WhatsApp Image 2025 08 11 at 1.45.26 PM

ಸಾಲದ ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ :ವಿವಿಧ ಯೋಜನೆಗಳಡಿ ಲಕ್ಷಾಂತರ ಸಾಲ, ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ.!

WhatsApp Group Telegram Group

ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಘೋಷಿಸಿದೆ. ಈ ಯೋಜನೆಗಳಡಿ ಲಕ್ಷಾಂತರ ರೂಪಾಯಿಗಳ ಸಾಲ ಮತ್ತು ಸಹಾಯಧನ ಸೌಲಭ್ಯಗಳನ್ನು ನೀಡಲಾಗುವುದು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳು ಈ ಸೌಲಭ್ಯಗಳನ್ನು ನೀಡುತ್ತಿವೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯೋಜನೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಸಲ್ಲಿಸಬಹುದು. ಅರ್ಹತೆ ಹೊಂದಿದ ಅರ್ಜಿದಾರರು https://sevasindhu.karnataka.gov.in ವೆಬ್ ಸೈಟ್ ನಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡಿ, ಸೆಪ್ಟೆಂಬರ್ 10 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯ ಒಂದು ಪ್ರತಿಯನ್ನು ಸಂಬಂಧಿತ ಜಿಲ್ಲಾ ನಿಗಮ ಕಚೇರಿಗೆ ಸಲ್ಲಿಸಬೇಕು.

ಪ್ರಮುಖ ಯೋಜನೆಗಳು

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಹೈನುಗಾರಿಕೆ: ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ 50% ಸಹಾಯಧನ (ಗರಿಷ್ಠ ₹1.25 ಲಕ್ಷ). ಉಳಿದ ಮೊತ್ತ ಬ್ಯಾಂಕ್ ಸಾಲದ ಮೂಲಕ ನೀಡಲಾಗುವುದು.

ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ: ಘಟಕ ವೆಚ್ಚದ 70% ಸಹಾಯಧನ (ಗರಿಷ್ಠ ₹2 ಲಕ್ಷ).

ಸ್ವಾವಲಂಬಿ ಸಾರಥಿ ಯೋಜನೆ

ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್): ಘಟಕ ವೆಚ್ಚದ 75% ಸಹಾಯಧನ (ಗರಿಷ್ಠ ₹4 ಲಕ್ಷ).

ಪಿಕಪ್ ಟ್ರಕ್/ಟ್ರೇಲರ್/ಮೊಬೈಲ್ ಕಿಚನ್: ಅದೇ ಪ್ರಕಾರ 75% ಸಹಾಯಧನ (ಗರಿಷ್ಠ ₹4 ಲಕ್ಷ).

ಮೈಕ್ರೋ ಕ್ರೆಡಿಟ್ ಯೋಜನೆ (ಮಹಿಳಾ ಸ್ವಸಹಾಯ ಸಂಘಗಳಿಗೆ)

ಕನಿಷ್ಠ 10 ಸದಸ್ಯರು ಇರುವ ಮಹಿಳಾ ಸ್ವಸಹಾಯ ಗುಂಪುಗಳಿಗೆ ₹5 ಲಕ್ಷ ನೀಡಲಾಗುವುದು.

ಇದರಲ್ಲಿ ₹2.5 ಲಕ್ಷ ಸಹಾಯಧನ ಮತ್ತು ₹2.5 ಲಕ್ಷ ಸಾಲ (4% ಬಡ್ಡಿ ದರದಲ್ಲಿ).

ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆ

ಈ ಯೋಜನೆಗಳಿಗೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮಗಳ ಅಧಿಕೃತ ವೆಬ್ ಸೈಟ್ ಗಳನ್ನು ಪರಿಶೀಲಿಸಬಹುದು.

ನಿಗಮಗಳ ವೆಬ್ ಸೈಟ್ ಲಿಂಕ್ ಗಳು:

ಸಂಪರ್ಕ ಮಾಹಿತಿ:

ಹೆಚ್ಚಿನ ವಿವರಗಳಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯನ್ನು 08272-228857 ನಂಬರಿಗೆ ಸಂಪರ್ಕಿಸಬಹುದು.

ಈ ಅವಕಾಶವನ್ನು ಬಳಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಮತ್ತು ಆರ್ಥಿಕವಾಗಿ ಸಬಲರಾಗಲು ಅರ್ಹರು ಅರ್ಜಿ ಸಲ್ಲಿಸಿ!

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

—————————–

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories