ರಾಜ್ಯದ 1.27 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇಂದು ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ ತಿಂಗಳ 23ನೇ ಕಂತಿನ ಹಣ ಇಂದು ನವೆಂಬರ್ 28ಕ್ಕೆ ಬಿಡುಗಡೆಯಾಗಿದೆ. ಮಹಿಳೆಯರ ಉನ್ನತೀಕರಣಕ್ಕೆ 30 ಸಾವಿರದಿಂದ 3 ಲಕ್ಷದ ವರೆಗೂ ಸಾಲ ಸಿಗುವ ಯೋಜನೆಯಾದ ಗೃಹಲಕ್ಷ್ಮಿ ಬ್ಯಾಂಕ್ ಕೂಡಾ ಇಂದಿನಿಂದ ಆರಂಭವಾಗಿದೆ. ಮಹಿಳೆಯರ ರಕ್ಷಣೆಗಾಗಿ ಅಕ್ಕಪಡೆ ಕೂಡಾ ಪ್ರಾರಂಭವಾಗಿದೆ. ಇಂದಿನ ಈ ಕಾರ್ಯಕ್ರಮದಲ್ಲಿ ಸಿ.ಎಂ.ಸಿದ್ದರಾಮಯ್ಯ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಬ್ಯಾಂಕ್ ಗೆ ಅಧಿಕೃತ ಚಾಲನೆಯನ್ನು ಕೊಟ್ಟಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಬಾಕಿಯಿರುವ 23ನೇ ಕಂತಿನ ಹಣದ ಕುರಿತು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ಲಕ್ಷ್ಮೀ ಹೆಬ್ಬಾಳ್ಕರ್ ಇದೀಗ ಮಹತ್ವದ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಈಗ ಜಿಲ್ಲಾಡಳಿತ, ಜಿಪಂ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಯುತ್ತಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ರಾಜ್ಯ ಮಟ್ಟದ ಸಮಾವೇಶದ ಸಭೆಯಲ್ಲಿ ಇದೀಗ ಘೋಷಣೆ ಮಾಡಿದ್ದಾರೆ.
23 ನೇ ಕಂತಿನ ಗೃಹಲಕ್ಷ್ಮಿ ಹಣ ಮತ್ತು ಗೃಹಲಕ್ಷ್ಮಿ ಬ್ಯಾಂಕ್ ಅಧಿಕೃತ ಚಾಲನೆ
‘ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 1.27ಕೋಟಿ ಫಲಾನುಭವಿಗಳಿದ್ದಾರೆ. ಈವರೆಗೆ 22 ಕಂತಿನ ಯೋಜನೆಯ ಹಣ ಖಾತೆಗೆ ಜಮಾ ಆಗಿದೆ. ಇದುವರೆಗೂ 44000 ರೂ ಖಾತೆಗೆ ಹಾಕಲಾಗಿದೆ. ಇದೀಗ ಸೆಪ್ಟೆಂಬರ್ ತಿಂಗಳ 23ನೇ ಕಂತಿನ ಹಣ ಬಿಡುಗಡೆಗೆ ಕ್ರಮವಹಿಸಲಾಗಿದ್ದು, ಇಂದು ನವೆಂಬರ್ 28ಕ್ಕೆ ಹಣ ಬಿಡುಗಡೆಯಾಗಲಿದೆ,” ಎಂದರು.
ಗೃಹಲಕ್ಷ್ಮೀಯರಿಗೆ ಸಿಹಿ ಸುದ್ದಿ; ನ. 28ರಂದು ಗೃಹ ಲಕ್ಷ್ಮೀ ಸಹಕಾರ ಬ್ಯಾಂಕ್‌ಗೆ ಇಂದು ಚಾಲನೆ ಕೊಟ್ಟಿದ್ದಾರೆ ಏನೆಲ್ಲ ಷರತ್ತು?, ಸಾಲ ಪಡೆಯೋದು ಹೇಗೆ? ಎಂದು ವಿವರವಾಗಿ ತಿಳಿಯೋಣ
ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಯಶಸ್ಸು ಕಂಡಿದ್ದು, ಇದೀಗ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ ಬ್ಯಾಂಕ್ ಅನ್ನು ಆರಂಭಿಸಿದೆ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
30 ಸಾವಿರದಿಂದ 3 ಲಕ್ಷದ ವರೆಗೂ ಸಾಲದ ಸಹಾಯ
”ಈ ಬ್ಯಾಂಕ್‌ನಲ್ಲಿ ಷೇರುದಾರ ಆಗಬಹುದು. ನಂತರ ಪ್ರತಿ ತಿಂಗಳಂತೆ 200 ರೂ.ಉಳಿತಾಯ ಮಾಡಬೇಕು. 6 ತಿಂಗಳ ಉಳಿತಾಯದ ನಂತರ ಅವರು ಸಾಲ ಪಡೆಯಲು ಅರ್ಹರಾಗುತ್ತಾರೆ. ಈ ಬ್ಯಾಂಕಿನ ಮೂಲಕ ಕೃಷಿ, ಶಿಕ್ಷಣ, ಆರೋಗ್ಯಕ್ಕಾಗಿ ಸಾಲ ಪಡೆಯಲು ಅವಕಾಶವಿದೆ. ಪ್ರತಿಯೊಬ್ಬರು 30 ಸಾವಿರದಿಂದ 3 ಲಕ್ಷದ ವರೆಗೂ ಸಾಲ ಪಡೆಯಬಹುದಾಗಿದೆ. ರಾಜ್ಯದಲ್ಲಿ ಖಾಸಗಿ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು, ಗೃಹಲಕ್ಷಿ ಬ್ಯಾಂಕ್‌ನಿಂದ ಇದರ ಹಾವಳಿ ತಪ್ಪಿಸಲು ಸಹಕಾರಿಯಾಗಲಿದೆ,” ಎಂದರು.
ಮಹಿಳೆಯರ ರಕ್ಷಣೆಗೆ ಅಕ್ಕಪಡೆ ಸೇನೆ
‘ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಅಕ್ಕಪಡೆಯನ್ನು ಪ್ರಾರಂಭಿಸಿದೆ. ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಇದು ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕ ಸ್ಥಳಗಳಾದ ಕಾಲೇಜು, ದೇವಾಲಯ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಕಡೆಗಳಲ್ಲಿ ಅಕ್ಕಪಡೆಯ ಸದಸ್ಯರು ಗಸ್ತು ತಿರುಗಲಿದ್ದಾರೆ” ಎಂದರು.
”ಇಂದು ನ.28 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕಪಡೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ 3000 ಮಂದಿ ಮಹಿಳೆಯರು ಭಾಗಿಯಾಗಿದ್ದಾರೆ,”

ಈ ಮಾಹಿತಿಗಳನ್ನು ಓದಿ
- ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್‌ಗೆ ಸೇರಲು 1,000 ರೂ ಕೊಟ್ಟು ಷೇರ್ ಹೋಲ್ಡರ್ ಆಗಬೇಕು ಯಾರಿಗೆ ಎಷ್ಟು ಸಾಲ ಸಿಗುತ್ತೆ? ಏನೆಲ್ಲಾ ನಿಯಮ?
- Gruhalakshmi: ಅಕ್ಟೋಬರ್ ತಿಂಗಳ ಈ ದಿನ ಗೃಹಲಕ್ಷ್ಮಿ ಬಾಕಿ ಹಣ ಖಾತೆಗೆ ಜಮಾ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
- BIGNEWS : ಗೃಹಲಕ್ಷ್ಮಿ ಬಾಕಿ 4000ರೂ ಹಣ ಈ ದಿನದಂದು ಖಾತೆಗೆ ಜಮೆ? ಅಧಿಕೃತ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್..!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


WhatsApp Group




