ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿ ಹಕ್ಕು ವರ್ಗಾವಣೆ ಸೇರಿದಂತೆ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ!
ಸ್ವತ್ತುಗಳ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆ, ಆಡಳಿತದಲ್ಲಿ ಪಾರದರ್ಶಕತೆ, ವೇಗ ತರುವ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ‘ಕಾವೇರಿ– 2’ ತಂತ್ರಾಂಶ (Kaveri-2 software) ಜಾರಿಗೆ ತರಲಾಗಿದೆ. ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಸಂಸ್ಥೆಯ ಸಹಯೋಗದಲ್ಲಿ ಎಲ್ಲಾ 256 ಉಪ ನೋಂದಣಿ ಕಚೇರಿಗಳಲ್ಲಿ ಅಳವಡಿಸಿರುವ ಈ ತಂತ್ರಜ್ಞಾನ ಜನಸ್ನೇಹಿ ತಂತ್ರಜ್ಞಾನವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕಾವೇರಿ-2 ಇ-ಆಸ್ತಿ ತಂತ್ರಾಂಶ (Kaveri-2 e-asset software) ಜಾರಿ :
ಕೃಷಿ ಜಮೀನಿನ ನೋಂದಣಿಗೆ(Agricultural land registration) ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೆನಕ್ಷೆ 11 ಇ-ಸ್ಕೇಚ್ (e-sketch) ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 5, 2016 ರಿಂದ ಸಂಯೋಜನೆ ಮಾಡಲಾಗಿದೆ. ಅಲ್ಲದೇ ಗ್ರಾಪಂ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಜುಲೈ 18, 2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2 ನೊಂದಿಗೆ ಸಂಯೋಜನೆಗೊಳಿಸಲಾಗಿದೆ :
ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜೆಲ್ಲೆಗಳಲ್ಲಿ ಜಾರಿಗೊಂಡಿದ್ದು ಇದೀಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2 ನೊಂದಿಗೆ ಸಂಯೋಜನೆಗೊಂಡಿದ್ದು, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಆಸ್ತಿ ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಬೇಕು.
ಕಾವೇರಿ-2 ಇ-ಆಸ್ತಿ ತಂತ್ರಾಂಶದ ಪ್ರಯೋಜನಗಳು (facilities) :
ಜಿಲ್ಲಾ ವ್ಯಾಪ್ತಿಯ ಎಲ್ಲ ಉಪ ನೋಂದಣಿ ಕಚೇರಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.
ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯಬಹುದು.
ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ತಪ್ಪಿಸಬಹುದು.
ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಬಹುದು ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸಬಹುದು.
ಹಲವು ಸ್ಥಳಗಳಲ್ಲಿ ಕಾವೇರಿ 2.0 ತಂತ್ರಾಂಶ (Kaveri 2.0 software) ನೋಂದಣಿ ಯಶಸ್ವಿಯಾಗಿದೆ :
ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ಚಾಮರಾಜನಗರ, ಚಿತ್ರದುರ್ಗ,ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ 2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 9.9.2024 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿದೆ.
ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ :
ನಗರಾಭಿವೃದ್ಧಿ ಇಲಾಖೆಯು (Urban Development Department) ದಾವಣಗೆರೆಯ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ-2 ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುವುದರಿಂದ ದಾವಣಗೆರೆ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದರು.
ಕಾವೇರಿ-2 ಇ-ಆಸ್ತಿ ತಂತ್ರಾಂಶದಿಂದ ಇ-ಆಸ್ತಿ ದಾಖಲೆ (e-asset documents) ಪಡೆದುಕೊಳ್ಳಬಹುದು :
ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ನೋಂದಣಿ ಮಾಡುತ್ತಿದ್ದು, ಸಾರ್ವಜನಿಕರು ತಮ್ಮ ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ನಮೂದಿಸಿ ಇ-ಆಸ್ತಿ ದಾಖಲೆ ಪಡೆದುಕೊಳ್ಳುವ ಮೂಲಕ ತಂತ್ರಾಂಶದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




