ಗಣೇಶೋತ್ಸವವು (Ganesha Festival) ಕರ್ನಾಟಕ ಸೇರಿದಂತೆ ಭಾರತದ ಅನೇಕ ಭಾಗಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುವ ಪ್ರಮುಖ ಹಬ್ಬ. ಗಣಪನನ್ನು ಮನೆಮನೆಗಳಲ್ಲಿ ಹಾಗೂ ಸಾರ್ವಜನಿಕ ಪೆಂಡಾಲ್ಗಳಲ್ಲಿ ಪ್ರತಿಷ್ಠಾಪಿಸಿ, ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಆರಾಧಿಸಲಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ಹಬ್ಬದ ವೇಳೆ ನಡೆಯುವ ಕೆಲವು ಆಚರಣೆಗಳು ಪರಿಸರಕ್ಕೆ ಹಾನಿಕಾರಕವಾಗಿರುವುದರಿಂದ, ಸರ್ಕಾರ ಮತ್ತು ನ್ಯಾಯಾಂಗವು (The government and the judiciary) ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಶೇಷವಾಗಿ ಪಟಾಕಿ ಸಿಡಿಸುವುದು, ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮೂರ್ತಿಗಳ ಬಳಕೆ ಮತ್ತು ರಾಸಾಯನಿಕ ಬಣ್ಣಗಳಿಂದಾಗುವ ನೀರು-ಮಣ್ಣು ಮಾಲಿನ್ಯವು ಪರಿಸರ ಹಾಗೂ ಜಲಚರ ಜೀವಿಗಳ ಬದುಕಿಗೆ ಗಂಭೀರ ಅಪಾಯವನ್ನು ಉಂಟುಮಾಡುತ್ತಿದೆ. ಇಂತಹ ಸವಾಲುಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ (State government) ಕ್ರಮ ಕೈಗೊಂಡಿದ್ದು, ಈ ಕುರಿತು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಪ್ರಮುಖ ಘೋಷಣೆ ಮಾಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಪಟಾಕಿ ಸಿಡಿಸುವುದಕ್ಕೆ ಕಾನೂನು ಬದ್ಧ ಸಮಯ:
ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿರುವಂತೆ, ಗಣೇಶೋತ್ಸವದ ವೇಳೆ ಪಟಾಕಿ (Crackers) ಸಿಡಿಸುವುದು ಸಂಪೂರ್ಣ ನಿಷೇಧಿಸಲಾಗಿಲ್ಲ. ಆದರೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ರಾತ್ರಿ 8 ರಿಂದ 10 ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಜೊತೆಗೆ, 125 ಡೆಸಿಬೆಲ್ಗಿಂತ (Above 125 decibels) ಹೆಚ್ಚು ಶಬ್ದ ಮಾಡುವ ಪಟಾಕಿಗಳನ್ನು ಬಳಕೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪರಿಸರಕ್ಕೆ ಹಾನಿ ಮಾಡದ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸುವಂತೆ ಸಚಿವರು ಮನವಿ ಮಾಡಿದ್ದಾರೆ.
POP ಮೂರ್ತಿಗಳ ಬದಲು ಮಣ್ಣಿನ ಗಣೇಶನ ಮೂರ್ತಿಗೆ ಪ್ರೋತ್ಸಾಹ:
ಸಚಿವ ಖಂಡ್ರೆ ಅವರು ಗಣೇಶೋತ್ಸವದ ವೇಳೆ ಪರಿಸರ ಸ್ನೇಹಿ ಮಣ್ಣಿನ ಗಣಪ ಮೂರ್ತಿಗಳನ್ನು (Eco-friendly clay Ganesha idols during Ganesh festival) ಮಾತ್ರ ಪ್ರತಿಷ್ಠಾಪಿಸಬೇಕು ಎಂದು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮೂರ್ತಿಗಳು ನೀರಿನಲ್ಲಿ ಕರಗದೆ, ವಿಷಕಾರಿ ರಾಸಾಯನಿಕಗಳನ್ನು ಜಲಾಶಯಗಳಿಗೆ ಸೇರಿಸುತ್ತವೆ. ಇದರಿಂದ ಮೀನು ಹಾಗೂ ಇತರ ಜಲಚರ ಜೀವಿಗಳ ಜೀವಕ್ಕೆ ಅಪಾಯ ಉಂಟಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ 90% ಜನರು ಮಣ್ಣಿನ ಗಣೇಶನನ್ನು ಮಾತ್ರ ಪ್ರತಿಷ್ಠಾಪಿಸುತ್ತಿದ್ದಾರೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಇತರ ಜಿಲ್ಲೆಗಳೂ ಈ ಮಾದರಿಯನ್ನು ಅನುಸರಿಸಬೇಕೆಂದು ತಿಳಿಸಿದ್ದಾರೆ.
ಸಾರ್ವಜನಿಕ ಸಮಿತಿಗಳಿಗೆ ಕಟ್ಟುನಿಟ್ಟಿನ ನಿಯಮ:
ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಂದ POP ಮೂರ್ತಿಗಳನ್ನು ಬಳಸುವುದಿಲ್ಲ ಎಂಬ ಮುಚ್ಚಳಿಕೆ (Undertaking) ಪಡೆಯುವುದರ ನಂತರವೇ ಪೆಂಡಾಲ್ಗಳಿಗೆ ಅನುಮತಿ ನೀಡುವಂತೆ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ. ಈ ಮೂಲಕ ಪರಿಸರ ಮಾಲಿನ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆಯಲಿದೆ.
ಒಟ್ಟಾರೆಯಾಗಿ, ಇಡೀ ಜಗತ್ತೇ ಇಂದು ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ (Weather chanegs) ಸವಾಲನ್ನು ಎದುರಿಸುತ್ತಿದೆ. ಅತಿವೃಷ್ಟಿ ಮತ್ತು ಅನಾಹುತಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಆದ್ದರಿಂದ ಭಕ್ತಿಭಾವದಿಂದ ಆಚರಿಸುವ ಗಣೇಶೋತ್ಸವವು ಜಲಚರ ಜೀವಿಗಳಿಗೆ ಅಥವಾ ಪರಿಸರಕ್ಕೆ ಹಾನಿಯಾಗಬಾರದು,” ಎಂದು ಸಚಿವ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.