ದ್ವಿತೀಯ ಪಿಯುಸಿ ಪಾಸಾದವರಿಗೆ ಭರ್ಜರಿ ಸರ್ಕಾರಿ ಉದ್ಯೋಗಾವಕಾಶ! ಇಲ್ಲಿದೆ ಮಾಹಿತಿ!

govt. jobs after puc

ದ್ವಿತೀಯ ಪಿಯುಸಿ( 2nd PUC) ಪಾಸು ಮಾಡಿ, ಸರ್ಕಾರಿ ಉದ್ಯೋಗದ ಕನಸು ಕಾಣ್ತಿದ್ದೀರಾ? ಈಗ ನಿಮ್ಮ ಕನಸು ನನಸಾಗಲು ಸಮಯ ಬಂದಿದೆ! ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 2ನೇ ಪಿಯುಸಿ ಪಾಸಾದವರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ. ಯಾವ ಯಾವ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು?, ಅರ್ಹತೆ ಏನು?, ಹೇಗೆ ಅರ್ಜಿ ಸಲ್ಲಿಸಬೇಕು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

2ನೇ ಪಿಯುಸಿ ಉತ್ತೀರ್ಣರಿಗೆ ಸರ್ಕಾರಿ ಹುದ್ದೆಗಳ ಅವಕಾಶಗಳು(Govt Jobs Opportunities for 2nd PUC Passed students)

ತಮಗೆಲ್ಲರಿಗೂ ತಿಳಿದಿರುವ ಹಾಗೆ,  2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿದೆ. ಮುಂದಿನ ಹಂತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-3 ಕೂಡ ನಡೆಯಲಿದ್ದು, ಅದರ ಫಲಿತಾಂಶ ಸಹ ಹೊರಬೀಳಲಿದೆ. ಸಿಬಿಎಸ್‌ಇ(CBSE) ಫಲಿತಾಂಶ ಸಹ ಬಿಡುಗಡೆಯಾಗಿದೆ. ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಲ್ಲಿ ಕೆಲವು ಮಾತ್ರ ಉನ್ನತ ಶಿಕ್ಷಣವನ್ನು ಮುಂದುವರಿಸಲಿದ್ದಾರೆ; ಇನ್ನು ಕೆಲವರು ಸರ್ಕಾರಿ ಉದ್ಯೋಗಗಳಿಗೆ ಆಕಾಂಕ್ಷಿಗಳಾಗಿದ್ದಾರೆ. ಇಂದಿನ ಲೇಖನದಲ್ಲಿ, ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಯಾವೆಲ್ಲ ರಾಜ್ಯ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದೆಂದು ವಿವರಿಸಲಾಗಿದೆ. ಈ ಹುದ್ದೆಗಳ ಕುರಿತು ಅಧಿಸೂಚನೆ ಪ್ರಕಟವಾಗಿದಾಗ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಈ ಹುದ್ದೆಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ(Competative exam) ಮೂಲಕವೇ ಆಯ್ಕೆಯನ್ನು ಮಾಡಲಾಗುತ್ತದೆ.

ಎಸ್‌ಡಿಎ(SDA) ಅಥವಾ ದ್ವಿತೀಯ ದರ್ಜೆ ಸಹಾಯಕ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು, ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸಹಕಾರ ಸಂಸ್ಥೆಗಳು, ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳೆಲ್ಲವೂ ಸಾಮಾನ್ಯವಾಗಿ ಎಸ್‌ಡಿಎ ಅಥವಾ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಹೊಂದಿರುತ್ತವೆ. ಈ ಹುದ್ದೆಗಳಿಗೆ ಅರ್ಜಿ ಹಾಕಲು, ಅರ್ಹರಾದ ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಿದ ಬಳಿಕ, ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಮಾಡಲಾಗುತ್ತದೆ.

ಕರ್ನಾಟಕ ಪೊಲೀಸ್ ಇಲಾಖೆಯ ಹುದ್ದೆಗಳು(Karnataka Police Department Vacancies):

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ವಿವಿಧ ಹುದ್ದೆಗಳಿವೆ. ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಗತ್ಯವಿದೆ. ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ, ಸಶಸ್ತ್ರ ಪೊಲೀಸ್ ಪಡೆ, ಮತ್ತು ಸಶಸ್ತ್ರ ಮೀಸಲು ಪೊಲೀಸ್‌ ಪಡೆಗಳಲ್ಲಿ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಹತೆ ಹೊಂದಲು, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾದಿರಬೇಕು. ಈ ವಿದ್ಯಾರ್ಹತೆಯನ್ನು ಹೊಂದಿದವರು ಅಧಿಸೂಚನೆ ಬಿಡುಗಡೆಯಾಗುವಾಗ ಅರ್ಜಿ ಸಲ್ಲಿಸಬಹುದು.

ಗ್ರಾಮ ಆಡಳಿತ ಅಧಿಕಾರಿ(Village Administrative Officer):

ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳಿಗೆ ಹಿಂದೆ ಗ್ರಾಮ ಲೆಕ್ಕಾಧಿಕಾರಿ ಎಂದು ಕರೆಯಲಾಗುತ್ತಿತ್ತು. ಇತ್ತೀಚೆಗೆ, ಈ ಹುದ್ದೆಗಳ ಪದನಾಮವನ್ನು ಉನ್ನತೀಕರಿಸಿ ಗ್ರಾಮ ಆಡಳಿತ ಅಧಿಕಾರಿ ಎಂದು ಪರಿವರ್ತಿಸಲಾಗಿದೆ. ಮೊದಲು ಈ ಹುದ್ದೆಗಳಿಗೆ ಕೇವಲ ದ್ವಿತೀಯ ಪಿಯುಸಿ ಅಂಕಗಳನ್ನು ಆಧಾರಮಾಡಿ ನೇಮಕ ಮಾಡಲಾಗುತ್ತಿತ್ತು. ಆದರೆ ಈಗ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ದ್ವಿತೀಯ ಪಿಯುಸಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇತ್ತೀಚೆಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಹುದ್ದೆಗಳಿಗೆ ಅಧಿಸೂಚನೆ ನೀಡಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ.

ಗ್ರಾಮಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-1, ಗ್ರೇಡ್‌-2(Gram Panchayat Secretary Grade-1, Grade-2)

ಕಂದಾಯ ಇಲಾಖೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯದರ್ಶಿ ಗ್ರೇಡ್‌-1 ಮತ್ತು ಗ್ರೇಡ್‌-2 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಅಧಿಸೂಚನೆ ಪ್ರಕಟವಾಗಲಿದೆ. ಈ ಹುದ್ದೆಗಳಿಗೆ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗಾಗಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಬಹುದು.

ಟೈಪಿಸ್ಟ್‌ ಹಾಗೂ ಸ್ಟೆನೋಗ್ರಾಫರ್(Typist and Stenographer):

ಈ ಹುದ್ದೆಗಳಿಗೆ ನೇಮಕಾತಿಯು ಉಚ್ಛ ನ್ಯಾಯಾಲಯಗಳು, ಜಿಲ್ಲಾ ಸೆಷನ್ ಕೋರ್ಟ್‌ಗಳು, ಮತ್ತು ತಾಲ್ಲೂಕು ಮಟ್ಟದ ಸಿವಿಲ್ ಮತ್ತು ಸೆಷನ್ ಕೋರ್ಟ್‌ಗಳಲ್ಲಿ ಟೈಪಿಸ್ಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇರುವಾಗ ಅಧಿಸೂಚನೆಯನ್ನು ಬಿಡುಗಡೆ ಮಾಡುತ್ತಾರೆ. ಈ ಹುದ್ದೆಗಳಿಗೆ ಅರ್ಹತೆ ಪಡೆಯಲು, ಅಭ್ಯರ್ಥಿಗಳು ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು ಅಥವಾ ಕಮರ್ಶಿಯಲ್ ಪ್ರಾಕ್ಟೀಸ್ ಡಿಪ್ಲೊಮ(diploma) ಹೊಂದಿರಬೇಕು. ಜೊತೆಗೆ, ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಅಥವಾ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಈ ಅರ್ಹತೆಗಳಿದ್ದಲ್ಲಿ, ಅಭ್ಯರ್ಥಿಗಳಿಗೆ ಸರ್ಕಾರಿ ಹುದ್ದೆಗಳಾದ ಈ ಸ್ಥಾನಗಳು ಸುಲಭವಾಗಿ ಲಭ್ಯವಾಗಬಹುದು.

ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಹುದ್ದೆಗಳು(Forest Guard Posts of Forest Department):

ರಾಜ್ಯ ಅರಣ್ಯ ಇಲಾಖೆಯಲ್ಲಿ ವಿವಿಧ ಪದನಾಮಗಳ ಅರಣ್ಯ ರಕ್ಷಕ ಹುದ್ದೆಗಳು ಲಭ್ಯವಿವೆ. ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾದ ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಅರಣ್ಯ ರಕ್ಷಕ (Forest guard) ಹುದ್ದೆ ಪ್ರಮುಖವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PET), ದೈಹಿಕ ಪ್ರಮಾಣ ಪತ್ರ (PST), ವೈದ್ಯಕೀಯ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮೂಲಕ ನಡೆಸಲಾಗುತ್ತದೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!