ಬರ ಪರಿಹಾರದ 2000/- ಹಣ ರೈತರ ಖಾತೆಗೆ ಜಮಾ, ನಿಮ್ಮ ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ

Drought relief status

ಕರ್ನಾಟಕದಲ್ಲಿ ಮಳೆ ಕಡಿಮೆಯಾದ ಪರಿಣಾಮ, ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರವು, ಬರ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡಲು ಸರ್ಕಾರವು ಕೆಲವು ಕ್ರಮಗಳನ್ನು ಘೋಷಿಸಿದೆ.
ಕರ್ನಾಟಕದ ಬರಗಾಲದಿಂದ ನಲುಗಿದ ರೈತರಿಗೆ ಸಹಾಯಹಸ್ತ ಚಾಚಿರುವ ರಾಜ್ಯ ಸರ್ಕಾರ, ಈ ಬಾರಿ ಉತ್ತಮ ಕ್ರಮ ಕೈಗೊಂಡಿದೆ. ಬರದಿಂದ ಉಂಟಾದ ನಷ್ಟಕ್ಕೆ ಪರಿಹಾರವಾಗಿ, ನೇರವಾಗಿ ರೈತರ ಖಾತೆಗಳಿಗೆ ಹಣ ಜಮೆ ಮಾಡಿದೆ. ಈ ಕ್ರಮದಿಂದ ರೈತರ ಮನ ಖುಷಿಯಿಂದ ತುಂಬಿದೆ. ಈ ವರದಿಯಲ್ಲಿ ನಿಮ್ಮ ಖಾತೆಯಲ್ಲಿ ಬರ ಪರಿಹಾರ(Drought relief) ಜಮಾ ಆಗಿದೆಯೋ ಅಥವಾ ಇಲ್ಲವೋ ಅನ್ನುವುದನ್ನು ಹೇಗೆ ಪರಿಶೀಲಿಸಬೇಕು ಎಂಬುದನ್ನು ತಿಳಿಸಿಕೊಡಲಾಗಿದೆ, ವರದಿಯನ್ನು ಸಂಪೂರ್ಣ ವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬರದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಭರವಸೆಯ ಕಿರಣ ಬೆಳಗಿದೆ. ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲು ಕಾಯುತ್ತಿದ್ದ ಕರ್ನಾಟಕ ಸರ್ಕಾರ, ರೈತರ ಖಾತೆಗೆ ನೇರವಾಗಿ ಬರ ಪರಿಹಾರ ಧನಸಹಾಯ ಜಮೆ ಮಾಡಿದೆ. ಒಟ್ಟು 628 ಕೋಟಿ ರೂ. ಅನುದಾನವನ್ನು 33 ಲಕ್ಷ ರೈತರ ಖಾತೆಗೆ ವರ್ಗಾಯಿಸಲಾಗಿದೆ. ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಈ ಬರ ಪರಿಹಾರ ಅನುದಾನ ಬಿಡುಗಡೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಪತ್ರಿಕಾಗೋಷ್ಠಿ(Press Conference) ಯಲ್ಲಿ ತಿಳಿಸಿದ್ದಾರೆ. ಈ ಧನಸಹಾಯವು ರೈತರಿಗೆ ತುರ್ತು ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ.

ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲು ಕಾಯುತ್ತಿದ್ದ ರೈತರಿಗೆ ಈ ಧನಸಹಾಯ ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಈ ಹಣವು ಬರದಿಂದ ರೈತರಿಗೆ ತಮ್ಮ ಬೆಳೆಗಳನ್ನು ಪುನರ್‌ನಿರ್ಮಿಸಲು ಮತ್ತು ಜೀವನೋಪಾಯವನ್ನು ಮುಂದುವರಿಸಲು ಸಹಾಯ ಮಾಡುತ್ತದೆ. ಕೇಂದ್ರದ ಮೇಲೆ ಅವಲಂಬಿತವಾಗದೆ ರೈತರಿಗೆ ತ್ವರಿತ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ರೈತ ಸಮುದಾಯದಿಂದ ಪ್ರಶಂಸೆಗೆ ಪಾತ್ರವಾಗಿದೆ.

ರಾಜ್ಯ ಸರ್ಕಾರದ ಬರ ಪರಿಹಾರ: 33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಜಮಾ

ಬರದ ತಾಪಕ್ಕೆ ಸಿಲುಕಿರುವ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ 2000 ಕೋಟಿ ರೂ. ಬರ ಪರಿಹಾರ ಧನವನ್ನು ಘೋಷಿಸಿದೆ. ಈ ಯೋಜನೆಯಡಿ ಈಗಾಗಲೇ 33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ನೇರವಾಗಿ ಜಮಾ ಮಾಡಲಾಗಿದೆ.

ಇನ್ನೂ 1.6 ಲಕ್ಷ ರೈತರ ಖಾತೆಯ ಮಾಹಿತಿಯಲ್ಲಿ ಏರುಪೇರಾಗಿರುವುದರಿಂದ, ಅವರ ಖಾತೆಗಳಿಗೆ ಹಣ ಜಮಾ ಮಾಡುವ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿದೆ. ಈ ಖಾತೆಗಳ ಮಾಹಿತಿಯನ್ನು ಪರಿಶೀಲಿಸಿ, ಖಚಿತಪಡಿಸಿಕೊಂಡ ನಂತರ, ಉಳಿದ ರೈತರಿಗೂ ಬರ ಪರಿಹಾರದ ಹಣವನ್ನು ಶೀಘ್ರದಲ್ಲೇ ಜಮಾ ಮಾಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಉದ್ದೇಶದಿಂದ, ರಾಜ್ಯ ಸರ್ಕಾರವು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರಕ್ಕಾಗಿ ಅರ್ಹ ರೈತರ ಪಟ್ಟಿಯನ್ನು ಪ್ರಕಟಿಸಲು ಸೂಚಿಸಿದೆ. ಈ ಪಟ್ಟಿಯು ಗ್ರಾಮ ಪಂಚಾಯಿತಿ ಕಚೇರಿ(Gram Panchayat Office) ಗಳಲ್ಲಿ ಲಭ್ಯವಿದೆ. ನಿಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂದು ಖಚಿತಪಡಿಸಿಕೊಳ್ಳಲು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ. ನಿಮ್ಮ ಹೆಸರು ಪಟ್ಟಿಯಲ್ಲಿ ಕಾಣಿಸದಿದ್ದರೆ, ಚಿಂತಿಸಬೇಡಿ.
ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ(Farmer Contact Centre) ಭೇಟಿ ನೀಡಿ, ಇಲ್ಲಿಯ ಸಿಬ್ಬಂದಿ ನಿಮ್ಮ ಹೆಸರು ಪಟ್ಟಿಗೆ ಸೇರ್ಪಡೆಗೊಳ್ಳಲು ಸಹಾಯ ಮಾಡುತ್ತಾರೆ. ಅಥವಾ ನೀವು ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ( Revenue Department Office) ಭೇಟಿ ನೀಡಿ, ಕಂದಾಯ ಇಲಾಖೆಯ ಅಧಿಕಾರಿಗಳು ನಿಮ್ಮ ಹೆಸರು ಸೇರ್ಪಡೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಕೇಂದ್ರ ಸರ್ಕಾರ ಪರಿಹಾರ ಘೋಷಿಸಲಿ:

ಬರದಿಂದ ಬೆಳೆ ನಾಶವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ಸಂಕಷ್ಟ ನಿವಾರಣೆಗೆ ಕೇಂದ್ರ ಸರ್ಕಾರದಿಂದ ರೂ. 18,178 ಕೋಟಿ ಬರ ಪರಿಹಾರ ಅನುದಾನ ಬಿಡುಗಡೆಗೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿದೆ. ಮುಖ್ಯಮಂತ್ರಿಗಳು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ(PM Modi ) ಅವರನ್ನು ಭೇಟಿ ಮಾಡಿ ಬರ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ(Central Home minister, Amith Sha) ಅವರನ್ನು ಸಹ ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಹಲವು ಸಚಿವರು ಭೇಟಿ ಮಾಡಿ ಬರ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಬರ ಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳ ಕಳೆದರೂ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಗೃಹ ಸಚಿವ ಅಮಿತ್ ಶಾ ಅವರು ಈಗ ರಾಜ್ಯ ಪ್ರವಾಸದಲ್ಲಿದ್ದಾರೆ. ಈ ಸಂದರ್ಭದಲ್ಲಿ ಬರ ಪರಿಹಾರ ಘೋಷಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ. ಬರ ಪರಿಹಾರ ಘೋಷಿಸಿದರೆ ರಾಜ್ಯದ ರೈತರಿಗೆ ಬಹಳ ಅನುಕೂಲವಾಗಲಿದೆ. ಎಂದು ಕೃಷ್ಣ ಬೈರೇಗೌಡ ಅವರ ಹೇಳಿದ್ದಾರೆ.

ಬರ ಟಾಸ್ಕ್‌ಫೋರ್ಸ್‌ ಸಭೆ(Drought Taskforce meeting):

ಬರದಿಂದ ತತ್ತರಿಸುವ 223 ತಾಲ್ಲೂಕುಗಳ ಜನತೆಗೆ ಸಹಾಯಹಸ್ತ ಚಾಚಿರುವ ರಾಜ್ಯ ಸರ್ಕಾರ, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಧಿಕಾರಿ (DC) ಮತ್ತು ತಹಶೀಲ್ದಾರ್‌ಗಳ ಖಾತೆಗಳಿಗೆ 870 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಪರಿಹಾರದ ಹಣ ದುರುಪಯೋಗವನ್ನು ತಡೆಗಟ್ಟಲು ಮತ್ತು ಅದನ್ನು ಸರಿಯಾದ ಉದ್ದೇಶಕ್ಕಾಗಿ ಬಳಸಲು ಒಂದು ಉಪಯುಕ್ತ ಕ್ರಮವಾಗಿ 223 ಟಾಸ್ಕ್ ಫೋರ್ಸ್ ಸಮಿತಿಗಳ ರಚನೆಮಾಡಲಗಿದೆ. ಪ್ರಸ್ತುತ ರಾಜ್ಯಾದ್ಯಂತ 431 ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ 236 ಟಾಸ್ಕ್ ಫೋರ್ಸ್ ಸಮಿತಿಯ ಸಭೆಗಳು ನಡೆದಿದೆ ಎಂದು ತಿಳಿಸಿದ್ದಾರೆ.

whatss

ಟ್ಯಾಂಕರ್‌(Tanker) ನಲ್ಲಿ ಕುಡಿಯುವ ನೀರು:

ರಾಜ್ಯದ 156 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಪೂರೈಕೆ. 46 ಗ್ರಾಮಗಳಲ್ಲಿ ಮತ್ತು 46 ನಗರ ವಾರ್ಡ್‌ಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.

ಕಳೆದ ಐದು ವರ್ಷಗಳ ಅಂಕಿಅಂಶಗಳನ್ನು ಪರಿಗಣಿಸಿ, ಮುಖ್ಯಮಂತ್ರಿಯವರು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಭವಿಷ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ನಿರ್ವಹಿಸಲು ಒಂದು ಯೋಜನೆಯನ್ನು ರೂಪಿಸಿದ್ದಾರೆ. ಈ ಯೋಜನೆಯು 782 ಗ್ರಾಮಗಳು ಮತ್ತು 1193 ವಾರ್ಡ್‌ಗಳನ್ನು ಗುರುತಿಸುತ್ತದೆ,

ಮುಖ್ಯಮಂತ್ರಿಗಳು ಗ್ರಾಮೀಣ ಜಲ ಸಂಕಟಕ್ಕೆ ಕೊಳವೆಬಾವಿಗಳ ಮೂಲಕ ಪರಿಹಾರ ಕಂಡುಕೊಳ್ಳಲು ಸೂಚನೆ ನೀಡಿದ್ದಾರೆ. ಕುಡಿಯುವ ನೀರಿನ ಕೊರತೆಯನ್ನು ನಿವಾರಿಸಲು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಹೊಸ ಕೊಳವೆಬಾವಿಗಳನ್ನು ಕೊರೆಯಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಕ್ರಮವು ಗ್ರಾಮೀಣ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ.

ಮೇವು ಭಾವ:

ರಾಜ್ಯ ಸರ್ಕಾರದ ಚಾಣಾಕ್ಷ ಚಳುವಳಿ
ಮೇವು ಭಾವ ರಾಜ್ಯದ ರೈತ ಸಮುದಾಯಕ್ಕೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರ ತ್ವರಿತ ಮತ್ತು ಚಾಣಾಕ್ಷ ಚಳುವಳಿಗಳನ್ನು ಕೈಗೊಂಡಿದೆ.

ಮೊದಲ ಹಂತದಲ್ಲಿ, 2023ರ ನವೆಂಬರ್ ತಿಂಗಳಲ್ಲಿ, 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ. ಈ ಕಿಟ್ ಗಳಲ್ಲಿ ಮೇವಿನ ಬೀಜಗಳು, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಒದಗಿಸಲಾಗಿದೆ. ಈ ಉಪಕ್ರಮವು ರೈತರಿಗೆ ತಮ್ಮದೇ ಆದ ಮೇವಿನ ಬೆಳೆಗಳನ್ನು ಬೆಳೆಯಲು ಮತ್ತು ಮೇವಿನ ಕೊರತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಎರಡನೇ ಹಂತದಲ್ಲಿ, 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಕಿಟ್ ಗಳನ್ನು 2024ರ ಫೆಬ್ರವರಿ ತಿಂಗಳಿನಲ್ಲಿ ವಿತರಿಸಲಾಗುವ ನಿರೀಕ್ಷೆಯಿದೆ.

ಮೂರನೇ ಹಂತದಲ್ಲಿ, ರಾಜ್ಯದ ವಿವಿಧೆಡೆ 3 ಗೂಶಾಲೆಗಳನ್ನು ಸ್ಥಾಪಿಸಲಾಗಿದೆ. ಈ ಗೂಶಾಲೆಗಳು ಅನಾರೋಗ್ಯ, ವೃದ್ಧಾಪ್ಯ ಮತ್ತು ಅನಾಥವಾಗಿರುವ ಜಾನುವಾರುಗಳಿಗೆ ಆಶ್ರಯ ಮತ್ತು ಆಹಾರವನ್ನು ಒದಗಿಸುತ್ತವೆ. ಈ ಉಪಕ್ರಮವು ರೈತರಿಗೆ ತಮ್ಮ ಜಾನುವಾರುಗಳನ್ನು ಉಳಿಸಿಕೊಳ್ಳಲು ಮತ್ತು ಮೇವಿನ ಬೇಡಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇದಲ್ಲದೆ, ಮೇವಿನ ದಾಸ್ತಾನಿಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ರಾಜ್ಯದ ವಿವಿಧೆಡೆ ಮೇವು ಬ್ಯಾಂಕ್ ಗಳನ್ನು ಸ್ಥಾಪಿಸಲಾಗಿದೆ ಮತ್ತು ಮೇವಿನ ದರಗಳನ್ನು ನಿಯಂತ್ರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!