ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಯರಿಗೆ ಸರ್ಕಾರದಿಂದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು. 2025-26ರ ಆರ್ಥಿಕ ಸಾಲಿನ ಔದ್ಯೋಗಿಕ ಕೇಂದ್ರ ಯೋಜನೆಯಡಿಯಲ್ಲಿ ಈ ಪ್ರಯೋಜನವನ್ನು ನೀಡಲಾಗುತ್ತಿದೆ. ಹೊಲಿಗೆ ಯಂತ್ರಗಳ ಜೊತೆಗೆ, ವೃತ್ತಿಪರ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳನ್ನೂ ನೀಡಲಾಗುವುದು.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯೋಜನೆಯ ವಿವರ:
ಈ ಯೋಜನೆಯಡಿ, ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಟೈಲರಿಂಗ್, ಮರಗೆಲಸ, ಗಾರೆಕೆಲಸ, ಕ್ಷೌರಿಕೆ, ದೋಬಿ, ವಿದ್ಯುತ್ ಸಾಧನಗಳ ದುರಸ್ತಿ, ಬೋರ್ ಬಾವಿ ಮತ್ತು ಮೋಟಾರ್ ವೈಂಡಿಂಗ್ ಸಲಕರಣೆಗಳಂತಹ ವೃತ್ತಿಪರ ಉಪಕರಣಗಳನ್ನು ಉಚಿತವಾಗಿ ನೀಡಲಾಗುವುದು. ಇದರ ಮೂಲಕ ಸ್ವಯಂ ಉದ್ಯೋಗ ಸೃಷ್ಟಿಸಿಕೊಳ್ಳಲು ಅವಕಾಶವಾಗಲಿದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರಾದ ಫಲಾನುಭೋಗಿಗಳು ಹಾಸನ ಜಿಲ್ಲಾ ಆಡಳಿತದ ಅಧಿಕೃತ ವೆಬ್ ಸೈಟ್ www.hassan.nic.in ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಆಗಸ್ಟ್ 31, 2025. ನಿಗದಿತ ಸಂಖ್ಯೆಗಿಂತ ಹೆಚ್ಚು ಅರ್ಜಿಗಳು ಬಂದರೆ, ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಕೈಗಾರಿಕಾ ವಿಭಾಗದ ಉಪನಿರ್ದೇಶಕರು ತಿಳಿಸಿದ್ದಾರೆ.
ಸಂಪರ್ಕ ವಿವರ:
ಹೆಚ್ಚಿನ ಮಾಹಿತಿಗಾಗಿ, ಉಪನಿರ್ದೇಶಕರು (ಗ್ರಾಮೀಣ ಕೈಗಾರಿಕೆ), ಜಿಲ್ಲಾ ಪಂಚಾಯತ್ ಕಚೇರಿ, ಕೈಗಾರಿಕಾ ವಿಭಾಗ, ಹಾಸನದ ಡೈರಿ ಸರ್ಕಲ್ ಬಳಿ ಇರುವ ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿಗೆ ಸಂಪರ್ಕಿಸಬಹುದು.
ಈ ಯೋಜನೆಯು ಗ್ರಾಮೀಣ ಮಹಿಳೆಯರು ಮತ್ತು ಕುಶಲಕರ್ಮಿಗಳ ಆರ್ಥಿಕ ಸಬಲೀಕರಣಕ್ಕೆ ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.