WhatsApp Image 2025 11 19 at 6.21.46 PM

ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Categories:
WhatsApp Group Telegram Group

ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ (ನೇಗೇರಿಯಾ ಫೌಲೇರಿ) ಕುರಿತ ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಸಲಹಾ ಮಾರ್ಗಸೂಚಿ. ದಯವಿಟ್ಟು ಎಲ್ಲಾ ಸಮಸ್ತ ಅಯ್ಯನ ಮಾಲಧಾರಿ ಸ್ವಾಮಿಗಳು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿ ವಿನಂತಿ

ಸಾರ್ವಜನಿಕ ಮಾಹಿತಿ

ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ (ನೇಗೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆವಹಿಸಲು ಸುರಕ್ಷತಾ ಸಲಹಾ ಮಾರ್ಗಸೂಚಿ
ಕೇರಳ ರಾಜ್ಯದಲ್ಲಿ ನೇಗೇರಿಯಾ ಫೌಲೇರಿ (Naegleria fowleri) ಇಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ನೆಫಲೈಟಿಸ್ (Amoebic meningoencephalitis) ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರಿಗೆ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವ ಕುರಿತು ಸಲಹೆಗಳನ್ನು ಕೆಳಕಂಡಂತೆ ನೀಡಲಾಗಿದೆ.

  1. ನೇಗೇರಿಯಾ ಫೌಲೇರಿ (Naegleria fowler) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ.
    ಉದಾಹರಣೆಗೆ ನಿಂತ ನೀರು ಕೊಳ/ಈಜು ಕೊಳಗಳು ಹಾಗೂ ಕೆರೆ.
  2. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ
  3. ನೆಗೋರಿಯಾ ಫೌಲರಿ (Naegleria fowleri) ಅತ್ಯಂತ ವಿಷಕಾರಿ (virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ (Amoebic meningoencephalitis) 2 /ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ರಿಪ್‌ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸಿ.
  4. ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವು ತಲೆನೋವು, ವಾಕರಿಕೆ/ ವಾಂತಿ, ಕುತ್ತಿಗೆ ಬಿಗಿತ, ಗೊಂದಲ/ ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಕೃತೆ (behavioural disorders) ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ/ ವೈದ್ಯರನ್ನು ಸಂಪರ್ಕಿಸಿ.


WhatsApp Image 2025 11 19 at 6.14.20 PM
This image has an empty alt attribute; its file name is WhatsApp-Image-2025-09-05-at-10.22.29-AM-3-1024x330.jpeg

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories