೇಶಗಳಲ್ಲಿ ನೀರು ನಿಂತುಕೊಳ್ಳುವ ಸಾಧ್ಯತೆ ಇರುವುದರಿಂದ ಎಚ್ಚರವಾಗಿರಿ.
ಮಿಂಚು-ಗುಡುಗು ಇರುವ ಸಮಯದಲ್ಲಿ ಮರಗಳ ಕೆಳಗೆ ನಿಲ್ಲಬೇಡಿ.
ವಾಹನ ಸವಾರರು ಸ್ಲಿಪ್ಪರಿ ರಸ್ತೆಗಳ ಬಗ್ಗೆ ಎಚ್ಚರಿಕೆ ಇರಲಿ.

ಒಟ್ಟಾರೆಯಾಗಿ, ಹವಾಮಾನದಲ್ಲಿನ ಈ ಬದಲಾವಣೆ ದಿತ್ವಾ ಚಂಡಮಾರುತದ ನೇರ ಪರಿಣಾಮ. ಮುಂದಿನ ದಿನಗಳಲ್ಲಿ ಗಾಳಿಯ ತೀವ್ರತೆ ಮತ್ತು ಮಳೆಯ ಅಳತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ರಾಜ್ಯದ ಜನತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕ.

WhatsApp Image 2025 09 05 at 10.22.29 AM 9

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories