WhatsApp Image 2025 11 19 at 7.22.23 PM

ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿಸುದ್ದಿ : ಮತ್ತೇ 1000 ರೂ. ಗೌರವಧನ ಹೆಚ್ಚಳ.!

WhatsApp Group Telegram Group

ಕರ್ನಾಟಕ ರಾಜ್ಯದ ಲಕ್ಷಾಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಿಹಿಸುದ್ದಿಯೊಂದು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಸಿಬ್ಬಂದಿಯ ಗೌರವಧನವನ್ನು ಮುಂದಿನ ದಿನಗಳಲ್ಲಿ ಇನ್ನೂ ಸಾವಿರ ರೂಪಾಯಿ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ಪೂರ್ಣ ವಿಮುಕ್ತಿ ನೀಡಲಾಗಿದೆ. ಜಾತಿ ಸಮೀಕ್ಷೆಯಲ್ಲಿ ಅಂಗನವಾಡಿ ಸಿಬ್ಬಂದಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಪ್ರಶಂಸೆ ವ್ಯಕ್ತಪಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನವೆಂಬರ್ 28ರಂದು ಬೆಂಗಳೂರಿನಲ್ಲಿ ಮಹಾ ಕಾರ್ಯಕ್ರಮಗಳು

ನವೆಂಬರ್ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂಗನವಾಡಿ ಯೋಜನೆಯ ಸುವರ್ಣ ಮಹೋತ್ಸವ (ICDS ಐವತ್ತು ವರ್ಷ), ಮಹಿಳಾ ಸುರಕ್ಷತೆಗಾಗಿ ‘ಅಕ್ಕಪಡೆ’ ತಂಡದ ಲೋಕಾರ್ಪಣೆ ಮತ್ತು ಗೃಹಲಕ್ಷ್ಮಿ ಮಹಿಳಾ ಸಹಕಾರ ಬ್ಯಾಂಕ್‌ಗೆ ಚಾಲನೆ ನೀಡಲಾಗುವುದು. ಈ ಬೃಹತ್ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಇಲಾಖೆಯಲ್ಲಿ ಆಗುತ್ತಿರುವ ಬೃಹತ್ ಬದಲಾವಣೆಗಳು

ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಶಿಸ್ತು ಮತ್ತು ಪಾರದರ್ಶಕತೆ ತಂದಿದ್ದೇನೆ ಎಂದು ಸಚಿವೆ ಹೇಳಿದರು. ಗೃಹಲಕ್ಷ್ಮಿ ಯೋಜನೆಯಿಂದ ಇಲಾಖೆ ಈಗ ಮನೆಮಾತಾಗಿದೆ. ಮೊದಲು ಕೆಡಿಪಿ ಸಭೆಗಳಲ್ಲಿ ಕೊನೆಯಲ್ಲಿ ಚರ್ಚೆಯಾಗುತ್ತಿದ್ದ ಇಲಾಖೆ ಈಗ ಮೊದಲ ಸ್ಥಾನದಲ್ಲಿದೆ. ತುಮಕೂರು ಜಿಲ್ಲೆಯಲ್ಲಿ FRS ಸಿಸ್ಟಮ್ ಅನ್ನು ಶೇ.99ರಷ್ಟು ಜಾರಿಗೊಳಿಸಿದ ಕೀರ್ತಿ ಇದೆ. ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ತುಮಕೂರು ಜಿಲ್ಲೆಯಿಂದ ನಾಲ್ವರು ಷೇರುದಾರರನ್ನು ನೋಂದಾಯಿಸಬೇಕು ಎಂದು ಸಚಿವೆ ಕರೆ ನೀಡಿದರು.

ಕೇಂದ್ರದಿಂದ ಅತಿ ಹೆಚ್ಚು ಅನುದಾನ – ಅಂಗನವಾಡಿ ಕಟ್ಟಡಗಳ ನಿರ್ಮಾಣ

ಕೇಂದ್ರದಲ್ಲಿ NDA ಸರ್ಕಾರ ಇದ್ದರೂ ರಾಜ್ಯಕ್ಕೆ ಅತಿ ಹೆಚ್ಚು ಅನುದಾನ ತಂದಿದ್ದೇನೆ ಎಂದು ಸಚಿವೆ ಹೇಳಿದರು. ಪ್ರತಿ ಗ್ರಾಮದಲ್ಲೂ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಇಲಾಖೆಯು ಸಾಮಾಜಿಕ ಬದ್ಧತೆಯೊಂದಿಗೆ ಮಾನವೀಯತೆಯನ್ನು ಒಡ್ಡುತ್ತದೆ. ಅನುಕಂಪ ಮತ್ತು ಹೃದಯದಿಂದ ಕೆಲಸ ಮಾಡುವುದರಿಂದಲೇ ಈ ಇಲಾಖೆಯನ್ನು ಮಹಿಳಾ ಸಚಿವರಿಗೆ ನೀಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಅಂಗನವಾಡಿ ಸಿಬ್ಬಂದಿಯ ಗೌರವಧನ ಹೆಚ್ಚಳ, ಚುನಾವಣಾ ಕೆಲಸದಿಂದ ವಿಮುಕ್ತಿ, ಸುವರ್ಣ ಮಹೋತ್ಸವ ಮತ್ತು ಅಕ್ಕಪಡೆ ಲೋಕಾರ್ಪಣೆ – ಇವೆಲ್ಲವೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಆಗುತ್ತಿರುವ ಬೃಹತ್ ಬದಲಾವಣೆಗಳ ಸಂಕೇತವಾಗಿವೆ. ಈ ಎಲ್ಲಾ ಕಾರ್ಯಕ್ರಮಗಳು ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಲಿವೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


WhatsApp Group Join Now
Telegram Group Join Now

Popular Categories