Gruhalakshmi – ₹2000 ರೂಪಾಯಿ ವರ್ಗಾವಣೆಗೆ ಹೊಸ ದಿನಾಂಕ ನಿಗದಿ, ಯಾವ ಖಾತೆಗೆ ಹಣ ಬರುತ್ತೆ ಅಂತ ಹೀಗೆ ಚೆಕ್ ಮಾಡಿ, ಇಲ್ಲಿದೆ ಡೈರೆಕ್ಟ್ ಲಿಂಕ್!!

WhatsApp Image 2023 08 06 at 6.10.13 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಬ್ಯಾಂಕ್ ಖಾತೆಗೆ ಬರುತ್ತದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವು ಕೆಲವೇ ನಿಮಿಷಗಳಲ್ಲಿ, ಮನೆಯಲ್ಲಿ ಕುಳಿತುಕೊಂಡು ನಿಮ್ಮ ಫೋನಿನ ಸಹಾಯದಿಂದ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಬ್ಯಾಂಕ್ ಖಾತೆಗೆ ಬರುತ್ತದೆ ಎನ್ನುವುದನ್ನು ಈಗ ತಿಳಿದುಕೊಳ್ಳಬಹುದಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗಳಿಗೆ ಬರಲಿದೆ. ನಿಮಗೇನಾದರೂ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಖಾತೆಗೆ ಬರುತ್ತದೆ ಎಂಬುವ ಅನುಮಾನವಿದ್ದರೆ ಕೂಡಲೇ ಅದನ್ನು ತಿಳಿದುಕೊಳ್ಳಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ :

ರಾಜ್ಯ ಸರ್ಕಾರ ಈ ಹಿಂದೆ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್​ 15ರ ಸ್ವಾತಂತ್ರ್ಯ ದಿನದ ಮರುದಿನ ಅಂದರೇ, ಆಗಸ್ಟ್​ 16ರಂದು ಚಾಲನೆ ನೀಡುವುದಾಗಿ ತಿಳಿಸಿತ್ತು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಆಗಸ್ಟ್​ 16ರ ಒಳಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮೊದಲ ತಿಂಗಳ 2,000 ರೂಪಾಯಿಗಳನ್ನು ಜಮಾ ಮಾಡೋದಾಗಿ ಹೇಳಿದ್ದರು. ಆದರೆ, ಗೃಹಲಕ್ಷ್ಮಿ ಯೋಜನೆಯನ್ನು ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜ್ಯಕ್ಕೆ ಕರೆಯಿಸಿ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಆದ್ದರಿಂದ ಯೋಜನೆಯ ಜಾರಿ ಒಂದು 2 ದಿನ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಆ.18 ಅಥವಾ 20ರಂದು ಡಿ ಬಿ ಟಿ ಮುಖಾಂತರ ಮನೆಯ ಯಜಮಾನಿ ಗೆ ಹಣ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಅದೇನೆ ಆಗಲಿ ಹಣ ಹಾಕುವುದಂತು ಕಡ್ಡಾಯ. ಆದ್ದರಿಂದ ನೀವು ಯಾವ ಖಾತೆಗೆ ಹಣ ಬರುತ್ತದೆ ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿapp download

ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣವು ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯಾ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ ಆದ್ದರಿಂದ ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ. ನಿಮ್ಮ ಆಧಾರ್ ಕಾರ್ಡಿಗೆ ಮ್ಯಾಪಿಂಗ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ. ನಿಮಗೇನಾದರೂ ಇನ್ನೂ ಇದರ ಬಗ್ಗೆ ಸಂಶಯವಿದ್ದಲ್ಲಿ, ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದನ್ನು ನೀವೇ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ :

ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ  

https://ahara.kar.nic.in/Home/Eservices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.

h1

ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.

h2

ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ  ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.  h3

ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವವರ ಸದಸ್ಯರ ಸಂಖ್ಯೆ, ಮುಖ್ಯಸ್ಥರ ಹೆಸರು, ಸದಸ್ಯರ ಯುಐಡಿ,   ಎಷ್ಟು ಹಣ ಜಮಾ ಆಗುತ್ತದೆ ಅಥವಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.

ಹೀಗೆ ನೀವು ಅನ್ನಭಾಗ್ಯ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.

tel share transformed

ಹಣ ಬಂದ ತಕ್ಷಣ ಮೆಸೇಜ್ ಕೂಡ ಬರಲಿದೆ :

ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಿದ ತಕ್ಷಣ, ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇದ್ದ ಮೊಬೈಲ್ ನಂಬರಿಗೆ ಹಣ ಜಮಾ ಆಗಿರುವುದರ ಬಗ್ಗೆ ಮೆಸೇಜ್ ಕೂಡ ಬರುತ್ತದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿಯೇ ಮೈಸೂರು ಜಿಲ್ಲೆಯ ಜನರಿಗೆ ಅನ್ನಭಾಗ್ಯ ಯೋಜನೆಯ ಹಣ ದೊರೆತಿದೆ. ಜಿಲ್ಲೆಯಲ್ಲಿ 50432 ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರ ಕುಟುಂಬದ ಒಟ್ಟು 2,17,199 ಫಲಾನುಭವಿಗಳು, 6,61,290 ಬಿಪಿಎಲ್‌ ಕಾರ್ಡ್‌ಗಳ 20,83,627 ಜನರಿಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆಜಿ ಅಕ್ಕಿ ವಿತರಿಸ ಬೇಕಿದೆ. ಅದರಂತೆ ಎಂದಿನಂತೆ ತಲಾ ಐದು ಕೆಜಿ ಅಕ್ಕಿ ವಿತರಿಸಲಾಗಿದೆ. ಇನ್ನುಳಿದ ಐದು ಕೆಜಿ ಅಕ್ಕಿಗೆ ಬದಲಾಗಿ 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಎಲ್ಲಾ ಹಂತಗಳಲ್ಲಿಯೂ ಪ್ರತಿ ಜಿಲ್ಲೆಗೆ ಅನ್ನ ಭಾಗ್ಯದ ಹಣವನ್ನು ಜಮಾ ಮಾಡಲಾಗುತ್ತದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *