ಸರ್ಕಾರಕ್ಕೆ ಸರ್ಕಾರಿ ನೌಕರರ 2 ಪ್ರಮುಖ ಬೇಡಿಕೆ, ಮುಂದಿನ ವರ್ಷ ಈ ಎರಡು ಬೇಡಿಕೆಗಳು ಈಡೇರುವ ನಿರೀಕ್ಷೆ..!
ಈಗಾಗಲೇ ಸರ್ಕಾರಿ ನೌಕರರು (government employees) ತಮ್ಮ 8ನೇ ವೇತನ(8th pay)ಕ್ಕಾಗಿ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರಿ ನೌಕರರು 8ನೇ ವೇತನ ಆಯೋಗದಡಿ ಮೂಲ ವೇತನ 18,000 ರೂಪಾಯಿಯಿಂದ 34,500 ರೂಪಾಯಿಗೆ ಏರಿಕೆ ಮಾಡುವ ಲೆಕ್ಕಾಚಾರವಿದೆ. ಸರ್ಕಾರಿ ನೌಕರರು ತಮ್ಮ ವೇತನದಲ್ಲಿ ನಿರ್ದಿಷ್ಟ ಹೆಚ್ಚಳವನ್ನು ಪಡೆಯಲು ಕಾತುರದಿಂದ ಕಾಯುತ್ತಿದ್ದಾರೆ.
ಈಗಾಗಲೇ ದೇಶಾದ್ಯಂತ ಒಂದು ಕೋಟಿಗೂ ಹೆಚ್ಚು ಇರುವ ಕೇಂದ್ರ ಸರ್ಕಾರಿ ನೌಕರರ ಹಣದುಬ್ಬರವನ್ನು 7ನೇ ವೇತನ ಆಯೋಗದ ಭತ್ಯೆ ಏರಿಕೆಗಳು ನಿಭಾಯಿಸುತ್ತಿವೆ. ಕರ್ನಾಟಕ ಸರ್ಕಾರ 7ನೇ ವೇತನ ಆಯೋಗ (7th pay commission) ದ ವರದಿಯನ್ನು ಜಾರಿಗೊಳಿಸುವ ಮೂಲಕ 2024ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆಯನ್ನು ನೀಡಿದೆ. ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಇನ್ನೂ ಎರಡು ಪ್ರಮುಖ ಬೇಡಿಕೆಯನ್ನು ಇಟ್ಟಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮುಂದಿನ ವರ್ಷ ಉಳಿದ ಎರಡು ಬೇಡಿಕೆಗಳು ಈಡೇರುವ ನಿರೀಕ್ಷೆ :
ಸರ್ಕಾರಕ್ಕೆ ಸರ್ಕಾರಿ ನೌಕರರು ಈ ಎರಡು ಯೋಜನೆಗಳ ಬಗ್ಗೆ ಬೇಡಿಕೆ ನೀಡಿದ್ದು, ಈಗ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯುತ್ತಿದ್ದು, ಮುಂದಿನ ವರ್ಷ ಉಳಿದ ಎರಡು ಬೇಡಿಕೆಗಳು ಈಡೇರುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ.
ಸರ್ಕಾರಿ ನೌಕರರ ಯೋಜನೆಗಳ ಜಾರಿಗೆ ಪ್ರಯತ್ನ :
7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಅನುಮೋದನೆ ನೀಡಿದಾಗಲೇ ಸರ್ಕಾರಿ ನೌಕರರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (Arogya sanjeevini scheme) ಜಾರಿ, ಹೊಸ ಪಿಂಚಣಿ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಮರು ಜಾರಿಗೊಳಿಸುವ ಬೇಡಿಕೆಯನ್ನು ಇಟ್ಟಿದ್ದರು. ಈ ಎರಡು ಬೇಡಿಕೆಗಳು ಇನ್ನೂ ಈಡೇರಿಲ್ಲ. ಸರ್ಕಾರವು ಈ ಯೋಜನೆಗಳ ಜಾರಿಗೊಳಿಸಲು ಪ್ರಯತ್ನ ನಡೆಸುತ್ತಿದೆ.
ಆರೋಗ್ಯ ಸಂಜೀವಿನಿ ಯೋಜನೆ ಮುಂದಿನ ವರ್ಷ ಜನವರಿ ಅಥವ ಫೆಬ್ರವರಿಯಲ್ಲಿ ಜಾರಿ :
ಆರೋಗ್ಯ ಸಂಜೀವಿನಿ ಯೋಜನೆ ಮುಂದಿನ ವರ್ಷ (Next year) ಜನವರಿ ಅಥವ ಫೆಬ್ರವರಿಯಲ್ಲಿ ಜಾರಿಗೆ ಬರದಲಿದೆ. ನೌಕರರ ಒಳಿತಿಗಾಗಿ ಕಳೆದ ಅವಧಿಯ 25ಕ್ಕೂ ಹೆಚ್ಚು ಸರ್ಕಾರಿ ಆದೇಶಗಳನ್ನು ಮಾಡಿಸಲಾಗಿದೆ. ಈಗಾಗಲೇ ಈ ಎಲ್ಲಾ ಯೋಜನೆಗಳ ಜಾರಿಗೆ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಜಿಲ್ಲಾ ಹಾಗೂ ತಾಲೂಕು ಶಾಖೆಗಳಿಗೆ ಕಟ್ಟಡ ನಿರ್ಮಿಸಲು ಅನುದಾನ ಒದಗಿಸಿದ್ದು, ರಾಜ್ಯ ಸಂಘದ ಕಟ್ಟಡವನ್ನು 20 ಕೋಟಿ ಅನುದಾನದಲ್ಲಿ ನವೀಕರಣ ಮಾಡಲಾಗಿದೆ.
ವೇತನ ರಚನೆ, ವೇತನ ಶ್ರೇಣಿ ಸಮಾನ ವೇತನದ ಕುರಿತು ಸರ್ಕಾರಕ್ಕೆ ಶಿಫಾರಸುಗಳನ್ನು ಮಾಡಿದೆ :
ಸಿ. ಎಸ್. ಷಡಾಕ್ಷರಿ ಅವರು, 2026ಕ್ಕೆ ಕೇಂದ್ರ ಸರಿಸಮಾನವಾದ ವೇತನ ಪಡೆಯುವುದು ನಮ್ಮ ಗುರಿಯಾಗಿದೆ, ಎಂದು ಚಿತ್ರದುರ್ಗದಲ್ಲಿ ಹೇಳಿದ್ದಾರೆ. ಕರ್ನಾಟಕ ಸರ್ಕಾರ ರಚನೆ ಮಾಡಿದ್ದ ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗ ತನ್ನ ವರದಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೇತನ ರಚನೆ, ವೇತನ ಶ್ರೇಣಿ ಸಮಾನ ವೇತನ ಮುಂತಾದವುಗಳ ಕುರಿತು ಸರ್ಕಾರಕ್ಕೆ ಶಿಫಾರಸುಗಳನ್ನು (recommendations) ಮಾಡಿದೆ.
ರಾಜ್ಯದ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಯ ಕುರಿತು ಶಿಫಾರಸುಗಳನ್ನು ಮಾಡಿದೆ :
ಭಾರತ ಸರ್ಕಾರ ಮತ್ತು ಅಕ್ಕಪಕ್ಕದ ರಾಜ್ಯಗಳ ವೇತನ ಶ್ರೇಣಿಗಳನ್ನು ಪರಿಶೀಲಿಸಿ ರಾಜ್ಯದ ಸರ್ಕಾರಿ ನೌಕರರ ವೇತನ (state government employees payment) ಮತ್ತು ಭತ್ಯೆಗಳ ಪರಿಷ್ಕರಣೆಯ ಕುರಿತು ಶಿಫಾರಸುಗಳನ್ನು ಮಾಡಿದೆ. ಪ್ರಸ್ತುತ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದಲ್ಲಿ ಜಾರಿಯಲ್ಲಿರುವ ವೇತನ ರಚನೆ ಮತ್ತು ವೇತನ ಶ್ರೇಣಿಗಳು ಕಾಲಾಂತರದಲ್ಲಿ ವಿಭಿನ್ನ ರೀತಿಯಲ್ಲಿ ವಿಕಸನಗೊಂಡಿದ್ದು, ಈ ಪರಿಣಾಮವಾಗಿ ಅವುಗಳ ನಡುವೆ ವ್ಯತ್ಯಾಸವಿದೆ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ 7ನೇ ರಾಜ್ಯ ವೇತನ ಆಯೋಗ ಹೇಳಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




