HRMS GOVT

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ HRMS ತಂತ್ರಾಂಶದಲ್ಲಿ ಈ ನೋಂದಣಿ ಕಡ್ಡಾಯ, ಸರ್ಕಾರದ ಆದೇಶ

Categories:
WhatsApp Group Telegram Group

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಪ್ರಮುಖ ಸೂಚನೆಯೊಂದನ್ನು ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಕೂಡಲೇ ಪಿಎಂಜೆಜೆಬಿವೈ (PMJJBY) ಮತ್ತು ಪಿಎಂಎಸ್‌ಬಿವೈ (PMSBY) ವಿಮಾ ಯೋಜನೆಗಳ ಮಾಹಿತಿಯನ್ನು ಎಚ್‌ಆರ್‌ಎಂಎಸ್‌ (HRMS) ತಂತ್ರಾಂಶದಲ್ಲಿ ದಾಖಲಿಸಬೇಕು ಎಂದು ಸೂಚಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರವು ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಎಲ್ಲಾ ಪ್ರಮುಖ ಬ್ಯಾಂಕ್‌ಗಳು ನೀಡುತ್ತಿರುವ ವೇತನ ಖಾತೆ ಯೋಜನೆಯ (Salary Account Scheme) ಪ್ರಯೋಜನಗಳನ್ನು ಪಡೆಯಲು, ನಿಮ್ಮ ಬ್ಯಾಂಕ್ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಿಕೊಳ್ಳಲು ತಿಳಿಸಿದೆ.

ವಿಮಾ ಯೋಜನೆಗಳ ವಿವರ ಮತ್ತು ನೋಂದಣಿ:

ಆರ್ಥಿಕ ಇಲಾಖೆಯ ಪತ್ರ ಸಂಖ್ಯೆ: FD-CAM/160/2023 ದಿನಾಂಕ: 06/09/2023 ರ ಅನ್ವಯ, ಪ್ರತಿ ಉದ್ಯೋಗಿಗಳು ಎರಡು ಮುಖ್ಯ ವಿಮಾ ಯೋಜನೆಗಳನ್ನು – ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) – ತಮ್ಮ ವೇತನ ಖಾತೆ ಇರುವ ಬ್ಯಾಂಕ್ ಮೂಲಕ ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ https://www.jansuraksha.gov.in/ ಲಿಂಕ್ ಅನ್ನು ಭೇಟಿ ನೀಡಬಹುದು.

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY)

  • ಪ್ರೀಮಿಯಂ: ವಾರ್ಷಿಕ ರೂ. 436/- (ಪ್ರೀಮಿಯಂ ವಿಮಾದಾರರ ಬ್ಯಾಂಕ್ ಖಾತೆಯಿಂದ ಕಡಿತವಾಗುತ್ತದೆ).
  • ಪ್ರಯೋಜನ: ಯಾವುದೇ ಕಾರಣದಿಂದ ಮರಣ ಸಂಭವಿಸಿದರೆ ಅವಲಂಬಿತ ಕುಟುಂಬ ಸದಸ್ಯರಿಗೆ ರೂ. 2.00 ಲಕ್ಷಗಳ ವಿಮಾ ಮೊತ್ತದ ನೆರವು.
  • ಅರ್ಹತೆ: 18 ರಿಂದ 50 ವರ್ಷದೊಳಗಿನ ಜನರಿಗೆ ಮಾತ್ರ ಲಭ್ಯ.

ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY)

  • ಸ್ವರೂಪ: ಇದು ಅಪಘಾತ ವಿಮಾ ಯೋಜನೆಯಾಗಿದೆ.
  • ಪ್ರೀಮಿಯಂ: ವಾರ್ಷಿಕ ರೂ. 20/- (ಪ್ರೀಮಿಯಂ ವಿಮಾದಾರರ ಬ್ಯಾಂಕ್ ಖಾತೆಯಿಂದ ಕಡಿತವಾಗುತ್ತದೆ).
  • ಪ್ರಯೋಜನ: ಅಪಘಾತದಿಂದ ಮೃತಪಟ್ಟರೆ ಅಥವಾ ಶಾಶ್ವತ ಒಟ್ಟು ಅಂಗವೈಕಲ್ಯಕ್ಕೆ ರೂ. 2.00 ಲಕ್ಷಗಳು, ಹಾಗೂ ಶಾಶ್ವತ ಭಾಗಶಃ ಅಂಗವೈಕಲ್ಯಕ್ಕೆ ರೂ. 1.00 ಲಕ್ಷಗಳ ವಿಮಾ ಮೊತ್ತದ ನೆರವು.
  • ಅರ್ಹತೆ: 18 ರಿಂದ 70 ವರ್ಷದೊಳಗಿನ ಜನರಿಗೆ ಮಾತ್ರ ಲಭ್ಯ.

ಈ ಎರಡೂ ವಿಮಾ ಯೋಜನೆಗಳು ನಿಮ್ಮ ಕುಟುಂಬಕ್ಕೆ ಅತ್ಯಂತ ಉಪಯುಕ್ತವಾಗಿವೆ.

HRMS ಪೋರ್ಟಲ್‌ನಲ್ಲಿ ಮಾಹಿತಿ ದಾಖಲು ಕಡ್ಡಾಯ

ಆರ್ಥಿಕ ಇಲಾಖೆಯ ಮತ್ತೊಂದು ಪತ್ರ ಸಂಖ್ಯೆ: FD-CAM/160/2023 ದಿನಾಂಕ: 02/11/2023 ರನ್ವಯ, ಪಿಎಂಜೆಜೆಬಿವೈ ಮತ್ತು ಪಿಎಂಎಸ್‌ಬಿವೈ ವಿಮಾ ವಿವರಗಳನ್ನು ಎಚ್‌ಆರ್‌ಎಂಎಸ್‌ ಇಎಸ್‌ಎಸ್‌ (ESS) ಲಾಗಿನ್ ಪೋರ್ಟಲ್‌ನಲ್ಲಿ (https://hrmsess.karnataka.gov.in) ದಾಖಲಿಸಲು ಸೂಚಿಸಲಾಗಿದೆ.

  • ಪ್ರತಿ ಸಿಬ್ಬಂದಿ ಹಾಗೂ ಡಿಡಿಓ (DDO) ಗಳು ಈ ವಿಮಾ ಯೋಜನೆಯನ್ನು ಖಚಿತವಾಗಿ ಪಡೆದುಕೊಳ್ಳುವುದು ಮತ್ತು ಇಎಸ್‌ಎಸ್‌ ಪೋರ್ಟಲ್‌ನಲ್ಲಿ ಈ ದಾಖಲೆಯನ್ನು ನವೀಕರಿಸುವುದು ಅವರ ಜವಾಬ್ದಾರಿಯಾಗಿದೆ.
  • ಈ ಪ್ರಗತಿಯನ್ನು ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಅವರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ನಿಮ್ಮ ಮತ್ತು ಕುಟುಂಬದ ಫಲಾನುಭವಿಗಳನ್ನು ನವೀಕರಿಸಿದ್ದರೆ ಮಾತ್ರ ಆ ಯೋಜನೆಯ ಸಂಪೂರ್ಣ ಲಾಭವನ್ನು ಪಡೆಯಲು ಸಾಧ್ಯ ಎಂಬುದನ್ನು ಗಮನದಲ್ಲಿರಿಸಬೇಕು.

ಡಿಡಿಓಗಳ ಜವಾಬ್ದಾರಿ:

ಎಲ್ಲಾ ಉದ್ಯೋಗಿಗಳು ESS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು, ತಮ್ಮ ಪಾವತಿ ಚೀಟಿ (Pay Slip), ರಜೆ ವಿವರಗಳು ಮತ್ತು ಕಡಿತದ ಸಾರಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಸೌಲಭ್ಯವನ್ನು ಪಡೆಯುತ್ತಿರುವ ಬಗ್ಗೆ ಡಿಡಿಓರವರು ಖಚಿತಪಡಿಸಿಕೊಳ್ಳಬೇಕು. ತಮ್ಮ ಎಲ್ಲಾ ಉದ್ಯೋಗಿಗಳು ಜನವರಿ 1, 2024 ರ ಮೊದಲು ಈ ಪೋರ್ಟಲ್‌ನಲ್ಲಿ ನೋಂದಾಯಿಸಲು ಅನುವು ಮಾಡಿಕೊಡುವ ಜವಾಬ್ದಾರಿ ಡಿಡಿಓರವರದಾಗಿರುತ್ತದೆ ಎಂದಿದೆ.

WhatsApp Image 2025 09 05 at 11.51.16 AM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories