ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಬಿಡುಗಡೆ , ಫಾರ್ಮ್‌ ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ಅರ್ಜಿ ಸಲ್ಲಿಸಿ..!

WhatsApp Image 2023 06 09 at 4.59.30 PM 1

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme)ಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ(Application form) ಬಿಡುಗಡೆ :

gruhalakshmi scheme

ಚುನಾವಣೆಗೂ ಮುನ್ನ ಬರವಸೆಯನ್ನು ನೀಡಿದಂತೆ ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬಂದೇ ಬಿಟ್ಟಿತು, ಈ ವಿಷಯ ಈಗಾಗಲೇ ನಿಮಗೆಲ್ಲರಿಗೂ ಹಳೆಯದಾಗಿದೆ ಆದರೆ ಇವತ್ತಿನ ಹೊಸ ವಿಷಯ ಏನೆಂದರೆ, ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 2000 ಹಣವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬೇಕು. ಈ ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯ ಅವಶ್ಯವಿದೆ. ಈ ಅರ್ಜಿ ನಮೂನೆಯನ್ನು ಸರ್ಕಾರವು ಇಂದು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ(Department of Women and Child Welfare)ಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾವಚಿತ್ರವಿರುವುದು ಕಂಡು ಬಂದಿದೆ.

Untitled 1 scaled

ಗೃಹಲಕ್ಷ್ಮಿ ದುಡ್ಡು ಅತ್ತೆಗಾ-ಸೊಸೆಗಾ? ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು?:

ಗೃಹಲಕ್ಷ್ಮಿ ಯೋಜನೆ ಬಿಡುಗಡೆಯಾದ ತಕ್ಷಣ  ಅತ್ತೆ ಹಾಗೂ ಸೊಸೆಯಂದಿರಿಗೆ ಗೊಂದಲ ಶುರುವಾಗಿತ್ತು, ಯಾರಿಗೆ ಈ ಹಣ ಸೇರಬೇಕು ಎಂದು ಆದರೆ ಸರ್ಕಾರವು ಇದರ ಬಗ್ಗೆ ಯಾವುದೇ ರೀತಿಯ ತಲೆಕೆಡಿಸಿಕೊಂಡಿಲ್ಲ. ಮನೆಯವರೆ ಯಾರಿಗೆ ಹಣ ದೊರೆಯಬೇಕೆಂದು ನಿರ್ಧಾರವನ್ನು ಮಾಡಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜೂನ್ 8 ಅಂದರೆ ಇಂದು ಈ ಅರ್ಜಿ ನಮೂನೆ ಬಿಡುಗಡೆಯಾಗಿದೆ. ಈ ಅರ್ಜಿಯನ್ನು ನಮೂದಿದಿಸಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬಹುದು. ಇಲ್ಲವೇ ಬೆಂಗಳೂರು ಒನ್ ಅಥವಾ ಬೆಂಗಳೂರು ಒನ್ ನಂಥ ಕಚೇರಿಗಳಲ್ಲಿ, ನಾಡ ಕಚೇರಿಗಳಲ್ಲಿ ಸಲ್ಲಿಸಬಹುದು.

telee

Offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆ ಸಿಗುತ್ತದೆ. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೆಳಗೆ ಕೊಡಲಾದ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.

ದಾಖಲಾತಿಗಳು:

  • ಆಧಾರ್‌ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಫೋಟೋ
  • ರೇಷನ್‌ ಕಾರ್ಡ್‌
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

ಅರ್ಜಿಯನ್ನು ಯಾವಾಗಿನಿಂದ ಸಲ್ಲಿಸಬೇಕು?:

ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಜೂನ್ 15ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಜುಲೈ 15ರಂದು ಅರ್ಜಿ ಸಲ್ಲಿಕೆಗೆ ಕಡೇದಿನವಾಗಿದೆ.

ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ತುಂಬುವುದು ಹೇಗೆ?:

ಅರ್ಜಿ ನಮೂನೆಯಲ್ಲಿ ಒಟ್ಟು 11 ಹಂತಗಳಿವೆ. ಯಜಮಾನಿಯ ಹೆಸರು, ವಿಳಾಸ ಆಧಾರ್ ಕಾರ್ಡ್, ಪಡಿತರ ಚೀಟಿಯ ಸಂಖ್ಯೆ ಹಾಗೂ ಚುನಾವಣಾ ಗುರುತಿನ ಚೀಟಿಯ ಸಂಖ್ಯೆಯನ್ನು ನಮೂದಿಸಬೇಕು.

ಎರಡನೇ ವಿಭಾಗದಲ್ಲಿ ಪತಿಯ ಹೆಸರು, ಆತನ ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಚುನಾವಣಾ ಗುರುತಿನ ಚೀಟಿಯ ಸಂಖ್ಯೆಯನ್ನು ನಮೂದಿಸಬೇಕು. ಹಾಗೆಯೇ ಜಾತಿಯ ಮಾಹಿತಿಯನ್ನು ಕೂಡ ನೀಡಬೇಕು.

ಆರನೇ ವಿಭಾಗದಲ್ಲಿ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಇಲ್ಲಿ ಎರಡು ಮೊಬೈಲ್ ಅಂಕಿಗಳನ್ನು ನಮೂದಿಸುವ ಅವಕಾಶವಿದೆ. ಮೊದಲನೆಯದು ಮನೆಯ ಯಜಮಾನಿಯ ಮೊಬೈಲ್ ಸಂಖ್ಯೆ ಇನ್ನೂ ಎರಡನೇದು, ಪತಿಯ ಅಥವಾ ಮಕ್ಕಳ ಮೊಬೈಲ್ ಸಂಖ್ಯೆಯನ್ನು ನೀಡಬಹುದಾಗಿದೆ. ವಿಭಾಗ-8 ರಲ್ಲಿ ಬ್ಯಾಂಕಿಗೆ ಸಂಬಂಧಿಸಿದ ವಿಷಯಗಳನ್ನು ನಮೂದೆ ಮಾಡಬೇಕು. ಹಾಗೆ ಮನೆಯ ಯಜಮಾನಿಗೆ ಸಂಬಂಧಿಸಿದ ದಾಖಲೆಗಳಾದ   ಆಧಾರ್ ಕಾರ್ಡ್, ಪಾಸ್ ಬುಕ್ ಜೆರಾಕ್ಸ್, ವೋಟರ್ ಐಡಿ ಪ್ರತಿಗಳನ್ನು ಸಲ್ಲಿಸಬೇಕು. ಅಷ್ಟೇ ಅಲ್ಲದೆ ಪತಿಗೆ ಸಂಬಂಧಿಸಿದ ದಾಖಲೆಗಳಾಗಿ, ಪತಿಯ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಅರ್ಜಿಯ ಕೊನೆಯ ಭಾಗದಲ್ಲಿ ಸ್ವಯಂ ದೃಢೀಕರಣ ಘೋಷಣೆಯನ್ನು ಮಾಡಬೇಕು. ಅದರಲ್ಲಿ ನಾನು, ನನ್ನ ಪತಿಯು ಆದಾಯ ತೆರಿಗೆ ಹಾಗೂ ಜಿಎಸ್ ಟಿ ಪಾವತಿದಾರರಾಗಿರುವುದಿಲ್ಲ ಎಂಬುದನ್ನು ಸ್ವಯಂ ದೃಢೀಕರಣ ಮಾಡಬೇಕಿರುತ್ತದೆ. ಇದು ತುಂಬಾ ಮುಖ್ಯವಾದ ದೃಢೀಕರಣವಾಗಿದೆ ಏಕೆಂದರೆ ಜಿಎಸ್‌ಟಿ ಹಾಗೂ ಐಟಿ ಪಾವತಿಯನ್ನು ಮಾಡುವವರಿಗೆ ಈ ಗೃಹಲಕ್ಷ್ಮಿ ಯೋಜನೆಯು ಅನ್ವಯಿಸುವುದಿಲ್ಲ.

ಕೊನೆಯದಾಗಿ ಸರ್ಕಾರಕ್ಕೆ ನಾವು ಸುಳ್ಳು ಮಾಹಿತಿಯನ್ನು ನೀಡುತ್ತಿಲ್ಲ ಎಂಬುದನ್ನು ದೃಢೀಕರಿಸಿ, ರಾಷ್ಟ್ರೀಯ ಬಲಭಾಗದಲ್ಲಿ ಅರ್ಜಿದಾರರ ಸಹಿ ಹಾಗೂ ಎಡಗೈ ಹೆಬ್ಬೆರಳಿನ ಗುರುತನ್ನು ಹಾಕಬೇಕು. ಹೀಗೆ ಅರ್ಜಿ ನಮೂನೆಯಲ್ಲಿ ಹಲವಾರು ವಿಷಯಗಳನ್ನು ಭರ್ತಿ ಮಾಡಿದ ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸೇವಾ ಸಿಂಧುವಿನಲ್ಲಿ ಸಲ್ಲಿಸಬೇಕು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ

  1. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
  2. GST ಪಾವತಿ ಮಾಡುವ ಕುಟುಂಬಗಳು
  3. APL, BPL ಕಾರ್ಡ್ ಹೊಂದಿರದ ಕುಟುಂಬಗಳು
  4. ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
  5. ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

https://youtu.be/hgToCT81iAs

ವಿಡಿಯೋ ಕೃಪೆ : RK Kembhavi youtube channel

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

3 thoughts on “ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಬಿಡುಗಡೆ , ಫಾರ್ಮ್‌ ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಇಲ್ಲಿ ಅರ್ಜಿ ಸಲ್ಲಿಸಿ..!

  1. I am centerl government employee and tax return filing from two three years I have tax return not filing due to below 5 lakh now I eligible for Karnataka government ansosment five guaranteeti like guhalaskmi jothilaskmi and other benefits kindly inform me

Leave a Reply

Your email address will not be published. Required fields are marked *

error: Content is protected !!