Breaking News: ಲೋಕಸಭಾ ಚುನಾವಣೆ ಅಧಿಕೃತ ದಿನಾಂಕ ಘೋಷಣೆ! ಇಲ್ಲಿದೆ ಮಾಹಿತಿ

election date in karnataka

ಭಾರತದ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು (ಮಾರ್ಚ್ 16 ರ ಶನಿವಾರದಂದು) ಪ್ರಕಟಿಸಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಿದೆ. ಚುನಾವಣೆ ಹಾಗೂ ಫಲಿತಾಂಶದ ದಿನಾಂಕ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ :

ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದೆ. ಉಪಚುನಾವಣೆ, ವಿಧಾನಸಭೆ ಚುನಾವಣೆ, ಸಾರ್ವತ್ರಿಕ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳ ಎಣಿಕೆ ಜೂನ್ 4ಕ್ಕೆ ನಿಗದಿಯಾಗಿದೆ.
ಪ್ರಸ್ತುತ ಸರ್ಕಾರದ ಅವಧಿ ಜೂನ್ 16ಕ್ಕೆ ಕೊನೆಗೊಳ್ಳುತ್ತಿದೆ.

whatss

ಕರ್ನಾಟಕದಲ್ಲಿ ಎಷ್ಟು ಹಂತಗಳು ಹಾಗೂ ಯಾವ ದಿನಾಂಕ ಚುನಾವಣೆ?:

ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಎಲೆಕ್ಷನ್ ನಡೆಯಲಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26, ಶುಕ್ರವಾರದಂದು ನಡೆಯಲಿದೆ. ಎರಡನೇ ಹಂತದ ಚುನಾವಣೆ ಮೇ 7, ಮಂಗಳವಾರದಂದು ನಡೆಯಲಿದೆ.

ಲೋಕಸಭೆ ಚುನಾವಣೆ ಪೂರ್ಣ ವೇಳಾಪಟ್ಟಿ

ಹಂತ 1- ಏಪ್ರಿಲ್ 19, 2024

ಹಂತ 2- 26 ಏಪ್ರಿಲ್ 2024

ಹಂತ 3-7 ಮೇ 2024

ಹಂತ 4 – 13 ಮೇ 2024

ಹಂತ 5 – 20 ಮೇ 2024

ಹಂತ 6 – 25 ಮೇ 2024

ಹಂತ 7 – 1 ಜೂನ್ 2024
ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್‌ 28 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 08 ಕೊನೆಯ ದಿನವಾಗಿರುತ್ತದೆ.

ಕಳೆದ ಚುನಾವಣೆಯಲ್ಲಿ ಏನಾಗಿತ್ತು?:

2019 ರಲ್ಲಿ, ಲೋಕಸಭೆ ಚುನಾವಣೆ ದಿನಾಂಕಗಳನ್ನು ಮಾರ್ಚ್ 10 ರಂದು ಘೋಷಿಸಲಾಯಿತು. 17 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು ಏಪ್ರಿಲ್ 11 ರಿಂದ ಮೇ 19 ರವರೆಗೆ ಏಳು ಹಂತಗಳಲ್ಲಿ ಮತದಾನವನ್ನು ನಡೆಸಲಾಯಿತು.
ಮೇ 23, 2019 ರಂದು ಪ್ರಕಟವಾದ ಫಲಿತಾಂಶವು 543 ಸದಸ್ಯರ ಲೋಕಸಭೆಯಲ್ಲಿ 303 ಸ್ಥಾನಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿಗೆ ಭರ್ಜರಿ ಜಯವನ್ನು ಕಂಡಿತು .

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!