ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಲ್ಲಿ ‘ಗೃಹ ಜ್ಯೋತಿ’ (Gruha jyoti) ಯೋಜನೆಯೂ ಒಂದು. ಕಳೆದ ವರ್ಷ ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Malikarjun kharge) ಅವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಿದ್ದರು.ಉಚಿತವಾಗಿ ಶೇಕಡ 10% ಹೆಚ್ಚುವರಿಯಾಗಿ ನೀಡುತ್ತಿದ್ದ ವಿದ್ಯುತ್ ನಿಯಮದಲ್ಲಿ ಹೊಸ ಬದಲಾವಣೆ ತಂದಿದ್ದಾರೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ
ನಮಗೆಲ್ಲಾ ತಿಳಿದಿರುವ ಹಾಗೆ ಇಲ್ಲಿಯವರೆಗೆ ರಾಜ್ಯ ಸರ್ಕಾರವು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಕಳೆದ 12 ತಿಂಗಳ ಗ್ರಾಹಕರ ಸರಾಸರಿ ಬಳಕೆಯನ್ನು ಪರಿಗಣಿಸಿ ಉಚಿತ ವಿದ್ಯುತ್(free current) ಅನ್ನು ಒದಗಿಸುತ್ತಿತ್ತು ಮತ್ತು ಅರ್ಹ ಉಚಿತ ಬಳಕೆಗೆ ಬರುವ ಮೊದಲು ಅದಕ್ಕೆ ಹೆಚ್ಚುವರಿ 10 ಪ್ರತಿಶತವನ್ನು(10%) ಸೇರಿಸಲಾಗುತ್ತಿತ್ತು.ಈಗ ಬೇಕಾಗಿರುವ ಯುನಿಟ್‌ಗಳಿಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರು ಬಿಲ್‌ಗಳನ್ನು ಪಾವತಿಸಬೇಕಾಗಿಲ್ಲ. ಅಷ್ಟೇ ಅಲ್ಲದೆ ಬೇಕಾಗಿರುವ ಯೂನಿಟ್‌ಗಳಿಗಿಂತ ಹೆಚ್ಚಿನ ವಿದ್ಯುತ್ ಬಳಸುವ ಗ್ರಾಹಕರು ಗರಿಷ್ಠ 200 ಯುನಿಟ್‌ಗಳವರೆಗೆ(200 units) ಅರ್ಹ ಉಚಿತ ಯುನಿಟ್‌ಗಳ(required free unit) ಮೇಲೆ ಬಳಸಿದ ವಿದ್ಯುತ್ ಗೆ ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ.
ನಿಯಮದಲ್ಲಿ ಬದಲಾವಣೆ
ಹೌದು,ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಕಳೆದ ದಿನಗಳಲ್ಲಿ ಸಚಿವ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ (Cabinet Meeting) ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಪ್ರಮುಖವಾಗಿ ಗೃಹ ಜ್ಯೋತಿ ಯೋಜನೆ (Gruha Jyothi Scheme) ಅಡಿ ಬಳಸಿದ ಯೂನಿಟ್ ನ ಶೇಕಡಾವಾರು ಬದಲಾಗಿ 10 ಯೂನಿಟ್ (10 units)ಹೆಚ್ಚಿನ ವಿದ್ಯುತ್ ನೀಡಲು ತೀರ್ಮಾನ ಮಾಡಲಾಗಿದೆ. ಈ ಕುರಿತು ಮಾಹಿತಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್ (Minister KJ George), 48 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವವರಿಗೆ 10 ಪರ್ಸೆಂಟ್(10%) ಹೆಚ್ಚುವರಿಯಾಗಿ ವಿದ್ಯುತ್ ನೀಡುತ್ತಿದ್ದೇವು. ಆದರೆ ಇದೀಗ 10 ಯೂನಿಟ್ (10 Unit ) ಕೊಡಲು ತೀರ್ಮಾನ ಮಾಡಿದ್ದೇವೆ. 48 ಯೂನಿಟ್ ಕೊಟ್ಟರೂ ಕಡಿಮೆ ಬಳಕೆ ಮಾಡ್ತಾ ಇದ್ದರು, ಕೇವಲ 20-25 ಯೂನಿಟ್ ಬಳಿಕೆ(unit used) ಮಾಡಿದಾಗ ಕೇವಲ 2 ಪರ್ಸೆಂಟ್(2%) ಕೊಡಬೇಕಿತ್ತು. ಆದರೆ ಇದೀಗ 48 ಇರೋದು 58 ಯೂನಿಟ್ ಆಗುತ್ತದೆ ಎಂದು ತಿಳಿಸಿದರು.
ಹೊಸ ನಿಯಮವು 100 ಯೂನಿಟ್‌ಗಿಂತ ಕಡಿಮೆ ಇರುವ ಗ್ರಾಹಕರಿಗೆ ಮಾತ್ರ ಅನ್ವಯವಾಗುತ್ತದೆ . 100 ಯೂನಿಟ್‌ಗಿಂತ ಹೆಚ್ಚಿನ ಬಳಕೆದಾರರಿಗೆ ಇದು ಅನಾನುಕೂಲವಾಗಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಈ ಹೊಸ ನಿಯಮದಿಂದ ಸರ್ಕಾರ ಹೆಚ್ಚುವರಿಯಾಗಿ 500 ರಿಂದ 600 ಕೋಟಿ ರೂ. ಆದಾಯ ನಿರೀಕ್ಷೆ ಮಾಡಿದೆ ಎಂದು ತಿಳಿಸಿದ್ದಾರೆ. ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group





