ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ, ನಕಲಿ ಅರ್ಜಿಗಳ ಎಚ್ಚರಿಕೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆರಂಭಗೊಳಿಸಲಾಗಿದೆ. ಇದೇ ಸಮಯವನ್ನು ಬಂಡವಾಳವನ್ನಾಗಿಸಿಕೊಂಡು ಕಿಡಿಗೇಡಿಗಳು ನಕಲಿ ಪ್ರಜೆಗಳ ಮೂಲಕ ಜನರ ದಾರಿಯನ್ನು ತಪ್ಪಿಸುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ಇದರ ಬಗ್ಗೆ ಜಾಗೃಕತೆಯನ್ನು ವಹಿಸಬೇಕಾಗಿದೆ. ಗೃಹ ಲಕ್ಷ್ಮೀ ಯೋಜನೆಗೆ ಕಾಗದದ ಅರ್ಜಿಗಳು ಇಲ್ಲ, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ ನಕಲಿ ಅರ್ಜಿಗಳಿಂದ ಎಚ್ಚರ :
ಮಂಗಳವಾರದಂದು ಸುದ್ದಿಗೋಷ್ಠಿಯೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಯಾವುದೇ ಕಾಗದದ ಅರ್ಜಿಗಳು ಇರುವುದಿಲ್ಲ. ನಕಲಿ ಅರ್ಜಿ ಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಇಂತಹ ನಕಲಿ ಅರ್ಜಿಗಳ ಖದೀಮರ ಮೇಲೆ ಕ್ರಮವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಕಾಗದ ಪತ್ರಗಳ ಅವಶ್ಯಕತೆ ಇರುವುದಿಲ್ಲ. ಮೊದಲಿಗೆ ಮೆಸೇಜ್ ಮುಖಾಂತರ ರೇಷನ್ ಕಾರ್ಡಿನ ನಂಬರನ್ನು ಈ ನಂಬರಿಗೆ : 8147500500 ಕಳುಹಿಸಿದ ನಂತರ ಆನ್ಲೈನ್ ಮುಖಾಂತರ ನಡೆಯುತ್ತದೆ. ಅದಕ್ಕಾಗಿ ಸ್ವತಹ ಮನೆಯ ಯಜಮಾನಿಯು ತಿಳಿಸಲಾದ ಸರ್ಕಾರಿ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ. ಯಾವುದೇ ರೀತಿಯ ಕಾಗದದ ಅರ್ಜಿಗಳು ಇರುವುದಿಲ್ಲ.
ನೀವು ಅರ್ಜಿಯನ್ನು ಸಲ್ಲಿಸುವಾಗ ಸಂಶಯವಿದ್ದಲ್ಲಿ 1902 ನಂಬರ್ ಕರೆ ಮಾಡಿ
ನಿಮಗೊಂದಲಗಳನ್ನು ಬಗೆಹರಿಸಿಕೊಳ್ಳುವ ಅವಕಾಶವನ್ನು ಕೂಡ ಸರ್ಕಾರವು ಕಲ್ಪಿಸಿಕೊಟ್ಟಿದೆ. ಹಾಗಾಗಿ ಎಲ್ಲರೂ ನಕಲಿ ಗೃಹಲಕ್ಷ್ಮಿ ಅರ್ಜಿಗಳಿಂದ ಜಾಗೃಕತರಾಗಿರಿ. ಹಾಗೆಯೇ ಸರ್ಕಾರವು ತಿಳಿಸಿರುವ ಕ್ರಮಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಿ, 2000 ಹಣವನ್ನು ಪಡೆಯುವ ಅವಕಾಶವನ್ನು ತಮ್ಮದಾಗಿಸಿಕೊಳ್ಳಿ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲನೆಯದಾಗಿ ರೇಷನ್ ಕಾರ್ಡಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ನಂಬರಿಂದ ನೀವು ಮೆಸೇಜನ್ನು ಮಾಡಬೇಕು.
ಹಂತ 2: ನಿಮ್ಮ ಮೆಸೇಜ್ ಆಪನ್ನು ಓಪನ್ ಮಾಡಿ, ನಂತರ ಸ್ಟಾರ್ಟ್ ಕನ್ವರ್ಸೇಷನ್(start conversation) ಅಥವಾ ಪ್ಲಸ್ ಮಾರ್ಕ್ ಮೇಲೆ ಕ್ಲಿಕ್ ಮಾಡಿ.
To ಎಂಬ ಬಾಕ್ಸಿನಲ್ಲಿ ಸರ್ಕಾರದ ಮೊಬೈಲ್ ಸಂಖ್ಯೆಯಾದ 8147500500 ಅನ್ನು ಹಾಕಿ. ನಂತರ ಟೆಕ್ಸ್ಟ್ ಮೆಸೇಜ್(text message) ನಲ್ಲಿ ನಿಮ್ಮ ಪಡಿತರ ಚೀಟಿಯ(Ration card) 12 ಡಿಜಿಟ್ ಗಳ ಸಂಖ್ಯೆಯನ್ನು ನೊಂದಣಿ ಮಾಡಿ ಮತ್ತು ಮೆಸೇಜನ್ನು ಸೆಂಡ್ ಮಾಡಿ.
ಹಂತ 4: ಎಸ್ಎಂಎಸ್ ಮಾಡಿದ ಕೆಲವೇ ನಿಮಿಷಗಳಲ್ಲಿ ನಿಮಗೆ ಸರ್ಕಾರದಿಂದ ಒಂದು ಮೆಸೇಜ್ ಬರುತ್ತದೆ ಅದರಲ್ಲಿ, ಯಾವ ಸ್ಥಳದಲ್ಲಿ ಯಾವ ದಿನಾಂಕಕ್ಕೆ ಎಷ್ಟು ಗಂಟೆಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕು ಎಂಬುವ ಮಾಹಿತಿ ಇರುತ್ತದೆ.
ಹಂತ 6: ನಂತರ ತಮಗೆ ತಿಳಿಸಲಾದ ಸರ್ಕಾರಿ ಕೇಂದ್ರಗಳಲ್ಲಿ ಅರ್ಜಿಯನ್ನು ಹಾಕಲಾಗುತ್ತದೆ. ನಿಗದಿ ಪಡಿಸಿದ ಸಮಯಕ್ಕೆ ಹೋಗಲು ಸಾಧ್ಯವಾಗದಿದ್ದರೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಮೇಲೆ ಸೂಚಿಸಿರುವ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲಿಗೆ ಬೇರೆ ಬ್ಯಾಂಕ್ ಖಾತೆಯ ಪಾಸ್‌ಬುಕ್ ನೀಡಿದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಯಾವ ದಾಖಲೆಗಳನ್ನು ಸರ್ಕಾರಿ ಕೇಂದ್ರಗಳಿಗೆ ತೆಗೆದುಕೊಂಡು ಹೋಗಿ ಅರ್ಜಿಯನ್ನು ಸಲ್ಲಿಸಬೇಕು :
ಬ್ಯಾಂಕ್ ಪಾಸ್ ಬುಕ್
ಮನೆ ಯಜಮಾನಿಯ ಆಧಾರ್ ಕಾರ್ಡ್
ಆಧಾರ್ ಲಿಂಕ್ ಆಗಿರುವ ಮೊಬೈಲ್ ನಂಬರ್
ಪಡಿತರ ಚೀಟಿ
ಎಲ್ಲಿ ಅರ್ಜಿಗಳನ್ನು ಸಲ್ಲಿಸಲಾಗುತ್ತದೆ :
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ನೊಂದಣಿಯನ್ನು ಮಾಡಿಕೊಡಲಾಗುತ್ತದೆ. ನೀವು ಅರ್ಜಿಗಳನ್ನು ಸಲ್ಲಿಸಲು ಯಾವುದೇ ರೀತಿಯ ಹಣವನ್ನು ಪಾವತಿಸುವ ಅಗತ್ಯವಿರುವುದಿಲ್ಲ. ಅಧಿಕೃತ ಪ್ರಜಾ ಪ್ರತಿನಿಧಿ ಸ್ವಯಂಸೇವಕರು ಕೂಡ ನಿಮ್ಮ ಮನೆ ಬಾಗಿಲಿಗೆ ಬಂದು ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಿಕೊಡುತ್ತಾರೆ.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ