ಕಾರ್ಮಿಕ ಕಾರ್ಡ್ ಇದ್ದವರಿಗೆ 2 ಲಕ್ಷ ರೂಪಾಯಿ ಸಹಾಯಧನ : ಅರ್ಜಿ ಸಲ್ಲಿಸುವ ಸುಲಭ ವಿಧಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕ ಕಾರ್ಡ್ ಹೊಂದಿರುವವರಿಗೆ ವೈದ್ಯಕೀಯ ಸೌಲಭ್ಯದ ಕಡೆಯಿಂದ 2ಲಕ್ಷ ರೂಗಳ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕಾರ್ಮಿಕ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಆಹ್ವಾನಿಸಲಾಗಿದೆ. ಯಾವ ಯೋಜನೆಗಳಿಂದ ಎಷ್ಟು ಹಣ ದೊರೆಯುತ್ತದೆ?, ಈ ವೈದ್ಯಕೀಯ ಸೌಲಭ್ಯದ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಯಾವ ದಾಖಲೆಗಳು ಬೇಕಾಗುತ್ತವೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ

ಕಾರ್ಮಿಕ ಕಾರ್ಡ್(Labour Card) ಇದ್ದವರಿಗೆ 2 ಲಕ್ಷ ವೈದ್ಯಕೀಯ ಸಹಾಯಧನ (Medical Assistance) 2023:

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ನೋಂದಾಯಿತ ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ, ಮಂಡಳಿಯ ವತಿಯಿಂದ “ಕಾರ್ಮಿಕ ಚಿಕಿತ್ಸಾ ಭಾಗ್ಯ” ಮತ್ತು “ಕಾರ್ಮಿಕ ಆರೋಗ್ಯ ಭಾಗ್ಯ” ಯೋಜನೆಗಳಡಿಯಲ್ಲಿ ವೈದ್ಯಕೀಯ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಈ ವೈದ್ಯಕೀಯ ಸಹಾಯಧನವನ್ನು ಪಡೆಯಲು ಈಗ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

Untitled 1 scaled

“ಕಾರ್ಮಿಕ ಚಿಕಿತ್ಸಾ ಭಾಗ್ಯ” ಮತ್ತು “ಕಾರ್ಮಿಕ ಆರೋಗ್ಯ ಭಾಗ್ಯ” ಯೋಜನೆಗಳಡಿ ಯಾವ ಚಿಕಿತ್ಸೆಗಳಿಗೆ ಎಷ್ಟು ಹಣ ದೊರೆಯುತ್ತದೆ?:

ಕಾರ್ಮಿಕ ಚಿಕಿತ್ಸಾ ಭಾಗ್ಯ: ಹೃದ್ರೋಗ, ಕಿಡ್ನಿ ಜೋಡಣಿ, ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ಕಣ್ಣಿನ ಶಸ್ತ್ರಚಿಕಿತ್ಸೆ ಮುಂತಾದ ಪ್ರಮುಖ ಖಾಯಿಲೆಗಳ ಚಿಕಿತ್ಸೆಗೆ ರೂ. 2,00,000/-ದವರೆಗೆ ಸಹಾಯಧನ ನೀಡಲಾಗುತ್ತದೆ.

ಕಾರ್ಮಿಕ ಆರೋಗ್ಯ ಭಾಗ್ಯ: ನೋಂದಾಯಿತ ಫಲಾನುಭವಿ ಹಾಗೂ ಅವರ ಅವಲಂಬಿತರಿಗೆ ರೂ. 300/- ರಿಂದ 20.000/- ಗಳವರೆಗೆ ಸಹಾಯಧನ ನೀಡಲಾಗುತ್ತದೆ.

ಈ ಸಹಾಯಧನವನ್ನು ಪಡೆಯಲು ಬೇಕಾದ ಅರ್ಹತೆಗಳು ಮತ್ತು ವಿಧಾನ :

  1. ಮಂಡಯಲ್ಲಿ ನೋಂದಾಯಿತರಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲರಬೇಕು.
  2. ಫಲಾನುಭವಿಯು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ (ಶೆಡ್ಯೂಲ್ 1 ಗೆ ಸೇರಿದ) ಕನಿಷ್ಠ 2 ದಿನ ಒಳರೋಗಿಯಾಗಿ ದಾಖಲಾಗಿರುವ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.
  3. ಆಸ್ಪತ್ರೆಯಿಂದ ಬಿಡುಗಡೆಯಾದ 6 ತಿಂಗಳ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.( ಕಾರ್ಮಿಕ ಚಿಕಿತ್ಸಾ ಭಾಗ್ಯ )
  4. ಆಸ್ಪತ್ರೆಗೆ ದಾಖಲಾದ ಆರು ತಿಂಗಳ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ( ಕಾರ್ಮಿಕ ಆರೋಗ್ಯ ಭಾಗ್ಯ)

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್(ಲೇಬರ್ ಕಾರ್ಡ್).
  2. ರೇಷನ್ ಕಾರ್ಡ್ ಮತ್ತು ಬ್ಯಾಂಕ್‌ ಪಾಸ್‌ ಪುಸ್ತಕದ ಪ್ರತಿ.
  3. ಉದ್ಯೋಗ ದೃಢೀಕರಣ ಪತ್ರ/ಸ್ವಯಂ ದೃಢೀಕರಣ ಪತ್ರ
  4. ಆಸ್ಪತ್ರೆಯ ಬಿಲ್ಲುಗಳು(ದಾಖಲಾತಿ ಮತ್ತು ಡಿಸ್ಟಾರ್ಟ್ ದಿನಾಂಕ ಹಾಗೂ ಚಿಕಿತ್ಸಾ ವಿವರಗಳನ್ನು ಒಳಗೊಂಡಿರಬೇಕು ).
  5. ಬಿಡುಗಡೆ ಪ್ರಮಾಣ ಪತ್ರ
  6. ನಮೂನೆ 22 ಎ ರಲ್ಲಿ ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ( ಕಾರ್ಮಿಕ ಚಿಕಿತ್ಸಾ ಭಾಗ್ಯ ).

telee

ವೈದ್ಯಕೀಯ ಸಹಾಯಧನ 

ಕಾರ್ಮಿಕ ಆರೋಗ್ಯ ಭಾಗ್ಯ:

ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಗಳು ನೋಂದಾಯಿತ ಫಲಾನುಭವಿ ಮತ್ತು ಅವನ ಅವಲಂಬಿತರು ರಾಜ್ಯ ಸರ್ಕಾರದ ಯಾವುದೇ ವಿಮೆ ಯೋಜನೆ ಅಡಿಯಲ್ಲಿ ಗುರುತಿಸಲ್ಪಟ್ಟ ಆಸ್ಪತ್ರೆಗಳಲ್ಲಿ ಅಥವಾ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳಲ್ಲಿ ನಮೂದಿಸಿರುವ ಆಸ್ವತ್ರೆಗಳಲ್ಲಿ ದಾಖಲಾದಾಗ ವೈದ್ಯಕೀಯ ಸಹಾಯಧನವನ್ನು ನೀಡಲಾಗುತ್ತದೆ.  ಪ್ರತಿ ದಿನಕ್ಕೆ 300 ರೂ ನಂತೆ ಗರಿಷ್ಠ ರೂ.20,000/- ನೀಡಲಾಗುತ್ತದೆ.

ಕಾರ್ಮಿಕ ಚಿಕಿತ್ಸಾ ಭಾಗ್ಯ :

ನೋಂದಾಯಿತ ಕಟ್ಟಡ ಕಾರ್ಮಿಕರ ಹಾಗು ಅವನ / ಅವಳ ಅವಲಂಭಿತರ ಪ್ರಮುಖ ಖಾಯಿಲೆಗಳ ವೆಚ್ಚಕ್ಕಾಗಿ, ವೈದ್ಯಕೀಯ ವೆಚ್ಚದ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಪ್ರಮುಖ ಖಾಯಿಲೆ ಎಂದರೆ:- ಹೃದ್ರೋಗ, ಕೋವಿಡ್-19, ಕಿಡ್ನಿ ಜೋಡಣೆ, ಕ್ಯಾನ್ಸ್ ರ್ ಶಸ್ತ್ರಚಿಕಿತ್ಸೆ, ಕಣ್ಣಿನ ಶಸ್ತ್ರಚಿಕಿತ್ಸೆ, ಮೂಳೆ ಶಸ್ತ್ರಚಿಕಿತ್ಸೆ, ಗರ್ಭಕೋಶ ಶಸ್ತ್ರಚಿಕಿತ್ಸೆ, ಅಸ್ತಮ ಚಿಕಿತ್ಸೆ, ಗರ್ಭಪಾತ ಪ್ರಕರಣಗಳು, ಪಿತ್ತಕೋಶದ ತೊಂದರೆಗೆ ಸಂಬಂಧಿತ ಚಿಕಿತ್ಸೆ, ಮೂತ್ರ ಪಿಂಡದಲ್ಲಿನ ಕಲ್ಲು ತೆಗೆಯುವ ಚಿಕಿತ್ಸೆ,ಮೆದುಳಿನ ರಕ್ತಸ್ರಾವದ ಚಿಕಿತ್ಸೆ, ಅಲ್ಸ್ ರ್ ಚಿಕಿತ್ಸೆ, ಡಯಾಲಿಸಿಸ್ ಚಿಕಿತ್ಸೆ, ಕಿಡ್ನಿ ಶಸ್ತ್ರಚಿಕಿತ್ಸೆ, ಇಎನ್.ಟಿ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ನರರೋಗ ಶಸ್ತ್ರಚಿಕಿತ್ಸೆ, ವ್ಯಾಸ್ಕ್ಯೂಲರ್ ಶಸ್ತ್ರಚಿಕಿತ್ಸೆ, ಅನ್ನನಾಳದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಕರುಳಿನ ಶಸ್ತ್ರಚಿಕಿತ್ಸೆ, ಸ್ತನ ಸಂಬಂಧಿತ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ, ಹರ್ನಿಯ ಶಸ್ತ್ರಚಿಕಿತ್ಸೆ, ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ (ಮಂಡಳಿಯಿಂದ ಪರಿಗಣಿಸಲ್ಪಡುವ ಇತರೆ ಪ್ರಮುಖ ಖಾಯಿಲೆಗಳು ಮತ್ತು ಔದ್ಯೋಗಿಕ ಖಾಯಿಲೆಗಳು )

app download scaled

ಅರ್ಜಿಯನ್ನು ಸಲ್ಲಿಸುವ ವಿಧಾನ:

ಹಂತ 1: ಅರ್ಜಿದಾರರು ಅರ್ಜಿಯನ್ನು ಸೇವಾ ಸಿಂಧುವಿಗೆ ತೆರಳಿ ಸಲ್ಲಿಸಬೇಕಾಗುತ್ತದೆ.
ಹಂತ 2: ನಂತರ ನಿಮ್ಮ ಹತ್ತಿರದ  ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಗೆ ಏನು ನೀಡಬೇಕು.
ಹಂತ 3: ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆಯನ್ನು ಮಾಡುತ್ತಾರೆ.

ಹೀಗೆ ಕಾರ್ಮಿಕ ಕಾರ್ಡನ್ನು ಹೊಂದಿದವರು ವೈದ್ಯಕೀಯ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಈ ಲೇಖನ  ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮತ್ತು ಮಿತ್ರರಿಗೆ, ಬಂಧುಗಳಿಗೆ ಹಾಗೂ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *