ಗೃಹಲಕ್ಷ್ಮೀ ಅರ್ಜಿ : ಉಚಿತ 2,000/- ರುಪಾಯಿಗೆ ಅರ್ಜಿ ಹಾಕುವವರಿಗೆ ಎಚ್ಚರಿಕೆ. ಈ ತಪ್ಪು ಮಾಡಬೇಡಿ..!

Picsart 23 06 29 07 42 44 027 scaled

ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಆಪ್ ಬಗ್ಗೆ ಮಾಹಿತಿ ಕೊಡಲಾಗುತ್ತದೆ. nಕರ್ನಾಟಕದ ಜನತೆ ಕಾತರದಿಂದ ನಿರೀಕ್ಷಿಸುತ್ತಿರುವ ಗೃಹಲಕ್ಷ್ಮಿ ಯೋಜನೆ ಕುರಿತು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಚರ್ಚೆಯಾಗಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ಹೇಳಿದರು. ಸರ್ಕಾರದಿಂದ ಗೃಹಲಕ್ಷ್ಮಿ ಬಿಡುಗಡೆಯ ಮುನ್ನ ನಕಲಿ ಆಪ್ ಗಳ ಹಾವಳಿ ಹೆಚ್ಚಾಗಿದೆ. ಹಾಗಾಗಿ ಗೃಹಲಕ್ಷ್ಮಿ ಅರ್ಜಿ ಮತ್ತು ಆಪ್ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆ.

ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸಲು ಈಗಾಗಲೇ ಮೊಬೈಲ್ ಆಪ್ ಸಿದ್ದ ಪಡಿಸಿಕೊಂಡಿದೆ. ಜೂನ್ 28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಆಪ್ ನ ಬಗ್ಗೆ ಮಾಹಿತಿ ನೀಡಲಾಗಿದ್ದು. ಸಿಎಂ ಸಿದ್ದರಾಮಯ್ಯ ಅವರ ಒಪ್ಪಿಗೆ ನೀಡಿದ ನಂತರ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಲಾಗುತ್ತದೆ ಮತ್ತು ಆದಷ್ಟು ಬೇಗನೆ ಅರ್ಜಿ ಸ್ವೀಕಾರ ಮಾಡಲು ಸರ್ಕಾರ ಮುಂದಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಆಪ್ ಬಿಡುಗಡೆಯ ಮುನ್ನವೇ ಫೇಕ್ ಅಪ್ಲಿಕೇಶನ್ ಗಳ ಹಾವಳಿ ಹೆಚ್ಚಾಗಿದೆ. ಈಗಾಗಲೇ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಗೃಹಲಕ್ಷ್ಮಿ ಹೆಸರಿನ ಹಲವು ನಕಲಿ ಆಪ್ ಗಳು ಬಿಡುಗಡೆಯಾದ್ದು ಫಲಾನುಭವಿಗಳ ಖಾಸಗಿ ಮಾಹಿತಿಗೆ ಕಣ್ಣ ಹಾಕಲು ಕಾದು ಕುಳಿತಿವೆ. ಈ ನಕಲಿ ಆಪ್ಗಳನ್ನ ನೀವೇನಾದರೂ ಡೌನ್ಲೋಡ್ ಮಾಡಿಕೊಂಡರೆ ನಿಮ್ಮ ವೈಯಕ್ತಿಕ ಮಾಹಿತಿ, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ವಾಟ್ಸಪ್ ನಂಬರ್ ಸೈಬರ್ ಕಳ್ಳರ ಕೈಗೆ ಸೇರಲಿದೆ, ಮತ್ತು ನಿಮ್ಮ ಖಾಸಗಿ ಫೋಟೋಗಳು ವಿಡಿಯೋಗಳು ಮತ್ತು ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಾರೆ.

ನಕಲಿ ಆಪ್ ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತದೆ?

ನೀಡ್ಸ್ ಆಫ್ ಪಬ್ಲಿಕ್ ತಂಡ ಗಮನಿಸಿದಂತೆ ಈಗಾಗಲೇ 8 ಕ್ಕೂ ಹೆಚ್ಚು ನಕಲಿ ಆಪ್ ಬಿಡುಗಡೆಯಾಗಿವೆ. ಈ ಕೆಳಗೆ ಕೊಡಲಾದ ನಕಲಿ ಆಪ್ ಗಳನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ನಿಮ್ಮ ಬ್ಯಾಂಕ್ ಖಾತೆಯ ವಿವರ ನಮೂದಿಸಿದರೆ, ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಸೈಬರ್ ಖದೀಮರು ಎಗರಿಸುವ ಸಾಧ್ಯತೆ ಇದೆ. ಮತ್ತು ನಿಮ್ಮ ಮೊಬೈಲ್ ನಲ್ಲಿ ಇರುವ ಖಾಸಗಿ ಫೋಟೋಗಳು ವಿಡಿಯೋಗಳು ಲೀಕ್ ಆಗುವ ಸಾಧ್ಯತೆ ಇದೆ. ಕೆಲವು ಸೈಬರ್ ಕಳ್ಳರು ಮತ್ತು ಕಿಡಿಗೇಡಿಗಳು ಈ ನಕಲಿ ಆಪ್ ಗಳ ಹೆಸರನ್ನು ಗೃಹಲಕ್ಷ್ಮಿ ಯೋಜನೆ ಎಂದು ಕನ್ನಡದಲ್ಲಿ ಹಾಕಿಕೊಂಡಿದ್ದಾರೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ ಪಲಾನುಭವಿಗಳು ಯಾವುದೇ ಕಾರಣಕ್ಕೂ ಈ ನಕಲಿ ಹಾಕುವುದನ್ನು ಡೌನ್ಲೋಡ್ ಮಾಡಿಕೊಳ್ಳುವುದಾಗಲಿ ಮತ್ತು ಇನ್ಸ್ಟಾಲ್ ಮಾಡಿ ತೆರೆಯುವುದಾಗಲಿ ಮಾಡಬಾರದು.

WhatsApp Image 2023 06 28 at 6.46.26 PM

ಗೃಹಲಕ್ಷ್ಮಿ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು?

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕರಿಸಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತು ಅಧಿಕೃತವಾಗಿ ಶೀಘ್ರದಲ್ಲೆ ಅರ್ಜಿ ಚಾಲನೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಸರ್ಕಾರದಿಂದ ಅಧಿಕೃತವಾಗಿ ಆದೇಶ ಬರುವವರೆಗೆ ಸಾಮಾಜಿಕ ಮಾಧ್ಯಮಗಳಲ್ಲಿ, ಫೇಸ್ಬುಕ್ ವಾಟ್ಸಪ್ ಇನ್ಸ್ಟಾಗ್ರಾಮ್ ಟೆಲಿಗ್ರಾಂನಲ್ಲಿ ಬರುವ ಯಾವುದೇ ನಕಲಿ ಆಪ್ ಲಿಂಕ್ ಗಳನ್ನು ಕ್ಲಿಕ್ ಮಾಡಬೇಡಿ.

app download

ಸರ್ಕಾರದ ಎಲ್ಲಾ ಯೋಜನೆಗಳ ಅಧಿಕೃತ ಮಾಹಿತಿಗೆ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗೆ ಸೇರಿಕೊಳ್ಳಿ ಮತ್ತು ನಕಲಿ ಆಪ್, ಸೈಬರ್ ಕಳ್ಳರಿಂದ ದೂರವಿರಿ. ಮತ್ತು ನಮ್ಮ ನೀಡ್ಸ್ ಆಫ್ ಪಬ್ಲಿಕ್ ಅಧಿಕೃತ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

 

One thought on “ಗೃಹಲಕ್ಷ್ಮೀ ಅರ್ಜಿ : ಉಚಿತ 2,000/- ರುಪಾಯಿಗೆ ಅರ್ಜಿ ಹಾಕುವವರಿಗೆ ಎಚ್ಚರಿಕೆ. ಈ ತಪ್ಪು ಮಾಡಬೇಡಿ..!

Leave a Reply

Your email address will not be published. Required fields are marked *