ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ ಶಿಬಿರ ವನ್ನು ಜುಲೈ ತಿಂಗಳ 7 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. .ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು (ಮಹಿಳೆಯರಿಗೆ ಮಾತ್ರ) ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಶಿಬಿರಾರ್ಥಿಗಳು ದಿನಾಂಕ : 07/07/2025 ಸೋಮವಾರ ಬೆಳಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 9505894247, 8970476050, 9591514754, 9686248369, 8970446644 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.