Gruhajyoti – ಇಂದಿನಿಂದ ಉಚಿತ ಕರೆಂಟ್, ಈ ಜನರಿಗೆ ಮಾತ್ರ ವಿದ್ಯುತ್ ಬಿಲ್ ಬರಲ್ಲ, ಅರ್ಜಿ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್ ಬಿಡುಗಡೆ

WhatsApp Image 2023 08 01 at 7.16.47 AM

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಜ್ಯೋತಿ ಯೋಜನೆಯ ಶೂನ್ಯ ವಿದ್ಯುತ್ ಬಿಲ್ ಯಾವ ತಿಂಗಳಿನಿಂದ ಬರುತ್ತದೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹಲವಾರು ಜನರು ಈಗಾಗಲೇ ಗೃಹಜ್ಯೋತಿ ಯೋಜನೆಗೆ(Gruha Jyothi Scheme)  ಅರ್ಜಿಯನ್ನು ಸಲ್ಲಿಸಿದ್ದಾರೆ, ಆದರೆ ಈಗಲೂ ಕೂಡ ಅವರಿಗೆ ವಿದ್ಯುತ್ ಬಿಲ್ ಮೊದಲಿನಂತೆ ಬರುತ್ತಿದೆ. ಇದರಿಂದಾಗಿ ಹಲವಾರು ಜನರಿಗೆ, ಯಾವಾಗಿನಿಂದ ಶೂನ್ಯ ವಿದ್ಯುತ್ ಬಿಲ್ ಬರುತ್ತದೆ ಎಂಬ ಗೊಂದಲ ಕಾಡುತ್ತಿದೆ. ಆದ್ದರಿಂದ ಈ ಲೇಖನದಲ್ಲಿ ಯಾವ ತಿಂಗಳಿನಿಂದ 200 ಯೂನಿಟ್ ಗಳ ವಿದ್ಯುತ್ ಫ್ರೀ ದೊರೆಯುತ್ತದೆ?, ಗೃಹಜೋತಿ ಯೋಜನೆಗೆ ಅರ್ಜಿಯು ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬುದರ ಸ್ಟೇಟಸ್ ಅನ್ನು ಹೇಗೆ ಚೆಕ್ ಮಾಡುವುದು?, ಎಂಬುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ತಿಂಗಳಿನಿಂದ ಕರೆಂಟ್ ಬಿಲ್ ಕಟ್ಟಬೇಕಾಗಿಲ್ಲ :

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಜುಲೈ ತಿಂಗಳಿನಿಂದ ಆರಂಭವಾಗಿದ್ದು, ಆಗಸ್ಟ್ ತಿಂಗಳಿನಿಂದ ಗ್ರಾಹಕರ ಮನೆಬಾಗಿಲಿಗೆ ಶೂನ್ಯ ವಿದ್ಯುತ್ ಬಿಲ್ ಬರಲಿದೆ. ಗೃಹಜ್ಯೋತಿ ಯೋಜನೆಗೆ 1,18,50, 474 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಅಂದರೆ ಎರಡೂವರೆ ಕೋಟಿ ಫಲಾನಿಭವಿಗಳ ಪೈಕಿ ಶೇ.60 ರಷ್ಟು ಮಾತ್ರ ಜನರು ಅರ್ಜಿ ಸಲ್ಲಿಸಿದ್ದಾರೆ. ಜುಲೈ 25ರ ಒಳಗೆ ಗೃಹಜ್ಯೋತಿ ಯೋಜನೆಗೆ  ಅರ್ಜಿಯನ್ನು ಸಲ್ಲಿಸಿದವರಿಗೆ ಮಾತ್ರ ಆಗಸ್ಟ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ದೊರೆಯಲಿದೆ. ಜುಲೈ 25ರ ನಂತರ ಅರ್ಜಿಯನ್ನು ಸಲ್ಲಿಸಿದ ಗ್ರಾಹಕರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಶೂನ್ಯ ವಿದ್ಯುತ್ ಬಿಲ್ ಮನೆ ಬಾಗಿಲಿಗೆ ಬರುತ್ತದೆ. ಹಾಗಾಗಿ ನೀವೇನಾದರೂ ಜುಲೈ 25ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿದ್ದರೆ ನೀವು ಆಗಸ್ಟ್ ತಿಂಗಳಿನಲ್ಲಿ ವಿದ್ಯುತ್ ಬಿಲ್ಲನ್ನು ಕಟ್ಟುವ ಕಷ್ಟ ಇರುವುದಿಲ್ಲ.

whatss

ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಟ 200 ಯೂನಿಟ್‌ಗಳವರೆಗೆ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್‌ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಾಗಿರುತ್ತಾರೆ. ಹಾಗಾದರೆ ನೀವು ಜುಲೈ 25ರ ಒಳಗೆ ಅರ್ಜಿಯನ್ನು ಸಲ್ಲಿಸಿದ್ದೀರಿಯೇ ಅಥವಾ ಇಲ್ಲವೇ ಎಂಬುದನ್ನು ನಿಮ್ಮ ಫೋನಿನಲ್ಲಿ ಸ್ಟೇಟಸ್ ಚೆಕ್ ಮಾಡಿ ತಿಳಿದುಕೊಳ್ಳಬಹುದು. ಸ್ಟೇಟಸ್ ಚೆಕ್ ಮಾಡುವ ವಿಧಾನ ಕೆಳಗಿನಂತಿದೆ.

ಗೃಹಜ್ಯೋತಿ ಯೋಜನೆಯ ಅರ್ಜಿ ಸ್ಟೇಟಸ್(status) ಚೆಕ್ ಮಾಡುವ ವಿಧಾನ :

ನೀವೇದಾದರೂ ಈಗಾಗಲೇ ಗೃಹಜ್ಯೋತಿ  ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು, ನಿಮ್ಮ ಅರ್ಜಿಯು ಆಯ್ಕೆ ಆಗಿದ್ದಿಯೇ ಎಂಬುದನ್ನು ಸ್ಟೇಟಸ್ ಚೆಕ್ ಮಾಡುವುದರ ಮೂಲಕ ತಿಳಿದುಕೊಳ್ಳಬಹುದು. ಗೃಹಜ್ಯೋತಿ ಯೋಜನೆಯ ಅಪ್ಲಿಕೇಶನ್ ಸ್ಟೇಟಸ್(application status) ಅನ್ನು ಮನೆಯಲ್ಲಿಯೇ ಕುಳಿತುಕೊಂಡು ಫೋನಿನಲ್ಲಿ ನೋಡಬಹುದು. ಸ್ಟೇಟಸ್ ಅನ್ನು ನೋಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ :

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

 

app download

ಹಂತ 1 : ಮೊದಲನೆಯದಾಗಿ ಈ ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://sevasindhugs.karnataka.gov.in/

Screenshot 2023 07 07 06 07 24 89 40deb401b9ffe8e1df2f1cc5ba480b12

ಹಂತ 2: ಮೇಲೆ ಕಾಣಿಸುತ್ತಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. ” ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಿರಿ” ಆಪ್ಷನ್ ಸೆಲೆಕ್ಟ್ ಮಾಡಿಕೊಳ್ಳಿ

Screenshot 2023 07 07 06 07 32 81 40deb401b9ffe8e1df2f1cc5ba480b12

ಹಂತ 3: ನಂತರ ನಿಮ್ಮ ESCOM select ಮಾಡಿ,ನಿಮ್ಮ  ವಿದ್ಯುತ್ ಬಿಲ್ ನ Account ID type ಮಾಡಿ,Check status ಮೇಲೆ ಕ್ಲಿಕ್ ಮಾಡಿ.

Screenshot 2023 07 07 06 08 13 20 40deb401b9ffe8e1df2f1cc5ba480b12 1

ಹಂತ 4: ಈ ಕೆಳಗಿನಂತೆ “Your application for Gruhajyothi scheme is received and sent to ESCOM for processing” ಎಂದು ತೋರಿಸಿದರೆ,ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆಯಾಗಿದೆ ಎಂದು ಅರ್ಥ

ಈ ರೀತಿಯಾಗಿ ತೋರಿಸದಿದ್ದರೆ, ಮತ್ತೊಂದು ಬಾರಿ ಅರ್ಜಿ ಸಲ್ಲಿಸಿ

Screenshot 2023 07 07 06 06 55 28 40deb401b9ffe8e1df2f1cc5ba480b12

ಹೀಗೆ ನೀವು ಸ್ಟೇಟಸ್ ಅನ್ನು ಚೆಕ್ ಮಾಡಿಕೊಂಡು, ಆಗಸ್ಟ್ ತಿಂಗಳಿನಲ್ಲಿ ನಿಮಗೆ ಶೂನ್ಯ ವಿದ್ಯುತ್ ಬಿಲ್ ಬರುತ್ತದೆಯೇ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಬರುತ್ತದೆಯೇ ಎಂಬುದನ್ನು ಪತ್ತೆ ಮಾಡಿಕೊಳ್ಳಬಹುದು. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

app download

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!