ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) ಭಾರತ ಸರ್ಕಾರದ ಅಡಿಯಲ್ಲಿ ಕನಿಷ್ಠ ಶೈಕ್ಷಣಿಕ ಅರ್ಹತೆ ಪಿಯುಸಿ (ಪ್ರಿಯೂನಿವರ್ಸಿಟಿ) ಹೊಂದಿದವರಿಗೆ ಉತ್ತಮ ಅವಕಾಶ ನೀಡಿದೆ. LDC (ಲೋಯರ್ ಡಿವಿಜನ್ ಕ್ಲರ್ಕ್), JSA (ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್), DEO (ಡೇಟಾ ಎಂಟ್ರಿ ಆಪರೇಟರ್) ಸೇರಿದಂತೆ 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 18ರೊಳಗೆ ಎಸ್ಎಸ್ಸಿ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬೇಕು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅರ್ಹತೆ ಮತ್ತು ಶುಲ್ಕ ವಿವರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಇರಬೇಕು. ವಯೋಮಿತಿಯಲ್ಲಿ SC/ST, ಮಹಿಳೆಯರು, ದಿವ್ಯಾಂಗರು ಮತ್ತು ಮಾಜಿ ಸೈನಿಕರಿಗೆ ರಿಯಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ನೀಡುತ್ತಾ, SC/ST/PWBD/ಮಹಿಳೆಯರು ಮತ್ತು ಮಾಜಿ ಸೈನಿಕರಿಗೆ ಯಾವುದೇ ಫೀಸ್ ಇಲ್ಲ. ಇತರೆ ಅಭ್ಯರ್ಥಿಗಳು ₹100 ಶುಲ್ಕ ಪಾವತಿಸಬೇಕು.
ಪರೀಕ್ಷೆ ಮತ್ತು ಮುಖ್ಯ ದಿನಾಂಕಗಳು
ಎಸ್ಎಸ್ಸಿ ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆ ಸೆಪ್ಟೆಂಬರ್ 8 ರಿಂದ 18, 2025ರ ವರೆಗೆ ನಡೆಯಲಿದೆ. ಪರೀಕ್ಷೆಯ ವಿವರಗಳು ಮತ್ತು ಅಧಿಕೃತ ನೋಟಿಫಿಕೇಶನ್ ಅನ್ನು ಎಸ್ಎಸ್ಸಿ ವೆಬ್ ಸೈಟ್ ನಲ್ಲಿ ಪರಿಶೀಲಿಸಬಹುದು.
ಸಹಾಯ ಮತ್ತು ಸಂಪರ್ಕ
ಹೆಚ್ಚಿನ ಮಾಹಿತಿಗಾಗಿ, ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಅಥವಾ ದೂರವಾಣಿ: 08172-296374 ನಂಬರಿಗೆ ಕರೆ ಮಾಡಿ ವಿವರಗಳನ್ನು ಪಡೆಯಬಹುದು.
ಈ ನೇಮಕಾತಿ ಅವಕಾಶವು ಪಿಯುಸಿ ಉತ್ತೀರ್ಣರಿಗೆ ಸರ್ಕಾರಿ ಉದ್ಯೋಗದ ದ್ವಾರ ತೆರೆಯುತ್ತದೆ. ಅರ್ಜಿದಾರರು ಸಮಯಕ್ಕೆ ಅರ್ಜಿ ಸಲ್ಲಿಸಿ, ಪರೀಕ್ಷೆಗೆ ಸಿದ್ಧರಾಗಲು ಸೂಚಿಸಲಾಗುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.