IMG 20240929 WA0001

ಕಟ್ಟಡ ಕಾರ್ಮಿಕರ ಮಕ್ಕಳ ಖಾತೆಗೆ ಸಹಾಯಧನ: ಈ ಕೆಲಸ ಮಾಡಿದ್ರೆ ಮಾತ್ರ ಹಣ ಜಮಾ!

Categories:
WhatsApp Group Telegram Group
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್, ಅವರ ಮಕ್ಕಳಿಗೆ ದೊರೆಯಲಿದೆ ಸಹಾಯಧನ, ಆಧಾರ್ ಜೋಡಣೆಗೆ ಸೂಚನೆ..!

ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಅಸಂಘಟಿತ ವರ್ಗಕ್ಕೆ ಸೇರಿದವರಾಗಿರುತ್ತಾರೆ. ಇಂತಹ ಕಾರ್ಮಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು (government) ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ನಿಯಮಗಳನ್ನು ಜಾರಿಗೆ ತಂದಿದ್ದು, ಇದರಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಬಹಳ ಉಪಯುಕ್ತವಾಗಿದೆ. ಅವರ ಜೀವನ ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ.

ಕಟ್ಟಡ ಮತ್ತು ಇತರ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ :

Educational allowance for children of construction and other workers//: ಹಾಗೆಯೇ ಇದೀಗ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ (education subsidy) ನೀಡಲಾಗುತ್ತದೆ. ಅವರ ಮಕ್ಕಳು ಮುಂದೆ ಉತ್ತಮ ವಿದ್ಯಾಭ್ಯಾಸ ಪಡೆದು ತಮ್ಮ ಜೀವನ
ರೂಪಿಸಿಕೊಳ್ಳಲು ಸಹಾಯ ಮಾಡುತ್ತದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದು ಕೊಳ್ಳೋಣ ಬನ್ನಿ.

ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ :

ಈಗಾಗಲೇ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ಅ.15ರೊಳಗೆ ಬ್ಯಾಂಕ್ ಖಾತೆಗೆ (link bank accounts with Aadhaar card) ಆಧಾರ್ ಜೋಡಣೆ ಮಾಡಿಸುವಂತೆ ತಿಳಿಸಲಾಗಿದೆ. ಹಾಗೆಯೇ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆಯಾಗದ ಕಾರಣ ಶೈಕ್ಷಣಿಕ ಸಹಾಯಧನ ಮಂಜೂರು ಮಾಡಲು ಸಾಧ್ಯವಾಗಿಲ್ಲ. ಅಂಥವರ ಪಟ್ಟಿಯನ್ನು https://karbwwb.karnataka.gov.in ವೆಬ್ಸೈಟ್ (Website) ನಲ್ಲಿ ಪ್ರಕಟಿಸಲಾಗಿದ್ದು, ಫಲಾನುಭವಿಗಳು ಅಕ್ಟೋಬರ್ 15 ರ ಒಳಗೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

2022- 23ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ಮಕ್ಕಳ ಗುರುತಿನ ಚೀಟಿಯನ್ನು ಸಲ್ಲಿಸಬೇಕು :

2022- 23ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಿದವರು ಅ.15ರೊಳಗೆ ಕಾರ್ಮಿಕರ ನಿರೀಕ್ಷಕರು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ಕಚೇರಿಗಳಿಗೆ ತೆರಳಿ ಶೈಕ್ಷಣಿಕ ಧನಸಹಾಯ ಕೋರಲಾದ ಮಕ್ಕಳ ಗುರುತಿನ ಚೀಟಿ(Children’s Identity Card) ಯನ್ನು ಸಲ್ಲಿಸುವಂತೆ ತಿಳಿಸಲಾಗಿದೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories