ಕರ್ನಾಟಕ ಬರ ಘೋಷಣೆ – ಈ ತಾಲೂಕಿನ ರೈತರುಗಳಿಗೆ ಬರಗಾಲ ಘೋಷಣೆಯಲ್ಲಿ ಸಿಗಲಿರುವ ಪರಿಹಾರದ ಪಟ್ಟಿ ಇಲ್ಲಿದೆ ನೋಡಿ

WhatsApp Image 2023 09 21 at 10.30.48

ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ, ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ

195 ತಾಲೂಕುಗಳು ಮಾತ್ರ ಬರ ಪೀಡಿತ ಅಲ್ಲ, ಇನ್ನು ಹೆಚ್ಚುವ ಅವಕಾಶ ಇದೆ :

ಈಗಾಗಲೇ ಕರ್ನಾಟಕದ 195 ತಾಲೂಕುಗಳನ್ನು ಬರಪೀಡಿತ ತಾಲೂಕು(Drought prone taluk)ಗಳು ಎಂದು ಘೋಷಣೆ ಮಾಡಲಾಗಿದೆ. ಈ ತಾಲೂಕುಗಳಿಗೆ ಸಂಬಂಧ ಪಟ್ಟಂತೆ ಕೇಂದ್ರದ ಪರಿಹಾರಕ್ಕಾಗಿ ಮನವಿ ಸಲ್ಲಿಸಲು ಬೇಕಾಗಿರುವ ವರದಿಯನ್ನು (ಮೆಮೊರಾಂಡಮ್) ವಾರದಲ್ಲಿ ಸಲ್ಲಿಸಲಾಗುವುದು.

ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದೆ. ಈಗಾಗಲೇ 195 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದರೆ, 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಬರ ತಾಲೂಕುಗಳಿಗೆ ಸಂಬಂಧ ಪಟ್ಟಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಬೇಕಾಗಿರುವ ವರದಿಯನ್ನು (ಮೆಮೊರಾಂಡಮ್) ತ್ವರಿತ ತಯಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

whatss

ಕೇಂದ್ರದ ಅಧಿಕಾರಿಗಳು ರಾಜ್ಯಕ್ಕೆ ತೆರಳಿ ಸಮೀಕ್ಷೆ :

ಮೆಮೊರಾಂಡಮ್ ಸಿದ್ದಪಡಿಸುವ ಕೆಲಸ ಈಗಾಗಲೇ ಶೇ.70 ರಷ್ಟು ಮುಗಿದಿದೆ. ಮೇವಿಗೂ, ಕುಡಿಯುವ ನೀರಿಗೂ ಪ್ರತ್ಯೇಕ ಪರಿಹಾರದ ಅವಕಾಶವಿದ್ದು, ಮುಂದಿನ ಮೂರು ದಿನದಲ್ಲಿ ಈ ಎಲ್ಲವನ್ನೂ ಸೇರಿಸಿ ಸಂಪೂರ್ಣ ಮೆಮೊರಾಂಡಮ್ ತಯಾರಿಸಲಾಗುವುದು. NDRF ನಿಯಮಗಳ ಅನ್ವಯ ಒಟ್ಟಾರೆ 5 ರಿಂದ 6 ಸಾವಿರ ಕೋಟಿ ಪರಿಹಾರ ಪಡೆಯಲು ಅವಕಾಶ ಇದೆ. ಕೇಂದ್ರಕ್ಕೆ ಮನವಿ ಸಲ್ಲಿಸಿದ ಕೂಡಲೇ ಕೇಂದ್ರದ ಅಧಿಕಾರಿಗಳೂ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮೆಮೊರಾಂಡಮ್ ಅನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆದು ಈ ವಾರಾಂತ್ಯದೊಳಗೆ ಸಲ್ಲಿಸಲಾಗುವುದು.

2ನೇ ಹಂತದಲ್ಲಿ ಮತ್ತೆ ಬರ ಘೋಷಣೆ:

ಕೇಂದ್ರ ಬರ ಮಾರ್ಗಸೂಚಿ ಅನ್ವಯ ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಬರ ಎದುರಾಗಿದೆ. 34 ತಾಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಈ ಎರಡನ್ನೂ ಸೇರಿಸಿ ಕಳೆದ ವಾರ 195 ತಾಲೂಗಳಲ್ಲಿ ಬರ ಘೋಷಿಸಲಾಗಿದೆ. ಉಳಿದಂತೆ ಇನ್ನೂ 41 ತಾಲೂಕುಗಳಲ್ಲೂ ಸಹ ಪರಿಸ್ಥಿತಿ ಭಿನ್ನವಾಗೇನು ಇಲ್ಲ. ಆದರೆ, ಕೇಂದ್ರದ ಮಾರ್ಗಸೂಚಿಯಂತೆ ಈ ತಾಲೂಕುಗಳಲ್ಲಿ ಬರ ಘೋಷಣೆ ಸಾಧ್ಯವಿಲ್ಲ.

ನೀರಿಗೂ, ಮೇವಿಗೂ ಕೊರತೆ ಇಲ್ಲ:

ರಾಜ್ಯದಲ್ಲಿ ಸದ್ಯಕ್ಕೆ ಕುಡಿಯುವ ನೀರಿಗೆ ತೀವ್ರ ಅಭಾವ ಇಲ್ಲ. ಕುಡಿಯುವ ನೀರಿನ ಪೂರೈಕೆ ಸಲುವಾಗಿಯೇ ಎಲ್ಲಾ ಜಿಲ್ಲಾ ಪಂಚಾಯತ್ CEO ಗಳ ಖಾತೆಗೆ ಈಗಾಗಲೇ ಒಂದು ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 462 ಕೋಟಿ ಹಣ ಇದೆ. ಈ ಹಣವನ್ನು ಕುಡಿಯುವ ನೀರು ಪೂರೈಕೆಗೆ ಬಳಸಲು ಸೂಚಿಸಲಾಗಿದೆ. ಮತ್ತಷ್ಟು ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಗತ್ಯವಿದ್ದ ಸ್ಥಳಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಬೋರ್ ಗಳ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

 

ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ. ಬರ ಘೋಷಣೆಗೆ ಮುನ್ನವೇ ಅಗತ್ಯ ಮೇವಿನ ದಾಸ್ತಾನಿಗೆ ಸೂಚಿಸಲಾಗಿದೆ. ಅಲ್ಲದೆ, ನೀರಿನ ಲಭ್ಯತೆ ಇರುವ ರೈತರಿಗೆ ಮೇವಿನ ಭಿತ್ತನೆ ಬೀಜಗಳನ್ನು ಉಚಿತವಾಗಿ ವಿತರಿಸಲು 20 ಕೋಟಿ ರೂ. ನೀಡಲಾಗಿದೆ.

ಬರ ಘೋಷಿಸಿದ ಮೊದಲ ರಾಜ್ಯ ಕರ್ನಾಟಕ ದೇಶದ ಹಲವು ರಾಜ್ಯಗಳಲ್ಲಿ ಇಂದು ಬರದ ಸ್ಥಿತಿ ಇದೆ. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ರಾಜ್ಯಗಳಲ್ಲೂ ಈ ವರ್ಷ ತೀವ್ರ ಮಳೆ ಕೊರತೆ ಎದುರಾಗಿದೆ. ಆದರೆ, ಈ ಯಾವ ರಾಜ್ಯಗಳೂ ಈವರೆಗೆ “ಬರ” ಘೋಷಣೆ ಮಾಡಿಲ್ಲ. ಆದರೆ, ಕರ್ನಾಟಕದಲ್ಲಿ ರಾಜ್ಯ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಲಾಗಿದೆ. ಜೂನ್ ತಿಂಗಳಿಂದಲೂ ರಾಜ್ಯದ ಮಳೆ ವರದಿಯನ್ನು ಪ್ರತಿ ವಾರ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಅಲ್ಲದೆ, ರಾಜ್ಯದ ರೈತರಿಗೆ ಸಂಪೂರ್ಣ ನಷ್ಟ ಕಟ್ಟಿಕೊಡಲಾಗಲ್ಲ. ಆದರೆ ಅವರ ಕಷ್ಟಕ್ಕೆ ರಾಜ್ಯ ಸರ್ಕಾರ ಖಂಡಿತ ನೆರವಾಗಲಾಗಲಿದೆ” ಎಂದು ಅವರು ಭರವಸೆ ನೀಡಿದರು.

ಏನಿದು ಹಸಿರು ಬರ?

ಪ್ರಸ್ತುತ ದಿನಗಳಲ್ಲಿ ಊಹೆಗೂ ಮೀರಿ ಬದಲಾಗುತ್ತಿರುವ ಹವಾಮಾನದ ವಿಭಿನ್ನ ದ್ವಂದ್ವ ಬದಲಾವಣೆಯ ಪರಿಸ್ಥಿತಿಯಲ್ಲಿ “ಹಸಿರು ಬರ” ಎಂಬ ಪದವನ್ನೂ ಮೆಮೊರಾಂಡಮ್ ನಲ್ಲಿ ಸೇರಿಸಲಾಗಿದೆ.
ಬರ ಘೋಷಿತ ತಾಲೂಕುಗಳ ಹೊರತಾಗಿಯೂ ಅನೇಕ ತಾಲೂಕುಗಳಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಂದಿಲ್ಲ, ಬೆಳೆಯೂ ಕೈಸೇರಿಲ್ಲ. ಅಕಾಲಿಕ ಮಳೆಯ ಕಾರಣದಿಂದಾಗಿಯೂ ಒಂದಷ್ಟು ಬೆಳೆ ಹಾನಿಯಾಗಿದೆ. ಆದರೆ, ಈ ಅಕಾಲಿಕ ಮಳೆ ಭೂಮಿಯಲ್ಲಿ ತೇವಾಂಶಕ್ಕೆ ಕಾರಣವಾಗಿದೆ. ಸ್ಯಾಟಲೈಟ್ ಇಮೇಜ್ ನಲ್ಲಿ ವೀಕ್ಷಿಸಿದಾಗ ಬರ ಪೀಡಿತ ಪ್ರದೇಶದಲ್ಲೂ ತೇವಾಂಶದ ಹಸಿರು ಹೊದಿಕೆ ಕಂಡುಬರುತ್ತದೆ. ಕೇಂದ್ರ ಸರ್ಕಾರ ಬರ ಘೋಷಣೆಗೆ ಮುನ್ನ ಈ ಸ್ಯಾಟಲೈಟ್ ಇಮೇಜ್ ಗಳನ್ನು ಪರಿಶೀಲಿಸುವುದು ವಾಡಿಕೆ.

Picsart 23 07 16 14 24 41 584 transformed 1

ಹೀಗಾಗಿ ಈ ಇಮೇಜ್ ಗಳು ಬರ ಘೋಷಣೆಗೆ ಬಹುದೊಡ್ಡ ಅಡ್ಡಿಯಾಗುತ್ತಿದೆ. ಇದನ್ನು ನಾವು “ಹಸಿರು ಬರ” ಎಂದು ಹೆಸರಿಸಿದ್ದೇವೆ. ಈ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸುವ ಮುನ್ನವೇ ಇಂತಹ ಪ್ರದೇಶಗಳಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸುವ ಸಲುವಾಗಿ ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯ ಹಾಗೂ ಒಂದು ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧಕರನ್ನೂ ಕಳುಹಿಸಲಾಗಿತ್ತು. ಆ ವರದಿಯೂ ಕೈಸೇರಿದ್ದು ಮೆಮೊರಾಂಡಮ್ ನಲ್ಲಿ “ಹಸಿರು ಬರ”ದ ಕುರಿತು ಉಲ್ಲೇಖಿಸಲಾಗುವುದು. ಸಮೀಕ್ಷೆಗಾಗಿ ರಾಜ್ಯಕ್ಕೆ ಆಗಮಿಸುವ ಕೇಂದ್ರದ ಅಧಿಕಾರಿಗಳಿಗೆ ವೈಜ್ಞಾನಿಕ ಮಾಹಿತಿಯೂ ನೀಡಲಾಗುವುದು. ಇದರಿಂದ ಹಲವು ರೈತರಿಗೆ ಅನುಕೂಲವಾಗಲಿದೆ”.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!