Shakti Yojane – ಉಚಿತ ಪ್ರಯಾಣಿಸುವ ಮಹಿಳೆಯರಿಗೆ ಸಿಎಂ ಸಿದ್ದು ಮಹತ್ವದ ಘೋಷಣೆ – ಇಲ್ಲಿದೆ ಕಂಪ್ಲೀಟ್ ಮಾಹಿತಿ

WhatsApp Image 2023 08 19 at 8.43.39 PM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯ ಕುರಿತು ಮುಖ್ಯಮಂತ್ರಿಗಳು ತಿಳಿಸಿದ ಮುಖ್ಯ ವಿಷಯದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ ಎಂದು CM ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಇತ್ತೀಚಿಗೆ ಹರಡುತ್ತಿರುವ ಸುಳ್ಳು ಸುದ್ದಿಯಾದ ಶಕ್ತಿ ಯೋಜನೆ ಸ್ಥಗಿತಗೊಳ್ಳುತ್ತದೆ ಎಂಬುವ ಊಹಾಪೋಹಗಳಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ. ಇದರ ಕುರಿತಾಗಿ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಲು ಸಂಪೂರ್ಣ ಲೇಖನವನ್ನು ಓದಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.

ಶಕ್ತಿ ಯೋಜನೆ ಸ್ಥಗಿತಗೊಳ್ಳುವುದಿಲ್ಲ :

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ನ ಐದು ಚುನಾವಣಾ ಭರವಸೆಗಳಲ್ಲಿ ಶಕ್ತಿ ಯೋಜನೆಯೂ ಒಂದಾಗಿದೆ. ಶಕ್ತಿ ಯೋಜನೆಯು ಕರ್ನಾಟಕದ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ ಮತ್ತು ಇದು ಕೇವಲ ಸರ್ಕಾರಿ ಬಸ್ ಸೇವೆಗಳಿಗೆ ಮಾತ್ರ ಅನ್ವಯಿಸುತ್ತದೆ. ಐರಾವತ್, ಐರಾವತ್ ಕ್ಲಬ್ ಕ್ಲಾಸ್,ರಾಜಹಂಸ ಮತ್ತು ಇತರೆ AC ಬಸ್‌ಗಳನ್ನು ಈ ಯೋಜನೆಯಲ್ಲಿ ಹೊರಗಿಡಲಾಗಿದೆ. ಈ ಯೋಜನೆಯು ರಾಜ್ಯದ ಹೊರಗೆ ಪ್ರಯಾಣಿಸುವ ಬಸ್‌ಗಳಿಗೆ ಅನ್ವಯಿಸುವುದಿಲ್ಲ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಕಳೆದ ಕೆಲವು ದಿನಗಳಿಂದ, ಶಕ್ತಿ ಯೋಜನೆಯನ್ನು ಹಿಂತೆಗೆದುಕೊಳ್ಳುವ ಹಂತದಲ್ಲಿದೆ ಎಂದು ಹೇಳುವ ಮೂಲಕ ವಾಟ್ಸಾಪ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಂತಹ ವೇದಿಕೆಗಳಲ್ಲಿ ಹಲವಾರು ಸುಳ್ಳು ವರದಿಗಳು ಹರಿದಾಡುತ್ತಿದ್ದವು.

“ಮೊದಲು, ಅವರು ಖಾತರಿ ಯೋಜನೆಗಳನ್ನು ಜಾರಿಗೊಳಿಸುವುದಿಲ್ಲ ಎಂದು ಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ದಿನ ನಡೆಯುವುದಿಲ್ಲ ಎಂದು ಅಪಪ್ರಚಾರ ಮಾಡಲು ಆರಂಭಿಸಿದ್ದಾರೆ. ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ನಾವು ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆಯುತ್ತಿದೆ. ನಾನು ಇದನ್ನು ಖಾತರಿಪಡಿಸುತ್ತೇನೆ. ” ಎಂದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮೂಲಕ CM ಸಿದ್ದರಾಮಯ್ಯನವರು ಸ್ಪಷ್ಟಣೆಯನ್ನು ನೀಡಿದ್ದಾರೆ.

“ಕರ್ನಾಟಕದ ಜನತೆಗೆ ಅದರಲ್ಲೂ ಶಾಲಾ ಮಕ್ಕಳಿಗೆ ನಾನು ಹೇಳಲು ಇಚ್ಛಿಸುತ್ತೇನೆ, ಕೆಲವರು ‘ಶಕ್ತಿ’ ಯೋಜನೆಯನ್ನು ನಿಲ್ಲಿಸುವುದಾಗಿ ಚುನಾವಣಾ ಖಾತ್ರಿ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ವದಂತಿಗಳನ್ನು ನಂಬಿ ಕೆಲವರು ಬಸ್ ಪಾಸ್ ಕೇಳಲು ತೆರಳಿದ್ದರು. ಕರ್ನಾಟಕದಲ್ಲಿ ಮುಂದೆಯೂ  ಅಧಿಕಾರಕ್ಕೆ ನಾವೇ ಬರುತ್ತೇವೆ, ಹೀಗಾಗಿ ಮುಂದಿನ 10 ವರ್ಷಗಳವರೆಗೆ ಶಕ್ತಿ ಯೋಜನೆ ಇರುತ್ತದೆ. ವಿರುದ್ಧ ಪಕ್ಷದ ಕೆಲವರು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಪಕ್ಷಕ್ಕೆ ಪ್ರತಿಷ್ಠೆ ಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಯೋಜನೆಯ ಲಾಭವನ್ನು ಪಡೆಯಲು ಯಾವದೇ ಪಾಸ್ ಪಡೆಯುವ ಅಗತ್ಯವೂ ಇಲ್ಲಾ ” ಎಂದು ಸಾರಿಗೆ ಸಚಿವ  ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

whatss

ಈ ಯೋಜನೆಯು ಮಹಿಳಾ ಪ್ರಯಾಣಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ಹೊಂದುದ್ದು, ಪ್ರಾರಂಭದಿಂದ ಆಗಸ್ಟ್ 15 ರವರೆಗೆ 40.02 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯದಾದ್ಯಂತ ಪ್ರಯಾಣಿಸಲು ಈ ಯೋಜನೆಯನ್ನು ಬಳಸಿಕೊಂಡಿದ್ದಾರೆ. ಈ ಮಹಿಳಾ ಪ್ರಯಾಣಿಕರು ಖರೀದಿಸಿದ ಟಿಕೆಟ್‌ಗಳ ಒಟ್ಟು ಮೌಲ್ಯ ₹930,34,82,844. ಆಗಿರುತ್ತದೆ, ಎಂದು ಮಾಹಿತಿ ಒದಗಿದೆ.

ಆದ್ದರಿಂದ ಶಕ್ತಿ ಯೋಜನೆ ಇನ್ನೂ ಮುಂದುವರೆಯುತ್ತದೆ, ಸರ್ಕಾರದಿಂದ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಮಹಿಳೆಯರು ಎಂದಿನಂತೆ ಉಚಿತವಾಗಿ ಬಸುಗಳಲ್ಲಿ ಪ್ರಯಾಣಿಸಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿದ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಮುಖ್ಯವಾಗಿ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

tel share transformed

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

Leave a Reply

Your email address will not be published. Required fields are marked *