ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ರಾಜ್ಯದ ರೈತರು ಎಫ್ ಐ ಡಿ (FID)(unique farmer ID) ಮಾಡಿಸಿಕೊಳ್ಳುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ.ನೀವೇನಾದರೂ ರೈತರಾಗಿದ್ದರೆ ಮೊದಲು ನಿಮ್ಮ ಬಳಿ FID ಆಗಿದೆಯೋ ಇಲ್ಲವೋ ಎಂದು ಪರಿಶೀಲಿಸಿಕೊಳ್ಳಿ. ಇದು ಇದ್ದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗುತ್ತದೆ. ಮತ್ತು ಸರ್ಕಾರದ ಸೌಲಭ್ಯವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಇಲ್ಲದಿದಲ್ಲಿ ನಿಮಗೆ ಬ್ಯಾಂಕ್ ಖಾತೆಗೆ ಯಾವುದೇ ಹಣ ಜಮಾ ಆಗುವುದಿಲ್ಲ ಮತ್ತು ನೀವು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳದೇ ವಂಚಿತರಾಗುತ್ತಿರಿ ಎಂದು ತಿಳಿದಿರಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
FID ಎಂದರೇನು?:
ಮೊದಲನೆಯದಾಗಿ, ಏನಿದು FID ಎಂದು ಯೋಚನೆ ಮಾಡುತ್ತಿದ್ದಿರಿಯೆ, ಪ್ರತಿ ಜನಸಾಮಾನ್ಯರಿಗೂ ಹೇಗೆ ಆಧಾರ್ ಕಾರ್ಡ್ ಗುರುತಿನ ಚೀಟಿ ಅಂಥಾ ಇರುತ್ತದೆಯೋ ಹಾಗೆ ಪ್ರತಿ ರೈತನಿಗೂ ಈ FID ಎಂಬುದು ಗುರುತಿನ ಚೀಟಿ ಆಗಿರುತ್ತದೆ. ಇದರ ಮೂಲಕ ರೈತರು ಸರ್ಕಾರದ ಪ್ರಯೋಜನಗಳನ್ನು ಪಡೆಯಬಹುದು.
ಏನಾದರೂ ನೀವು FID ಗೆ ನೋಂದಾಯಿತ ಆಗದ್ದಿದರೆ ನೀವು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳದೇ ವಂಚಿತರಾಗುತ್ತಿರಿ.
ಕೃಷಿ ಇಲಾಖೆಗೆ ಸಂಬಂಧಿಸಿದ ಮತ್ತು ಕೃಷಿಗೆ ಸಬಂದ ಪಟ್ಟ ಮಾಹಿತಿಗೆ Farmers Registration and unified beneficiary information systems (FRUITS ) ಇದರ ಅಡಿಯಲ್ಲಿ ರಿಜಿಸ್ಟ್ರೇಷನ್ ಮಾಡಿಸುವುದು ರೈತರಿಗೆ ಕಡ್ಡಾಯವಾಗಿದೆ. ಅಂದರೆ FID ಮತ್ತು FRUITS ರೆಜಿಸ್ಟ್ರೇಷನ್ ಆಗಲೇ ಬೇಕು.
ಈ FID ಏಕೆ ಕಡ್ಡಾಯ :
ಕೃಷಿಕ ಈ ಒಂದು ಪೋರ್ಟಲ್ ಅಲ್ಲಿ ತನ್ನ ಕೃಷಿ ಜಮೀನಿನ ವಿವರಗಳನ್ನು ನೋಂದಾಯಿಸಿದರೆ ರೈತನಿಗೆ
FID ನಂಬರ್ ಸಿಗುತ್ತದೆ. ಮತ್ತು ಸರ್ಕಾರ ನೀಡುವ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಆದರಿಂದ FID ಮಾಡದೆ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ FID ಮಾಡಿಸಬೇಕಾಗುತ್ತದೆ.
ಇನ್ನು ಇದರ ಬಗ್ಗೆ ಹೇಳಬೇಕೆಂದರೆ ಕಲಬುರಗಿ ಜಿಲ್ಲೆಯಲ್ಲಿ FID ಹೊಂದಿದ ರೈತರಿಗೆ ಮಾತ್ರ ಬರ ಪರಿಹಾರ ಮೊತ್ತ ಜಮಾ ಆಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಇನ್ನೂ ಎಫ್‌ಐಡಿ(FID) ಮಾಡಿಸದೇ ಇರುವ ರೈತರಿಗೆ ಬರ ಪರಿಹಾರ, ತೊಗರಿ ನೆಟೆ ರೋಗ ಪರಿಹಾರ ಮೊತ್ತ ಬರುವುದಿಲ್ಲ ಎಂದು ತಿಳಿಸಿದ್ದಾರೆ. ಏಕೆಂದರೆ ಈ ಹಣವನ್ನು ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಆದರಿಂದ
FID ಮಾಡಿಸುವುದು ಕಡ್ಡಾಯವಾಗಿದೆ.
ಇನ್ನೂ ವರೆಗೂ ಎಫ್‌ಐಡಿ (FID)ಮಾಡಿಸದೇ ಇರುವ ಜಿಲ್ಲೆಯ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರ ಅಥವಾ ಹೊಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆ ಕಚೇರಿಗೆ ತಮ್ಮ ಆಧಾರ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್, ತಮ್ಮ ಮೂಬೈಲ್ ಸಂಖ್ಯೆಯೊಂದಿಗೆ ಹೋಗಿ ತುರ್ತಾಗಿ ಎಫ್‌ಐಡಿ (FID) ಮಾಡಿಸಿಕೊಳ್ಳಿ. ಇಲ್ಲದಿದ್ದರೆ ಸರ್ಕಾರದಿಂದ ನೀಡಲ್ಪಡುವ ಪರಿಹಾರದ ಮೊತ್ತದಿಂದ ರೈತರು ವಂಚಿತರಾಗಬೇಕಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು
ಇದನ್ನೂ ಓದಿ: Best Mobiles – 10 ಸಾವಿರಕ್ಕಿಂತ ಕಮ್ಮಿ ಬೆಲೆಯಲ್ಲಿ ಬೆಂಕಿ ಮೊಬೈಲ್ ಫೋನ್ ಗಳು, 50 ಎಂಪಿ ಕ್ಯಾಮೆರಾ 5,000mAh ಬ್ಯಾಟರಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







