lakshmi hebbalkar

Gruhalakshmi: ಗೃಹಲಕ್ಷ್ಮಿ ₹4000/- ಪೆಂಡಿಂಗ್ ಹಣ ಈ ದಿನ ಖಾತೆಗೆ ಜಮಾ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ!

WhatsApp Group Telegram Group

ಕರ್ನಾಟಕ ರಾಜ್ಯದ ಲಕ್ಷಾಂತರ ಗೃಹಿಣಿಯರಿಗೆ ಸಿಹಿಸುದ್ದಿಯೊಂದು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಂತುಗಳ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಫಲಾನುಭವಿ ಮಹಿಳೆಯರ ಖಾತೆಗೆ 2000 ರೂಪಾಯಿ ಜಮಾ ಮಾಡಲಾಗುತ್ತದೆ. ಆದರೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಂತುಗಳು ಇನ್ನೂ ಬಿಡುಗಡೆಯಾಗಿಲ್ಲ ಎಂಬ ಕಾರಣಕ್ಕೆ ಫಲಾನುಭವಿಗಳಲ್ಲಿ ಆತಂಕವಿತ್ತು. ಈಗ ಸಚಿವೆ ಅವರ ಹೇಳಿಕೆಯಿಂದ ಗೃಹಿಣಿಯರು ನಿರಾಳರಾಗಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಗೃಹಲಕ್ಷ್ಮಿ ಯೋಜನೆಯನ್ನು ಕಾಪಿ ಮಾಡುತ್ತಿದೆ – ಲಕ್ಷ್ಮೀ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯನ್ನು ಮಾದರಿಯನ್ನಾಗಿ ಇಟ್ಟುಕೊಂಡು ಬಿಜೆಪಿ ನಾಯಕರು ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಮತ್ತು ಅದೇ ರೀತಿಯ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಕರ್ನಾಟಕವನ್ನು ರೋಲ್ ಮಾಡಲ್ ಆಗಿ ತೋರಿಸುತ್ತಾ ಬಿಜೆಪಿ ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.

ಅಂಗನವಾಡಿ ಕೇಂದ್ರಗಳ ಸುವರ್ಣ ಮಹೋತ್ಸವ ಆಚರಣೆ

ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿ 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವವನ್ನು ಭೋಡಿಯಾಗಿ ಆಚರಿಸಲಾಗುತ್ತಿದೆ. ಕರ್ನಾಟಕದಿಂದಲೇ ಅಂಗನವಾಡಿ ಯೋಜನೆ ಆರಂಭವಾಗಿದ್ದು, 1975ರಲ್ಲಿ ತಿಪ್ಪೇಸ್ವಾಮಿ ನರಸೀಪುರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಉದ್ಘಾಟಿಸಿದ್ದರು. ನವೆಂಬರ್ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 10 ಜಿಲ್ಲೆಗಳಲ್ಲಿ ಪೂರ್ವಭಾವಿ ಕಾರ್ಯಕ್ರಮಗಳು ನಡೆಯುತ್ತಿವೆ. ಇದು ಕೇವಲ ಸಂಭ್ರಮದ ಕಾರ್ಯಕ್ರಮವಲ್ಲ, ಇಂದಿರಾ ಗಾಂಧಿ ಅವರ ಕನಸನ್ನು ಮುಂದುವರಿಸುವ ಘೋಷಣೆಯಾಗಿದೆ ಎಂದು ಸಚಿವೆ ತಿಳಿಸಿದರು.

ಮಹಿಳಾ ಸುರಕ್ಷತೆಗೆ ‘ಅಕ್ಕಪಡೆ’ – ಹೊಸ ಉಪಕ್ರಮ

ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ‘ಅಕ್ಕಪಡೆ’ ಎಂಬ ಹೊಸ ತಂಡವನ್ನು ರಚಿಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ, ವಿಶೇಷವಾಗಿ ನಗರ ಪ್ರದೇಶಗಳಲ್ಲಿ 10 ಮಂದಿ ಮಹಿಳಾ ಸಿಬ್ಬಂದಿ, ಇಬ್ಬರು ಮಹಿಳಾ ಪೊಲೀಸರು, ಎನ್‌ಸಿಸಿ ಮತ್ತು ಹೋಮ್ ಗಾರ್ಡ್ ಸದಸ್ಯರು ಸೇರಿ ತಂಡ ರೂಪುಗೊಳ್ಳಲಿದೆ. ಈ ತಂಡಕ್ಕೆ ವಾಹನ ಮತ್ತು ಚಾಲಕ ಸೌಲಭ್ಯವಿರಲಿದೆ. ಶಾಲಾ-ಕಾಲೇಜು, ಬಸ್ ನಿಲ್ದಾಣ, ಪಾರ್ಕ್, ದೇವಾಲಯ, ಹಾಸ್ಟೆಲ್, ಜನಸಂದಣಿ ಪ್ರದೇಶಗಳಲ್ಲಿ ಗಸ್ತು ನಡೆಸಲಿದ್ದಾರೆ. ರೋಡ್ ರೋಮಿಯೋಗಳು, ಮಹಿಳಾ ಚುಡಾಯಿಸುವಿಕೆ, ಮನೆಯೊಳಗಿನ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಗೌಪ್ಯವಾಗಿ ತಿಳಿಸಬಹುದು. ಕಮಾಂಡೋ ಡ್ರೆಸ್ ಧರಿಸಿದ ಅಕ್ಕಪಡೆ ಸದಸ್ಯರು ತಕ್ಷಣ ಸ್ಪಂದಿಸಲಿದ್ದಾರೆ. ಪೊಲೀಸ್ ಇಲಾಖೆಯ ಹೆಲ್ಪ್‌ಲೈನ್ ಸಂಖ್ಯೆಯಲ್ಲೇ ಕರೆ ಮಾಡಬಹುದು ಎಂದು ಸಚಿವೆ ವಿವರಿಸಿದರು.

ಅಂಗನವಾಡಿ ಕಟ್ಟಡಗಳ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿ

ರಾಜ್ಯದಲ್ಲಿ 69,500 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 50 ಸಾವಿರಕ್ಕೂ ಹೆಚ್ಚು ಕೇಂದ್ರಗಳು ಸ್ವಂತ ಕಟ್ಟಡಗಳಲ್ಲಿವೆ. ದೇಶದಲ್ಲೇ ಇದು ಅತಿ ಹೆಚ್ಚು ಸ್ವಂತ ಕಟ್ಟಡಗಳ ಸಂಖ್ಯೆಯಾಗಿದ್ದು, ಇದಕ್ಕಾಗಿ ಹೆಮ್ಮೆಪಡುತ್ತೇವೆ ಎಂದು ಸಚಿವೆ ತಿಳಿಸಿದರು. ಪ್ರತಿ ವರ್ಷ 2000 ಕಟ್ಟಡಗಳ ನಿರ್ಮಾಣ ಗುರಿಯಿದ್ದು, ತಾವು ಸಚಿವೆಯಾದ ಬಳಿಕ 2500 ಕಟ್ಟಡಗಳಿಗೆ ಅನುಮೋದನೆ ನೀಡಲಾಗಿದೆ. ಕೆಲವು ಕಾಮಗಾರಿ ಪೂರ್ಣಗೊಂಡಿದ್ದು, ಉಳಿದವು ನಡೆಯುತ್ತಿವೆ. ಶಿಥಿಲ ಕಟ್ಟಡಗಳ ದುರಸ್ತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸಂಪುಟ ಪುನರ್ರಚನೆ ಮತ್ತು ಪಕ್ಷದ ಶಿಸ್ತು

ಸಂಪುಟ ಪುನರ್ರಚನೆಯಲ್ಲಿ ಖಾತೆ ಬದಲಾವಣೆ ಸಾಧ್ಯತೆ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಈ ಇಲಾಖೆಯಲ್ಲಿ ಸಂತೋಷದಿಂದ ಕೆಲಸ ಮಾಡುತ್ತಿದ್ದೇನೆ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಬಂದಿದ್ದು, ಪಕ್ಷದ ಶಿಸ್ತಿನ ಸಿಪಾಯಿಯಂತೆ ನಡೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಕೆ.ಎನ್. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ

ಗ್ಯಾರಂಟಿ ಯೋಜನೆಗಳ ಲಾಭ ಪಡೆದ ಮಹಿಳೆಯರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಲಿಲ್ಲ ಎಂಬ ಕೆ.ಎನ್. ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಅವರೇ ಸ್ಪಷ್ಟಪಡಿಸಬೇಕು ಎಂದು ತಿಳಿಸಿದರು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories