ಅನ್ನಭಾಗ್ಯ ಯೋಜನೆ : DBT ಪೇಮೆಂಟ್ ಸ್ಟೇಟಸ್ ಚೆಕ್ ಮಾಡುವ ವಿಧಾನ, ಯಾರಿಗೆ ಎಷ್ಟು ಹಣ ಬರುತ್ತೆ? Anna Bhagya Payment DBT Status Check

Picsart 23 07 13 03 09 08 920 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಹಣವು ನಿಮ್ಮ ಖಾತೆಗೆ ಜಮಾ ಆಗಿದೆಯೇ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು?, ಅಂತ್ಯೋದಯ ರೇಷನ್ ಕಾರ್ಡ್ ಇದ್ದವರಿಗೆ ಹಣ ಜಮಾ ಆಗುತ್ತದೆಯೇ?, ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲಾ ತಿಳಿದಿರುವಂತೆ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿಯ ಬದಲಾಗಿ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ ತಿಂಗಳಿಗೆ 170 ರೂಗಳನ್ನು ಖಾತೆಗೆ ಜಮಾ ಮಾಡುವುದಾಗಿ ಘೋಷಿಸಿದ್ದರು. ಅದರಂತೆಯೇ ಸೋಮವಾರದಂದು ಹಣವನ್ನು ಖಾತೆಗೆ ಜಮಾ ಮಾಡಲಾಯಿತು. ಆ ಹಣವು ನಿಮ್ಮ ಖಾತೆಗೂ ಕೂಡ ಬಂದಿದೆಯೇ?, ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಹಣ ಭಾಗ್ಯದ ಲೆಕ್ಕ: 

ಒಂದು ಬಿಪಿಎಲ್‌ ಕುಟುಂಬದಲ್ಲಿ ಒಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿ ಜೊತೆಗೆ 170 ರೂಪಾಯಿ ಹಣ ಸಿಗಲಿದೆ. ಒಂದ್ವೇಳೆ 1 ಕುಟುಂಬದಲ್ಲಿ ಇಬ್ಬರಿದ್ದರೆ 10 ಕೆ.ಜಿ. ಅಕ್ಕಿ, 340 ರೂಪಾಯಿ ಹಣ ಸಿಗಲಿದೆ. 1 ಕುಟುಂಬದಲ್ಲಿ ಮೂವರಿದ್ದರೆ 15 ಕೆ.ಜಿ ಅಕ್ಕಿ, 510 ರೂಪಾಯಿ ದುಡ್ಡು ಸಿಗುತ್ತೆ. ಹಾಗೇ 1 ಕುಟುಂಬದಲ್ಲಿ ನಾಲ್ವರಿದ್ದರೆ 20 ಕೆ.ಜಿ. ಅಕ್ಕಿ 680 ರೂಪಾಯಿ, ಐವರಿದ್ದರೆ 25 ಕೆ.ಜಿ. ಅಕ್ಕಿ, 850 ರೂಪಾಯಿ,  ರೂಪಾಯಿ ಹಣ ಖಾತೆಗೆ ಬೀಳಲಿದೆ. ಎಲ್ಲ ಪಡಿತರ ಚೀಟಿದಾರರ ಖಾತೆಗೆ ಇವತ್ತೇ ಹಣ ಬೀಳುವುದಿಲ್ಲ. ಬದಲಾಗಿ ಸಾಂಕೇತಿಕವಾಗಿ 2 ಜಿಲ್ಲೆಗಳ ಜನರ ಅಕೌಂಟ್‌ಗೆ ಹಣ ಹಾಕಲಾಗುತ್ತಿದೆ. ಬಳಿಕ ಹಂತ ಹಂತವಾಗಿ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ಪಡಿತರ ಫಲಾನುಭವಿಗಳ ಎಲ್ಲ ಖಾತೆಗೆ ಹಣ ಬೀಳುವುದು ಪಕ್ಕಾ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಅನ್ನಭಾಗ್ಯದ ಹಣವು ಬಂದಿದೆಯೇ ಎಂದು ಈಗಲೇ ಚೆಕ್ ಮಾಡಿ :

ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕ್ರಮಕ್ಕೆ ಚಾಲನೆ ನೀಡಿ ಫಲನುಭವಿಗಳ ಖಾತೆ ಹಣ ವರ್ಗಾವಣೆ ಮಾಡಿದರು. ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ಹಂತ ಹಂತವಾಗಿ ಈ ಹಣ ವರ್ಗಾವಣೆ ಆಗುತ್ತದೆ. ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗಿದ್ದೇವೆಯೇ?, ಎಷ್ಟು ಹಣ ಬಂದಿದೆ?, ಯಾರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂಬುದನ್ನು ತಿಳಿಯಲು ಸರ್ಕಾರವು ಒಂದು ಅಧಿಕೃತ ಜಾಲತಾಣ(ವೆಬ್ಸೈಟ್)ವನ್ನು ಬಿಡುಗಡೆ ಮಾಡಿದೆ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಅಂತ್ಯೋದಯ ರೇಷನ್ ಕಾರ್ಡ್ ಇದ್ದವರಿಗೆ ಹಣ ಜಮಾ ಆಗುತ್ತದೆಯೇ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿರುತ್ತದೆ. ಅಷ್ಟೇ ಅಲ್ಲದೆ ಅಂತ್ಯೋದಯ ಕಾರ್ಡ್ ಹೊಂದಿದ ಜನರು ತಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿದ್ದಾಗ ಕಡಿಮೆ ಹಣವು ಗೋಚರಿಸುತ್ತಿರುತ್ತದೆ. ಅದು ಏಕೆ ಎಂಬ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲಾಗುತ್ತದೆ.

whatss

ಅನ್ನಭಾಗ್ಯದ ಹಣ ಜಮಾ ಆಗಿದೆಯೇ ಎಂಬುದನ್ನು ನೋಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/Home/Eservices

ನಂತರ ಮುಖ ಪಟಾ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

h1

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

h2

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.  h3

ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ,   ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

h4 2

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

tel share transformed

ಹಣ ಬಂದ ತಕ್ಷಣ ಮೆಸೇಜ್ ಕೂಡ ಬರಲಿದೆ :

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರ ಕುಟುಂಬದ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್‌ ಕಾರ್ಡ್‌ಗಳ 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸ ಬೇಕಿದೆ. ಅದರಂತೆ ಎಂದಿನಂತೆ ತಲಾ ಐದು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಎಲ್ಲಾ ಹಂತಗಳಲ್ಲಿಯೂ ಪ್ರತಿ ಜಿಲ್ಲೆಗೆ ಅನ್ನ ಭಾಗ್ಯದ ಹಣವನ್ನು ಜಮಾ ಮಾಡಲಾಗುತ್ತದೆ.

ಅಂತ್ಯೋದಯ ಕಾರ್ಡ್ ಹೊಂದಿದವರು ಸ್ಟೇಟಸ್ ಚೆಕ್ ಮಾಡಿದಾಗ ಹೀಗೆ ಬರುತ್ತಿದೆ :

ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದವರು, ತಮ್ಮ ಖಾತೆಗೆ ಹಣ ಜಮಾ ಆಗಿದ್ದೆಯೇ ಇಂದು ಸ್ಟೇಟಸ್ ಚೆಕ್ ಮಾಡಿದಾಗ ಕೆಲವರಿಗೆ, ಹಲವಾರು ಜನರು ಇದ್ದರೂ ಕೂಡ ಕಡಿಮೆ ಹಣ ತೋರಿಸುತ್ತಿದ್ದರೆ, ನೀವು e-kyc ಯ ಸ್ಥಿತಿ(status) ಅನ್ನು ಒಮ್ಮೆ ಚೆಕ್ ಮಾಡಿ ಕೊಳ್ಳಬೇಕಾಗುತ್ತದೆ. ನಿಮ್ಮ ಅಂತ್ಯೋದಯ ರೇಷನ್ ಕಾರ್ಡಿನಲ್ಲಿ ನಾಲ್ಕಕ್ಕಿಂತ ಕಡಿಮೆ ಜನ ಇದ್ದರೆ ಅಥವಾ ಚಿಕ್ಕ ಮಕ್ಕಳಿದ್ದರೆ, ಹೀಗೆ ಕಡಿಮೆ ಹಣವನ್ನು ತೋರಿಸುತ್ತಿರುತ್ತದೆ. ಆದರೆ ನೀವು ಹೆದರಬೇಕಾಗಿಲ್ಲ. ನಿಮಗೂ ಕೂಡ ಅಕ್ಕಿಯ ಬದಲಾಗಿ ಹಣ ಜಮಾ ಆಗುತ್ತದೆ. ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ ಕೂಡ ಅಕ್ಕಿಯ ಬದಲಾಗಿ ಹಣ ಜಮಾ ಆಗಲಿದೆ. ಈಗಾಗಲೇ ಹಲವಾರು ಜಿಲ್ಲೆಯ ಜನರಿಗೆ ಹಣವು ಜಮವಾಗಿದೆ.

ಕುಟುಂಬ ಮುಖ್ಯಸ್ಥರಿಲ್ಲದೆ ಹಣವಿಲ್ಲ!

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚಿನ ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿ ಕುಟುಂಬಗಳು ಅಕ್ಕಿ ಬದಲಿಗೆ ಹಣ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಅದರಂತೆ, ಕುಟುಂಬದ ಮುಖ್ಯಸ್ಥರನ್ನು ಗುರುತಿಸದ ಹಾಗೂ ಒಂದಕ್ಕಿಂತಲೂ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವವರು ಆಹಾರ ಇಲಾಖೆ ಅಧಿಕಾರಿಗಳ ಸಹಕಾರ ಪಡೆದು ಸರಿಪಡಿಸಿಕೊಳ್ಳಬೇಕಾಗುತ್ತದೆ.

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಆಧಾರ್ ಕಾರ್ಡ್ & ಬ್ಯಾಂಕ್ ಮ್ಯಾಪಿಂಗ್ ಕಡ್ಡಾಯ – ಇಲ್ಲಿದೆ ಚೆಕ್ ಮಾಡುವ ವಿಧಾನ

ನಂತರ ನಿಮ್ಮ ರೇಷನ್ ಕಾರ್ಡಿಗೆ ನಿಮ್ಮ ಆಧಾರ್ ಕಾರ್ಡನ್ನ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಹಾಗಾಗಿ ಇದುವರೆಗೂ ನಿಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ ಆಗಿಲ್ಲವೆಂದರೆ ಈಗಲೇ ಲಿಂಕ್ ಮಾಡಿ ಇದರ ಸ್ಟೇಟಸ್ ಅನ್ನು ಚೆಕ್ ಮಾಡಲು ಕೆಳಗಿನ ವಿಡಿಯೋವನ್ನು ನೀವು ವೀಕ್ಷಣೆ ಮಾಡಿ ತಿಳಿದುಕೊಳ್ಳಬಹುದು

ಆಧಾರ್ ಕಾರ್ಡ್ ನೊಂದಿಗೆ  ಡಿಬಿಟಿ ಲಿಂಕ್ ಮಾಡಿ :

ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.

ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:

ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper

ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.

aa11

ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ

aa12

ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.

aa13

ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

tel share transformed

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

Leave a Reply

Your email address will not be published. Required fields are marked *