drought relief fund status

ಮೊದಲ ಕಂತಿನ 2,000/- ರೂ. ಬೆಳೆ ಹಾನಿ ಪರಿಹಾರ ಬಿಡುಗಡೆ. ನಿಮ್ಮ ಹಣದ ಸ್ಟೇಟಸ್ ಚೆಕ್ ಮಾಡುವ ಲಿಂಕ್ ಇಲ್ಲಿದೆ

Categories:
WhatsApp Group Telegram Group

ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬರಗಾಲ ಉಂಟಾದ ಹಿನ್ನೆಲೆಯಲ್ಲಿ ಘೋಷಿಸಲಾದ ಪರಿಹಾರ ಧನವನ್ನು ನಿನ್ನೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಹೌದು ಗರಿಷ್ಠ 2000/- ರೂ. ವರೆಗೆ ತಾತ್ಕಾಲಿಕ ಬೆಳೆ ಪರಿಹಾರವನ್ನ ಆರ್ಹ ರೈತರಿಗೆ ನೀಡಲು ರಾಜ್ಯ ಸರ್ಕಾರ ಶುಕ್ರವಾರ 105 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ರೈತರ ಖಾತೆಗೆ ಹಣ ಜಮಾ ಆಗಿರುವ ಸ್ಟೇಟಸ್ ಚೆಕ್ ಮಾಡುವ ಸಂಪೂರ್ಣ ವಿಧಾನ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮೊದಲ ಕಂತಿನ 2000/- ಹಣ ಬಿಡುಗಡೆ

ಮಳೆಯಾಶ್ರಿತ ಬೆಳೆ (ಪ್ರತಿ ಹೆಕ್ಟೇರ್) 8,500 ರೂ., ನೀರಾವರಿ ಬೆಳೆ 17,000 ರೂ., ಹಾಗೂ ಬಹು ವಾರ್ಷಿಕ ಬೆಳೆ 22,500 ರೂ. ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಎನ್‌ಡಿಆರ್‌ಎ್ ಅಡಿ ಈವರೆಗೂ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಪ್ರತಿ ರೈತರಿಗೆ ಗರಿಷ್ಠ 2 ಸಾವಿರ ರೂ. ವರೆಗೆ ಪಾವತಿ ಮಾಡಲು ರಾಜ್ಯ ಸರ್ಕಾರ 105 ಕೋಟಿ ರೂ.ಗಳನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರ್‌ಗೆ 8,500 ರು., ನೀರಾವರಿ ಬೆಳೆಗೆ 17,000 ರು., ಬಹುವಾರ್ಷಿಕ ಬೆಳೆಗೆ 22,500 ರು. ನಿಗದಿ ಮಾಡಲಾಗಿದೆ. ಆ ಪ್ರಕಾರ ಕೇಂದ್ರದಿಂದ ಬೆಳೆ ಹಾನಿ ಪರಿಹಾರ ಅನುದಾನ ಬಂದ ಬಳಿಕ ಹೆಚ್ಚುವರಿ ಮೊತ್ತಕ್ಕೆ ಅರ್ಹರಿರುವ ರೈತರಿಗೆ ಹೆಚ್ಚುವರಿ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ಕೂಡ ಸರ್ಕಾರ ಭರವಸೆ ನೀಡಿದೆ.

whatss

012

ಹಣ ಜಮಾ ಸ್ಟೇಟಸ್ ಚೆಕ್ ಮಾಡುವುದು ಹೇಗೆ ?

ಕೆಳಗೆ ಕೊಟ್ಟಿರುವ ಬೆಳೆ ಪರಿಹಾರದ ಸ್ಟೇಟಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಜಿಲ್ಲೆಯ ತಾಲೂಕು ಹೋಬಳಿ ಹಳ್ಳಿ ಮತ್ತು ವರ್ಷ ಸೀಸನ್ ಸೆಲೆಕ್ಟ್ ಮಾಡಿಕೊಳ್ಳಿ. ನಂತರ ಗೇಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿ.

https://parihara.karnataka.gov.in/service87/

sssss

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

 

 

WhatsApp Group Join Now
Telegram Group Join Now

Popular Categories