ಪ್ರಸ್ತುತ ರಾಜ್ಯ ಮುಖ್ಯಮಂತ್ರಿಗಳಾದ ಸಿ ಎಂ ಸಿದ್ದರಾಮಯ್ಯ (CM siddrammaya)ನವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತಗೆದುಕೊಂಡಿದ್ದಾರೆ. ಹೌದು, ಈ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಅಂಗವಿಕಲರಿಗೆ ಅಂತನೆಯೇ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಅಂಗವಿಕಲರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ ಎಂದು ತಿಳಿಸಬಹುದು. ಪ್ರಸ್ತುತ 2023-24ನೇ ಸಾಲಿನಲ್ಲಿ ಅಂಗವಿಕಲರಿಗೆ ಅಂದಾಜು ₹36 ಕೋಟಿ ವೆಚ್ಚದಲ್ಲಿ 4,000 ಹೆಚ್ಚುವರಿಯಾಗಿ ಯಂತ್ರ ಚಾಲಿತ ದ್ವಿಚಕ್ರ ವಾಹನ ಖರೀದಿಸಿ ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂಗವಿಕಲರಿಗೆ ಉಚಿತ ದ್ವಿಚಕ್ರ ವಾಹನ :
ಸರ್ಕಾರದ ವತಿಯಿಂದ ಇದೊಂದು ಉಚಿತ ಯೋಜನೆ ಅಂತಾನೆ ಹೇಳಬಹುದು. ರಾಜ್ಯ ಸರ್ಕಾರದ ಈ ಯೋಜನೆಯಡಿಯಲ್ಲಿ ಅಂಗವಿಕಲರಿಗೆ, ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಅಂಗವಿಕಲರಿಗೆ ಅನುಕೂಲವಾಗಲೆಂದು, ನಾಕು ಸಾವಿರ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ಖರೀದಿ ಮಾಡಿ ನಂತರ ಅವುಗಳನ್ನು ಅರ್ಹ ಅಂಗವಿಕಲರಿಗೆ ವಿತರಣೆ ಮಾಡಲಾಗುತ್ತದೆ. ಈ ಉಚಿತವಾದ ದ್ವಿಚಕ್ರ ವಾಹನಗಳನ್ನು ಪಡೆಯಲು ಅಂಗವಿಕಲರು ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ನಾಡಕಛೇರಿಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಇದನ್ನು ಹೊರತಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಎಲ್ಲ ಗೋದಾಮುಗಳಿಗೂ ಅಂದಾಜು ಸುಮಾರು ₹12.24 ಕೋಟಿ ಬಿಡುಗಡೆ ವೆಚ್ಚದಲ್ಲಿ ಸಿಸಿಟಿವಿ ಕ್ಯಾಮೆರಾ (CCTV camera) ಅಳವಡಿಸಬೇಕೆಂದು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಗದಗ – ಬೇಟೆಗೆರಿ ನಗರ ಸಭೆಗೆ ಅಮೃತ 2.0 ಅಡಿಯಲ್ಲಿ ಅಂದಾಜು 34 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು(Drinking water) ಸರಬರಾಜು ಯೋಜನೆಗೆ ಸಚಿವ ಸಂಪುಟ ಸಭೆ ಅನುಮತಿ ನೀಡಿದೆ.
ಇವುಗಳ ಜೊತೆಗೆ 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಜ್ಯದ ಆಯ್ದ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಸರ ಪರಿಹಾರ ನಿಧಿಯಡಿ ರೂ. 750 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka CM siddaramaya) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ (administrative Approval) ಮಾಡುವ ನಿರ್ಧಾರವನ್ನು ತಗೆದುಕೊಂಡಿದ್ದಾರೆ ಎಂದು ತಿಳಿಸಬಹುದು.ಮತ್ತು ಇಂತಹ ಉತ್ತಮವಾದ ಮಾಹಿತಿ ಯನ್ನು ನೀವು ತಿಳಿದ ಮೇಲೆ ತಡ ಮಾಡದೆ ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ ಮಾಹಿತಿಯನ್ನು ತಲಿಪಿಸಿ, ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






