Picsart 25 10 09 23 25 33 427 scaled

ಸಿಸಿ–ಒಸಿ ಇಲ್ಲದ ಮನೆಗಳಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್: ನೀರು, ವಿದ್ಯುತ್ ಸಂಪರ್ಕಕ್ಕೆ ಅನುಮತಿ 

Categories:
WhatsApp Group Telegram Group

ಬೆಂಗಳೂರು ನಗರ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಸಿಸಿ (Completion Certificate) ಮತ್ತು ಒಸಿ (Occupancy Certificate) ಪಡೆಯದೆ ಮನೆಗಳನ್ನು ನಿರ್ಮಿಸಿರುವ ಸಾವಿರಾರು ಮನೆ ಮಾಲೀಕರಿಗೆ ರಾಜ್ಯ ಸರ್ಕಾರದಿಂದ(State government) ಸಿಹಿ ಸುದ್ದಿ ಕೇಳಿಬಂದಿದೆ. ಹಲವು ವರ್ಷಗಳಿಂದ ವಿದ್ಯುತ್ ಮತ್ತು ನೀರಿನ ಸಂಪರ್ಕಕ್ಕಾಗಿ ಪರದಾಡುತ್ತಿದ್ದ ಮನೆ ಮಾಲೀಕರಿಗೆ ಇದೀಗ ಸರ್ಕಾರದ ನಿರ್ಧಾರದಿಂದ ನೆಮ್ಮದಿ ಸಿಗಲಿದೆ. ಅನಧಿಕೃತ ಅಥವಾ ದಾಖಲೆ ಅಸ್ಪಷ್ಟವಾಗಿರುವ ಮನೆಗಳಿಗೆ ಮೂಲಭೂತ ಸೌಕರ್ಯ ನೀಡುವುದು ಹೇಗೆ ಎಂಬುದರ ಕುರಿತು ಸರ್ಕಾರವು ಈಗ ಸ್ಪಷ್ಟ ದಾರಿ ತೋರಲು ಮುಂದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ಇಂಧನ, ನಗರಾಭಿವೃದ್ಧಿ ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಸಿಸಿ ಮತ್ತು ಒಸಿ ಇಲ್ಲದ ಮನೆಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಕುರಿತಾಗಿ ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ನಿರ್ಣಯದ ಪ್ರಕಾರ, 1,200 ಚದರ ಮೀಟರ್ ವಿಸ್ತೀರ್ಣದೊಳಗಿನ ಮನೆಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡಲು ಸರ್ಕಾರ ಮುಂದಾಗಿದೆ. ಇದರಲ್ಲಿ ವಿಶೇಷವಾಗಿ 30X40 ಅಡಿ ವಿಸ್ತೀರ್ಣದ ಸೈಟ್‌ಗಳಲ್ಲಿ ನಿರ್ಮಿಸಿರುವ ಮನೆಗಳಿಗೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಸ್ಪಷ್ಟಪಡಿಸಲಾಗಿದೆ.

ಮುಂದಿನ ಹಂತದಲ್ಲಿ ಈ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ಅನುಮೋದನೆ ಪಡೆಯಲಾಗುವುದು. 1,200 ಚ.ಮೀ.ಗಿಂತ ಹೆಚ್ಚಿನ ವಿಸ್ತೀರ್ಣದ ಕಟ್ಟಡಗಳಿಗೆ ಸುಗ್ರೀವಾಜ್ಞೆಯ ಮೂಲಕ ಅನುಮತಿ ನೀಡುವ ವಿಷಯವನ್ನೂ ಚರ್ಚೆಗೆ ತರಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಕಾನೂನು ಅಡೆತಡೆಗಳ ನಿವಾರಣೆ ಕುರಿತಂತೆ ಸಭೆಯಲ್ಲಿ ಸಮಾಲೋಚನೆ ನಡೆಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

ಸಭೆಯ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Deputy Chief Minister D.K. Shivakumar) ಮಾತನಾಡಿ, 30X40 ಸೈಟ್‌ನಲ್ಲಿ ಮನೆ ಕಟ್ಟಿರುವವರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕಾನೂನು ಅಡೆತಡೆಗಳನ್ನು ನಿವಾರಿಸಿ, ನೀರು ಮತ್ತು ವಿದ್ಯುತ್‌ ಸಂಪರ್ಕ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇಂಧನ ಇಲಾಖೆಯ ಕೆಲವು ತಾಂತ್ರಿಕ ಅಡೆತಡೆಗಳಿವೆ, ಅದನ್ನು ನಿವಾರಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ.

ಈ ನಿರ್ಧಾರದಿಂದ ಲಕ್ಷಾಂತರ ಮನೆಮಾಲೀಕರಿಗೆ ನೇರ ಲಾಭವಾಗುವ ಸಾಧ್ಯತೆ ಇದೆ. ವರ್ಷಗಳ ಕಾಲ ದಾಖಲೆ ಸಮಸ್ಯೆಯಿಂದಾಗಿ ಮೂಲಭೂತ ಸೌಕರ್ಯವಿಲ್ಲದೆ ಇದ್ದ ಮನೆಗಳಿಗೆ ಇದೀಗ ಒಂದು ಭರವಸೆ ಸಿಕ್ಕಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories