ಎಸ್.ಸಿ/ ಎಸ್.ಟಿ ಅಭಿವೃದ್ದಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ!
ಇಂದು ಸರ್ಕಾರದಿಂದ ಹಲವಾರು ಯೋಜನೆಗಳು ಜಾರಿಯಲ್ಲಿವೆ. ಮುಖ್ಯವಾಗಿ ರೈತರಿಗೆ ಹಲವು ಯೋಜನೆಗಳು ಜಾರಿಯಲ್ಲಿದ್ದು, ಅದರಲ್ಲಿ ಗಂಗಾ ಕಲ್ಯಾಣ ಯೋಜನೆ (Ganga kalyana yojana) ಯು ಒಂದಾಗಿದೆ. ಗಂಗಾ ಕಲ್ಯಾಣ ಯೋಜನೆ ಎಂದರೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸಣ್ಣ ಪ್ರಮಾಣದ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ರೈತರಿಗೆ, ಕೃಷಿ(agriculture) ಚಟುವಟಿಕೆ ಗೋಸ್ಕರ ನೀರಾವರಿ ಸೌಲಭ್ಯವನ್ನು ಒದಗಿಸುವ ಯೋಜನೆಯಾಗಿದೆ.
ಈ ಯೋಜನೆಯಲ್ಲಿ ಅರ್ಥಿಕವಾಗಿ ಸಬಲರಾಗಲು ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೊಳವೆ ಬಾವಿ, ಬೋರ್ವೆಲ್ ಕೊರೆಸಿಕೊಳ್ಳಲು ಅರ್ಥಿಕವಾಗಿ ನೆರವು ನೀಡಲು ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ರೈತರಿಗೆ ಮುಖ್ಯವಾಗಿ ಹಣದ ನೆರವು ನೀಡಲಾಗುತ್ತದೆ.
ಈಗಾಗಲೇ ವಿವಿಧ ವರ್ಗದ ನಿಗಮಗಳಿಂದ ಗಂಗಾ ಕಲ್ಯಾಣ (Ganga kalyana yojana) ಯೋಜನೆಯಡಿಲ್ಲಿ ಸಬ್ಸಿಡಿ(subsidy) ಮೂಲಕ ಕೊಳವೆ ಬಾವಿಯನ್ನು ಕೊರೆಸಲು ಅರ್ಜಿ ಆಹ್ವಾನಿಸಲಾಗಿದ್ದು ಹಾಗೆಯೇ ಇದೀಗ ಮತ್ತೊಂದು ವರ್ಗ ಅಂದರೆ ಎಸ್.ಸಿ/ ಎಸ್.ಟಿ ಅಭಿವೃದ್ದಿ ನಿಗಮದಿಂದ (From SC/ ST Development Corporation) ಆನ್ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗಂಗಾ ಕಲ್ಯಾಣ ಯೋಜನೆಯಲ್ಲಿ ದೊರೆಯುವ ಸಹಾಯಧನದ ವಿವರ ಈ ಕೆಳಗೆ ನೀಡಲಾಗಿದೆ (Ganga kalyana subsidy details) :
ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೂಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುತ್ತದೆ.
ಉಳಿದ ಜಿಲ್ಲೆಗಳಿಗೆ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/- ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.
ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಗಳ ವಿವರ (Last date for applying application) :
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಯನ್ನು ತೆಗೆಸಲು ಈಗಾಗಲೇ ಲಿಂಗಾಯತ,ಒಕ್ಕಲಿಗ, ಹಿಂದುಳಿದ ವರ್ಗ ಹಾಗೂ ದೇವರಾಜ ಅರಸು ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದ್ದು ಇದಕ್ಕೆ ಅರ್ಜಿ ಸಲ್ಲಿಸಲು 15 ಸೆಪ್ಟಂಬರ್ 2024 ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ. ಹಾಗೆಯೇ ಇದೀಗ ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗಕ್ಕೆ ಸೇರಿದ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 10 ಅಕ್ಟೋಬರ್ 2024 ಕೊನೆಯ ದಿನವಾಗಿದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು (Qualifications) :
ಆಯಾ ನಿಗಮಕ್ಕೆ ಸಂಬಂಧಪಟ್ಟ ವರ್ಗಕ್ಕೆ ಸೇರಿದ ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಬಹುದು.
1.20 ಎಕರೆಯಿಂದ 5.0 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು/ ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ನೌಕರಿಯಲ್ಲಿರಬಾರದು.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅಗತ್ಯ ದಾಖಲಾತಿಗಳು (documents) :
ಆಧಾರ್ ಕಾರ್ಡ ಪ್ರತಿ
ಬ್ಯಾಂಕ್ ಪಾಸ್ ಬುಕ್ ಪ್ರತಿ.
ಪೋಟೋ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಜಮೀನಿನ ಪಹಣಿ/RTC.
ರೇಶನ್ ಕಾರ್ಡ ಪ್ರತಿ
ಸಣ್ಣ ಹಿಡುವಳಿ ಪ್ರಮಾಣ ಪತ್ರ
ಕೊಳವೆ ಬಾವಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ.
ಮೊಬೈಲ್ ನಂಬರ್
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಕೆಯ ವಿಧಾನ (Steps for applying applications) :
ಗಂಗಾ ಕಲ್ಯಾಣ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಎಂಬುದನ್ನು ನೋಡೋಣ. ಸರ್ಕಾರದ ಈ ಯೋಜನೆಯ ಅಧಿಕೃತ ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಮೊದಲಿಗೆ ಈ ಯೋಜನೆಯ ಅಧಿಕೃತ ವೆಬ್ಬೆಟ್ ಗೆ ಭೇಟಿ ನೀಡಬೇಕು: https://sevasindhu.karnataka.gov.in/Sevasindhu/Kannada?ReturnUrl=%2F.
ಮುಖಪುಟ ತೆರೆದ ನಂತರ ಗಂಗಾ ಕಲ್ಯಾಣ ಯೋಜನೆಯ ಅರ್ಜಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕು.
ನಂತರ ರೈತರ ಎಲ್ಲಾ ವೈಯಕ್ತಿಕ ವಿವರಗಳನ್ನು ಎಂಟ್ರಿ ಮಾಡಬೇಕು.
ಆಧಾರ್ ಕಾರ್ಡ್, ಮೊಬೈಲ್ ನಂಬರ್ ಮತ್ತು ಬ್ಯಾಂಕ್ ಖಾತೆಯ ವಿವರವನ್ನು ಕಡ್ಡಾಯವಾಗಿ ಎಂಟ್ರಿ ಮಾಡಬೇಕು.
ನಂತರ ಕೇಳಿರುವ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
ನಂತರ ಅರ್ಜಿಯನ್ನು ಸಬ್ ಮಿಟ್ ಮಾಡಬೇಕು.
ಗಮನಿಸಿ (Notice) :
ಅರ್ಹ ಅರ್ಜಿದಾರರು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್(Karnataka one), ಗ್ರಾಮ ಒನ್(Gram one), ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




