ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿ ಸುರಿಯುತ್ತಿದ್ದು, ಸೋಮವಾರ ನಾಲ್ವರು ಜನರು ಮೃತಪಟ್ಟಿದ್ದಾರೆ. ಭಾರೀ ಮಳೆಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಅವಾಂತರಗಳುಂಟಾಗಿ, ಅನೇಕರು ಮಹಾಮಳೆಗೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ, ಇಂದು ಮತ್ತು ನಾಳೆ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಸತತ ಮಳೆ ಕಾರಣದಿಂದಾಗಿ, ಅಂಗನವಾಡಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ ೨೭ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ.
ಮುಂಗಾರು ಮಳೆ ಕರ್ನಾಟಕದಲ್ಲಿ ತೀವ್ರವಾಗಿ ಆರಂಭವಾದ ನಂತರ, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದೆ. ಕರಾವಳಿ, ಮಲೆನಾಡು ಮತ್ತು ಕೊಡಗು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.
ಮುನ್ನೆಚ್ಚರಿಕೆಯಾಗಿ, ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಮತ್ತು ವಿವಿ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಿಗೆ ಮೇ ೨೬ ಮತ್ತು ೨೭ರಂದು ರಜೆ ಘೋಷಿಸಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.