ಈ ವರದಿಯಲ್ಲಿ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (ಡಿಐಸಿ) ನೇಮಕಾತಿ 2024 (DIC recruitment 2024) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿಯಲ್ಲಿ ಬರುವ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (ಡಿಐಸಿ) ತನ್ನ ಹೊಸ ನೇಮಕಾತಿ ಡ್ರೈವ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳನ್ನು ಒದಗಿಸುತ್ತಿದೆ. ಈ ನೇಮಕಾತಿ ಪ್ರಕ್ರಿಯೆಯು ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ, ಸಂದರ್ಶನದ (Interview) ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಿದ್ದು, ಪ್ರಸ್ತುತ 48 ಗುತ್ತಿಗೆ ಆಧಾರದ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
ಖಾಲಿ ಹುದ್ದೆಗಳ ವಿವರ:
ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ (Digital India corporation) ಗುತ್ತಿಗೆ ಆಧಾರದ ಮೇಲೆ ಒಟ್ಟು 48 ಹುದ್ದೆಗಳನ್ನು ಭರ್ತಿ ಮಾಡಲಿದೆ. ಇವುಗಳಲ್ಲಿ 7 ಹೆಡ್ ಎಸ್‌ಇಎಂಟಿ, 16 ಸೀನಿಯರ್ ಕನ್ಸಲ್ಟೆಂಟ್ ಮತ್ತು 25 ಕನ್ಸಲ್ಟೆಂಟ್ ಹುದ್ದೆಗಳು ಸೇರಿವೆ.
ಹುದ್ದೆಗಳ ವಿವರ ಮತ್ತು ಅರ್ಹತೆ:
ಹೆಡ್ ಎಸ್‌ಇಎಂಟಿ (Head S.E.M.T.): ಈ ಹುದ್ದೆಗೆ ಅಭ್ಯರ್ಥಿಗಳು ಬಿಇ/ ಬಿಸಿಎ/ ಬಿಎಸ್ಸಿ (ಐಟಿ/ ಸಿಎಸ್) ಪದವಿಯ ಜೊತೆಗೆ ಎಂಇ/ ಎಂಟೆಕ್/ ಎಂಎಸ್/ ಎಂಬಿಎ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು. ಪಿಎಚ್‌ಡಿ ಪೂರ್ಣಗೊಳಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಕನಿಷ್ಠ 15 ವರ್ಷಗಳ ಅನುಭವ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಸೀನಿಯರ್ ಕನ್ಸಲ್ಟೆಂಟ್ (Senior Consultant): ಈ ಹುದ್ದೆಗೆ ಬಿಇ/ಬಿಟೆಕ್/ ಬಿಸಿಎ/ ಬಿಎಸ್ಸಿ (ಐಟಿ/ ಸಿಎಸ್) ಪದವಿಯ ಜೊತೆಗೆ ಎಂ.ಟೆಕ್/ಎಂ.ಎಸ್. ಶಿಕ್ಷಣ ಹೊಂದಿರಬೇಕು. 10 ವರ್ಷಗಳ ಕೆಲಸದ ಅನುಭವ ಇರಬೇಕು.
ಕನ್ಸಲ್ಟೆಂಟ್ (Consultant): ಬಿಇ/ಬಿಟೆಕ್/ ಬಿಸಿಎ/ ಬಿಎಸ್ಸಿ (ಐಟಿ/ ಸಿಎಸ್) ಪದವಿಯ ಜೊತೆಗೆ ಎಂ.ಟೆಕ್/ಎಂ.ಎಸ್. ಶಿಕ್ಷಣ ಮತ್ತು ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರಬೇಕು.
ವಯಸ್ಸಿನ ಮಿತಿ:
ಅಭ್ಯರ್ಥಿಗಳು 55 ವರ್ಷ ಮೀರಿರಬಾರದು.
ವೇತನದ ವಿವರ:
ಹೆಡ್ ಎಸ್‌ಇಎಂಟಿ(Head S.E.M.T.): ವಾರ್ಷಿಕ ₹37 ಲಕ್ಷವರೆಗೆ ವೇತನ
ಸೀನಿಯರ್ ಕನ್ಸಲ್ಟೆಂಟ್ (Senior Consultant): ₹30 ಲಕ್ಷವರೆಗೆ ವೇತನ
ಕನ್ಸಲ್ಟೆಂಟ್(Consultant): ₹20 ಲಕ್ಷವರೆಗೆ ವೇತನ.
ಅರ್ಜಿಯನ್ನು ಹೀಗೆ ಸಲ್ಲಿಸಿ :
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
www.dic.gov.in
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಪ್ರಮುಖ ದಿನಾಂಕ:
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ
ನವೆಂಬರ್ 6, 2024.
ಈ ನೇಮಕಾತಿ ಪ್ರಕ್ರಿಯೆ, ಉದ್ಯೋಗ ಹಂಬಲಿಗಳಿಗಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಇದರಿಂದ, ಡಿಜಿಟಲ್ ಇಂಡಿಯಾ ಕಾರ್ಪೊರೇಷನ್ ದೇಶದಲ್ಲಿನ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಮಹತ್ವಪೂರ್ಣ ಪಾತ್ರವನ್ನು ನಿರ್ವಹಿಸುತ್ತಿದ್ದು, ಕೌಶಲ್ಯಗಳನ್ನು ಮತ್ತಷ್ಟು ಮೆರೆಸಲು ಅವಕಾಶ ನೀಡುತ್ತದೆ. ಈ ಉದ್ಯೋಗಾವಕಾಶ ನಿಮ್ಮ ಭವಿಷ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಬಹುದು. ಸಮರ್ಪಕ ಅರ್ಹತೆ ಇದ್ದರೆ, ನಿಮ್ಮ ಆಕಾಂಕ್ಷೆಯನ್ನು ಸಾಧಿಸಲು ಈಗಲೇ ಮೊದಲಿಗೆ ಹೆಜ್ಜೆ ಹಾಕಿ.
ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




