Home » ಸುದ್ದಿಗಳು » ರೈತರ ಸಾಲ ಮನ್ನಾ : ಮತ್ತೇ ಅಧಿಕಾರಕ್ಕೆ ಬಂದರೆ 3 ಲಕ್ಷದವರೆಗೆ ಸಾಲ ಮನ್ನಾ : ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ರೈತರ ಸಾಲ ಮನ್ನಾ : ಮತ್ತೇ ಅಧಿಕಾರಕ್ಕೆ ಬಂದರೆ 3 ಲಕ್ಷದವರೆಗೆ ಸಾಲ ಮನ್ನಾ : ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

Telegram Group

ಎಲ್ಲರಿಗೂ ನಮಸ್ಕಾರ. ಇಂದಿನ ಲೇಖನದಲ್ಲಿ  ರೈತರು ಬ್ಯಾಂಕ್ಗಳಲ್ಲಿ ಸಾಲ ಮಾಡಿದ್ದನ್ನು ಹೇಗೆ ಮನ್ನಾ ಮಾಡಲಾಗುತ್ತಿದೆ ಎಂಬುದರ ಬಗ್ಗೆ ತಿಳಿಸಿಕೊಡಲಾಗುವುದು. ಬಸವರಾಜ್ ಬೊಮ್ಮಾಯಿ ಅವರು ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದಾರೆ. ಹೌದು ಬ್ಯಾಂಕ್ಗಳಲ್ಲಿ ಸಾಲ ಮಾಡಿರುವ ರೈತರಿಗೆ ಇದು ತುಂಬಾ ಮುಖ್ಯವಾದ ಮಾಹಿತಿ ಆಗಿದೆ. ಹಾಗೂ ಹಲವು ಯೋಜನೆಗಳ ಬಗ್ಗೆ ಬಸವರಾಜ್ ಬೊಮ್ಮಾಯಿ ಅವರು ರೈತ ಸಮುದಾಯಕ್ಕೆ ಪ್ರಮುಖವಾದ ಮಾಹಿತಿಯನ್ನು ತಿಳಿಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಬ್ಯಾಂಕ್ ಗಳು ರೈತರ ಆಸ್ತಿಯನ್ನು ಜಪ್ತಿ ಮಾಡುವುದು ನಿಷೇಧ ಎಂದು  ಘೋಷಣೆ ಮಾಡಿದ್ದಾರೆ. ಹೌದು ರೈತರು ತೊಂದರೆಯಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್ ಗಳು ಅವರ ಅಸ್ತಿಜಪ್ತಿ ಮಾಡುತ್ತಿದ್ದು ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬ್ಯಾಂಕ್‌ಗಳು ಅವರ ಆಸ್ತಿ ಜಪ್ತಿ, ನೋಟೀಸ್ ಜಾರಿ ಮಾಡುವ ಕೆಲಸ ಮಾಡುತ್ತಿದ್ದು, ಇದಕ್ಕೆ ಅಂತ್ಯ ಹಾಡಲು ಕಾನೂನಿನ ತಿದ್ದುಪಡಿ ತಂದು ರೈತರ ಆಸ್ತಿ ಜಪ್ತಿ ಮಾಡುವುದನ್ನು ಸಂಪೂರ್ಣ ನಿಷೇಧ ಮಾಡುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.

ಅವರು  ಸಿಎಂ ಆದ ವೇಳೆ ರೈತರ ಮಕ್ಕಳಿಗೆ ವಿದ್ಯಾನಿಧಿ’ ಯೋಜನೆ ರೂಪಿಸಲಾಯಿತು. 14ಲಕ್ಷ ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗಿದೆ. ರೈತ ಕೂಲಿಕಾರ ಮಕ್ಕಳಿಗೆ, ನೇಕಾರರಿಗೆ, ಮೀನುಗಾರರಿಗೆ, ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಯೋಜನೆ ವಿಸ್ತರಣೆಯಾಗಿದೆ’ ಎಂದರು.

“ನೀರಾವರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಸರಕಾರ ರೂಪಿಸಿದೆ. 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ನೀಡಿದರೂ ಅತಿವೃಷ್ಟಿ, ಅನಾವೃಷ್ಟಿ ಕಾರಣದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ವರ್ಷ ಉತ್ತಮ ಮಳೆಯಾಗಿದೆ. ಕೆರೆ ಕಟ್ಟೆ ತುಂಬಿ ನೀರು ಇನ್ನು 2-3 ವರ್ಷಗಳಿಗೆ ತೊಂದರೆ ಇಲ್ಲ. ಕೆಲವೆಡೆ ಪ್ರವಾಹವಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ತಿಳಿಸಿದರು.

ಬದ್ಧತೆಯಿಂದ ಕೆಲಸ ಮಾಡುವ ಕ್ರಿಯಾಶಕ್ತಿಯೇ ಭಕ್ತಿಯ ಶಕ್ತಿ. ಗುರುಗಳಿಂದ ಪ್ರೇರಣೆ ಪಡೆದು ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ನಮ್ಮ ಸರಕಾರ ಪ್ರಯತ್ನ ಮಾಡಲಾಗುತ್ತಿದೆ. ನಾನು ಸಿಎಂ ಆದ ವೇಳೆ ರೈತರ ಮಕ್ಕಳಿಗೆ ವಿದ್ಯಾನಿಧಿ’ ಯೋಜನೆ ರೂಪಿಸಲಾಯಿತು. 14ಲಕ್ಷ ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಲಾಗಿದೆ. ರೈತ ಕೂಲಿಕಾರ ಮಕ್ಕಳಗೆ, ನೇಕಾರರಿಗೆ, ಮೀನುಗಾರರಿಗೆ, ರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ಯೋಜನೆ ವಿಸ್ತರಣೆಯಾಗಿದೆ’ ಎಂದರು.

ಹಾಗಾಗಿ ರೈತ ಬಾಂಧವರು ತಮ್ಮ ಆಸ್ತಿಪಾಸ್ತಿಗಳ ಮೇಲೆ ಸಾಲ ಮಾಡಿದ್ದಲ್ಲಿ ಇನ್ನು ಮುಂದೆ ಭಯಪಡುವಂತಿಲ್ಲ. ಬ್ಯಾಂಕ್ ಗಳಿಂದ ಆಸ್ತಿ ಜಪ್ತಿಯಾಗುವ ತೊಂದರೆ ನಿಮಗಿರುವುದಿಲ್ಲ. ಇಂತಹ ಮುಖ್ಯವಾದ ಮಾಹಿತಿಯನ್ನು ನಿಮ್ಮ ಎಲ್ಲಾ ರೈತ ಮಿತ್ರರಿಗೆ ಶೇರ್ ಮಾಡಿ. ಧನ್ಯವಾದಗಳು.

About

Lingaraj Ramapur BCA,MCA, MA(Journalism)

One thought on “ರೈತರ ಸಾಲ ಮನ್ನಾ : ಮತ್ತೇ ಅಧಿಕಾರಕ್ಕೆ ಬಂದರೆ 3 ಲಕ್ಷದವರೆಗೆ ಸಾಲ ಮನ್ನಾ : ಸಿ ಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

Leave a Reply

Your email address will not be published. Required fields are marked *

error: Content is protected !!