WhatsApp Image 2025 11 12 at 1.20.55 PM

ಸರ್ಕಾರದಿಂದ ಮಹತ್ವದ ಆದೇಶ : ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿ.!

Categories:
WhatsApp Group Telegram Group

ಬೆಂಗಳೂರು : ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಕಾಲೇಜುಗಳಲ್ಲಿ 310 ಪ್ರಾಂಶುಪಾಲರು (ಯು.ಜಿ.) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ ಇದೀಗ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ ಈ ಕೆಳಕಂಡಂತೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.…….

ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ಮತ್ತು ತಿದ್ದುಪಡಿ ನಿಯಮಗಳು 2022 ರನ್ವಯ 310 ಪ್ರಾಂಶುಪಾಲರು (ಯು.ಜಿ) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧದಲ್ಲಿ ಒಟ್ಟು 779 ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳನ್ನು ಕರ್ನಾಟಕ ಶಿಕ್ಷಣ ಇಲಾಖಾ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು 2020 ರ ನಿಯಮ 3(1) ರಲ್ಲಿ ತಿಳಿಸಿರುವಂತೆ ಪರಿಶೀಲಿಸಿ, ಈ ಕಛೇರಿಯ ದಿನಾಂಕ:18-06-2025 ರ ಅಧಿಕೃತ ಜ್ಞಾಪನದಲ್ಲಿ ಶೈಕ್ಷಣಿಕವಾಗಿ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ-1 ರಂತೆ ಹಾಗೂ ಶೈಕ್ಷಣಿಕವಾಗಿ ಅನರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅನುಬಂಧ-2 ರಂತೆ ಪ್ರಕಟಿಸಿ, ಸಂಬಂಧಿಸಿದವರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
ಅದರಂತೆ, ಉಲ್ಲೇಖ-(7)ರಲ್ಲಿ ಸ್ವೀಕೃತವಾದ ಆಕ್ಷೇಪಣೆಗಳಲ್ಲಿ ಮತ್ತು ಅಹವಾಲು ಸಲ್ಲಿಸುವ ಸಂದರ್ಭದಲ್ಲಿ ಸಮಿತಿಯ ಮುಂದೆ ಮೌಖಿಕವಾಗಿ ಸಲ್ಲಿಸಿದ ಆಕ್ಷೇಪಣೆಗಳಲ್ಲಿ ಶೈಕ್ಷಣಿಕವಾಗಿ ಅರ್ಹರಾಗಿರುವ ಪಟ್ಟಿಯಲ್ಲಿನ ಕೆಲವು ಅಭ್ಯರ್ಥಿಗಳ ಅರ್ಹತೆಯನ್ನು ಮರು ಪರಿಶೀಲಿಸಲು ಕೋರಿರುತ್ತಾರೆ. ಅದರಂತೆ ಪರಿಶೀಲಿಸಲಾಗಿ, ಈ ಕೆಳಕಂಡ ಅಭ್ಯರ್ಥಿಗಳನ್ನು ದಿನಾಂಕ:18.06.2025 ರ ಈ ಕಛೇರಿಯ ಅಧಿಕೃತ ಜ್ಞಾಪನದ ಅನುಬಂಧ-1 ರಲ್ಲಿ ಶೈಕ್ಷಣಿಕವಾಗಿ ಅರ್ಹರ ಪಟ್ಟಿಯಲ್ಲಿ ಪ್ರಕಟಿಸಲಾಗಿರುವುದನ್ನು ಹಿಂಪಡೆದು, ಅನುಬಂಧ-2 ರ ಶೈಕ್ಷಣಿಕವಾಗಿ ಆನರ್ಹರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಈ ಪುಕಾರವಾಗಿ ಅನರ್ಹಗೊಳಿಸಲಾದ ಅಭ್ಯರ್ಥಿಗಳ ವಿವರಗಳನ್ನು ಅನುಬಂಧ-2 ರ ಹೆಚ್ಚುವರಿ ಪಟ್ಟಿಯಲ್ಲಿ ನಮೂದಿಸಿ, ಇದರೊಂದಿಗೆ ಲಗತ್ತಿಸಿದೆ.

ಈ ರೀತಿ ಶೈಕ್ಷಣಿಕವಾಗಿ ಅನರ್ಹರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿರುವುದಕ್ಕೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅವುಗಳನ್ನು ಇದರೊಂದಿಗೆ ಲಗತ್ತಿಸಿರುವ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ Scan ಮಾಡಿ pdf file ಅನ್ನು ಅಭ್ಯರ್ಥಿಗಳು ಕೆ.ಇ.ಎ.ಗೆ ನೀಡಿರುವ ತಮ್ಮ ಅಧಿಕೃತ ಇ-ಮೇಲ್ ವಿಳಾಸದ ಮೂಲಕ [email protected] ಗೆ 05 ದಿನಗಳ ಒಳಗಾಗಿ ಸಲ್ಲಿಸತಕ್ಕದ್ದೆಂದು ಈ ಮೂಲಕ ತಿಳಿಸಲಾಗಿದೆ.

WhatsApp Image 2025 11 12 at 1.00.29 PM
WhatsApp Image 2025 11 12 at 1.00.30 PM
WhatsApp Image 2025 11 12 at 1.00.30 PM 1
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories