data entry jobs in gram panchayath

Free Job Alert – 5980 ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ, ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್, ಇಲ್ಲಿದೆ ಸಂಪೂರ್ಣ ವಿವರ

Categories:
WhatsApp Group Telegram Group

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯ ಸರ್ಕಾರ(State Government) ಸೂಚನೆ ನೀಡಿರುವಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು(DEO) ನೇರ ನೇಮಕಾತಿ ಮಾಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ :

ಗ್ರಾಮ ಪಂಚಾಯಿತಿಗಳಲ್ಲಿ ಕೆಲಸದ ಒತ್ತಡಗಳು ಇರುವುದರಿಂದ ಮತ್ತು ಅವುಗಳ ನಿರ್ವಹಣೆ ಮಾಡಬೇಕು ಎನ್ನುವದರ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಒಂದು ಕೆಲಸಕ್ಕೆ ಮುಂದಾಗಿದೆ ಎಂದು ಹೇಳಬಹುದು. ಅದೇನೆಂದರೆ
ರಾಜ್ಯದಲ್ಲಿ ಪ್ರತಿ ಗ್ರಾಮ ಪಂಚಾಯತಿಗೂ ಒಂದರಂತೆ 5980 ಡೇಟಾ ಎಂಟ್ರಿ ಆಪರೇಟರ್‌ಗಳನ್ನು(Data Entry Operators) ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಸೂಚನೆ ನೀಡಿದೆ.

ಹೌದು, ಪಂಚಾಯತ್ ರಾಜ್ ಆಯುಕ್ತಾಲಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ನೇರ ನೇಮಕಾತಿ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದೆ. ಮತ್ತು ಸುತ್ತೋಲೆ ಅನ್ನು ಹೊರಡಿಸಿದ ಪ್ರಕಾರ ನೇರ ನೇಮಕಾತಿಗೆ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲೆಯನ್ನು ಒಂದು ಜೇಷ್ಠತಾ ಘಟಕವೆಂದು ಪರಿಗಣಿಸಿ ಜಿಲ್ಲಾ ಪಂಚಾಯಿತಿಯ ಸಿಇಒ(CEO) ಅಧ್ಯಕ್ಷತೆಯ ಸಮಿತಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದು ಸೂಚನೆ ತಿಳಿಸಿದ್ದಾರೆ.

ಈ ಹುದ್ದೆಗೆ ಉತ್ತಮವಾದ ಸಂಬಳ ಕೂಡ ದೊರೆಯಲಿದೆ

ಈ ಸದರಿ ಹುದ್ದೆಗೆ ಆಯ್ಕೆಯಾದ ನೌಕರರಿಗೆ ಕನಿಷ್ಠ 16,738 ರೂ. ವೇತನ ನಿಗದಿಪಡಿಸಲಾಗುತ್ತದೆ ಎಂದು ಕೂಡಾ ತಿಳಿಸಿದ್ದಾರೆ. ಬಾಪೂಜಿ ಸೇವಾ ಕೇಂದ್ರದಲ್ಲಿ ಸಂಗ್ರಹವಾಗುವ ಮೊತ್ತದಿಂದ ವೇತನ ಪಾವತಿಸಬೇಕು ಎಂದು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಸೂಚಿಸಿದ್ದಾರೆ.

ಈ ನೇಮಕದಲ್ಲಿ ಮೊದಲ ಆದ್ಯತೆಯನ್ನು ಪ್ರಸ್ತುತವಾಗಿ ಕಾರ್ಯನಿರ್ವಹಿಸುತ್ತಿರುವ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ (Data entry Operaters) ನೇಮಕಾತಿಯಲ್ಲಿ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ. ಮತ್ತು ಈ ಆದ್ಯತೆಯನ್ನು ನೀಡಬೇಕು ಎಂದು ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್(Clerk come Data entry operator) ನೌಕರರ ಸಂಘದ ಅಧ್ಯಕ್ಷ ಭೀಮರೆಡ್ಡಿ ಪಾಟೀಲ್ (Bheem readdy patil ) ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Popular Categories