ರಾಜ್ಯದ ಯಜಮಾನಿ ಮಹಿಳೆಯರಿಗೆ ಪ್ರೋತ್ಸಾಹಿಸೋ ಸಲುವಾಗಿ ಸರ್ಕಾರ ಜಾರಿಗೆ ತಂದಿರುವಂತ ಯೋಜನೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ.ಹಣವನ್ನು ಡಿಬಿಟಿ ಮೂಲಕ ನೋಂದಾಯಿತ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ. ಈಗಾಗಲೇ 2 ಕಂತಿನ ಹಣವನ್ನು ಅರ್ಹ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದ್ದು, ಹಣ ಜಮೆ ಆಗಿರುವ ಕುರಿತಂತೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಸಂದೇಶ ಬಂದಿದೆ. ಸಂದೇಶ ಬಂದವರ ಖಾತೆಗೆ ರಾಜ್ಯ ಸರ್ಕಾರದಿಂದ ಅರ್ಹ ಫಲಾನುಭವಿ ಯಜಮಾನಿ ಮಹಿಳೆಯರ ಜಮಾ ಮಾಡಲಾಗಿದೆ.
ಈಗಾಗಲೇ ಇಲಾಖೆಯ ವತಿಯಿಂದ ಹಣ ಬಿಡುಗಡೆಯಾಗಿದೆ, ಇಲಾಖೆಯಿಂದ ಬಿಡುಗಡೆಯಾದ ಹಣವು ಬ್ಯಾಂಕುಗಳಿಗೆ ವರ್ಗಾವಣೆಯಾಗುತ್ತದೆ, ನಂತರ ಬ್ಯಾಂಕ್ ಸಿಬ್ಬಂದಿಗಳು ಆಯಾ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುತ್ತಾರೆ. ಬ್ಯಾಂಕಿನಲ್ಲಿ ಒಂದು ದಿನಕ್ಕೆ ಇಂತಿಷ್ಟು ಹಣವನ್ನು ಜಮಾ ಮಾಡಬೇಕು ಎಂಬ ನಿಯಮವಿರುತ್ತದೆ ಹಾಗಾಗಿ ಎಲ್ಲಾ ಫಲಾನುಭವಿಗಳಿಗೆ ಒಂದೇ ದಿನದಲ್ಲಿ ಹಣವನ್ನು ಖಾತೆಗೆ ವರ್ಗಾವಣೆ ಮಾಡಲು ಆಗುವುದಿಲ್ಲ. ಆದ್ದರಿಂದ ಹಂತ ಹಂತವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಇನ್ನೇನು ಎರಡು ಅಥವಾ ಮೂರು ದಿನಗಳಲ್ಲಿ ಅಂದರೆ ಶನಿವಾರದ ಒಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಜಮಾವಾಗುತ್ತದೆ.
ಹಣ ಬರದೆ ಇದ್ದವರು ಏನು ಮಾಡಬೇಕು..?
ಬಹುತೇಕರ ಆಧಾರ್ ಜೋಡಣೆ ಇಲ್ಲವೇ ಬ್ಯಾಂಕ್ ಖಾತೆಯ ಗೊಂದಲ ಆಗಿದೆ. ಅಂತವರು ಈ ಹಿಂದೆ ನೊಂದಣಿ ಮಾಡಿಸಿಕೊಂಡಿದ್ದ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಗಳಿಗೆ ತೆರಳಿ ಸಮಸ್ಯೆಯನ್ನು ವಿವರಿಸಬೇಕು. ಅದಕ್ಕಾಗಿ ಆಧಾರ್ ಕಾರ್ಡ್ ನೀಡಿ ಜೋಡಣೆ ಆಗಿದೆಯೋ ಇಲ್ಲವೇ ಖಚಿತಪಡಿಸಿಕೊಂಡು ಸರಿಪಡಿಸಿಕೊಳ್ಳಬೇಕು.
ನೀವು ಒಂದಕ್ಕಿಂತ ಹೆಚ್ಚಿನ ಬ್ಯಾಂಕ್ ಖಾತೆಗಳಿದ್ದರೆ ಯಾವ ಖಾತೆಯ ಸಂಖ್ಯೆ ಜೋಡಣೆಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ. ಬ್ಯಾಂಕ್‌ಗೆ ಹೋಗಿ ಒಮ್ಮೆ ನಿಮ್ಮ ಖಾತೆ ಚಾಲ್ತಿಯಲ್ಲಿ ಇದೆಯೋ ಇಲ್ಲವೋ ಎನ್ನುವುದನ್ನೂ ಪರೀಕ್ಷಿಸಿಕೊಳ್ಳಿ. ಮೊದಲನೇ ಖಾತೆಯ ವಿವರವನ್ನು ಗಮನಿಸಿ. ಬ್ಯಾಂಕ್‌ನಲ್ಲಿ ವಿಚಾರಿಸಿದಾಗ ಅಲ್ಲಿ ನಿಖರ ಮಾಹಿತಿ ತಿಳಿಯಲಿದೆ.
ನಿಮ್ಮ ಖಾತೆಗೆ ಹಣ ಜಮಾ ಆಗಿದೆಯಾ ಅಂತ ಈ ರೀತಿ ಪರಿಶೀಲಿಸಿಕೊಳ್ಳಿ
ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






