Gruhalakshmi – ನವರಾತ್ರಿ ಹಬ್ಬಕ್ಕೆ ಬಂಪರ್ ಗಿಫ್ಟ್, ಈ ಕೆಲಸ ಮಾಡಿದ್ರೆ ಒಟ್ಟಿಗೆ ಸಿಗುತ್ತೆ 4000/- ರೂಪಾಯಿ – ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

gruhalakshmi update

ಎಲ್ಲರಿಗೂ ನಮಸ್ಕಾರ, ಇವತ್ತಿನ ಈ ಮುಖ್ಯ ವರದಿಯಲ್ಲಿ ‘ಗೃಹ ಲಕ್ಷ್ಮಿ’ ಯೋಜನೆಯ 2000 ರೂಪಾಯಿ ಹಣ ಇದುವರೆಗೆ ನಿಮ್ಮ ಖಾತೆಗೆ ಯಾಕೆ ಬಂದು ತಲುಪಿಲ್ಲ, ಮತ್ತು ಎರಡನೇ ಕಂತಿನ ಹಣಕ್ಕೆ ಕಾಯುತ್ತಿರುವವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ, ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅಕ್ಟೋಬರ್ 4 ರವರೆಗೆ ಸರ್ಕಾರವು 93 ಲಕ್ಷ ಫಲಾನುಭವಿಗಳಿಗೆ ಹಣವನ್ನು ಬಿಡುಗಡೆ ಮಾಡಿದೆ ಮತ್ತು ಉಳಿದ ಪ್ರಕರಣಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಹೆಬ್ಬಾಳ್ಕರ್ ಹೇಳಿದರು. ಅಕ್ಟೋಬರ್ 13ರವರೆಗೆ ಅಗತ್ಯ ಇರುವ ತಿದ್ದುಪಡಿಯನ್ನು ಮಾಡಿಕೊಂಡರೆ ನವರಾತ್ರಿ ಹಬ್ಬಕ್ಕೆ ಮನೆ ಯಜಮಾನಿಯರಿಗೆ 2ನೇ ಕಂತಿನ ಹಣ ಹಾಗೂ ಮೊದಲ ಕಂತು ಬರದೇ ಇರುವವರಿಗೆ ಒಟ್ಟಿಗೆ 4000 ಹಣ ಜಮಾ ಆಗಲಿದೆ ಎಂದು ತಿಳಿದುಬಂದಿದೆ.

chanel

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಪ್ರತಿ ತಿಂಗಳು 2,000 ರೂಪಾಯಿ ಆರ್ಥಿಕ ನೆರವು ನೀಡುತ್ತಿದ್ದು, ಇನ್ನೂ 9.44 ಲಕ್ಷ ಮಹಿಳೆಯರಿಗೆ ತಲುಪಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕಾರ, 5.96 ಲಕ್ಷ ಮಹಿಳೆಯರ ಪ್ರಕರಣದಲ್ಲಿ ಬ್ಯಾಂಕ್ ಖಾತೆಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಲಿಂಕ್ ಮಾಡಲಾಗಿಲ್ಲ. ಇವುಗಳನ್ನು ಜೋಡಿಸುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.
ಇದುವರೆಗೂ ಹಣ ಬಂದು ತಲುಪದೇ ಇರಲು ಈ ಕೆಳಗಿನ ಕಾರಣಗಳನ್ನು ವಿವರಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಈಗಾಗಲೇ ಅರ್ಜಿ ಸಲ್ಲಿಸಿರುವ  3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಇದಕ್ಕೆ ಕಾರಣ ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದೆ. ಈಗಾಗಲೇ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ – ‘ಗೃಹಲಕ್ಷ್ಮಿ’ ಹಣ ಬಂದಿಲ್ವಾ?? ಈ ದಿನ ಎಲ್ಲರಿಗೂ ಜಮಾ ಆಗುತ್ತೆ ‘CM ಸಿದ್ಧರಾಮಯ್ಯ’ ಸಿಹಿಸುದ್ದಿ

ಇದುವರೆಗೂ ಸುಮಾರು 5,96,268 ಫಲಾನುಭವಿಗಳ ಖಾತೆ ಆಧಾರ್ ಕಾರ್ಡ್​ಗೆ ಲಿಂಕ್ ಆಗಿಲ್ಲ. ಆದರೆ 2,17,536 ಫಲಾನುಭವಿಗಳ ಬ್ಯಾಂಕ್ ಖಾತೆ ಆಧಾರ್ ನೊಂದಿಗೆ ಲಿಂಕ್ ಆಗಿದ್ದು, ಅವರಿಗೆ ಯೋಜನೆಯ ಹಣ ಹೋಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ.ಸುಮಾರು 1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಒಟ್ಟಾರೆ ಯೋಜನೆಯ 1.8 ಕೋಟಿ ಅರ್ಹ ಫಲಾನುಭವಿಗಳಿಗೆ ಆಗಸ್ಟ್​ 30 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ.ಅಕ್ಟೋಬರ್ 4 ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂಪಾಯಿ ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದನ್ನೂ ಓದಿ – ಗೃಹಲಕ್ಷ್ಮಿ ಮನೆಯ ಅಭಿಮಾನಿಯರ ಹೊಸ ಪಟ್ಟಿ ಪ್ರಕಟ, ಇವರಿಗೆ ಮಾತ್ರ ಸಿಗತ್ತೆ ಮುಂದಿನ ಕಂತಿನ ಹಣ 

ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

 

WhatsApp Group Join Now
Telegram Group Join Now

Related Posts

3 thoughts on “Gruhalakshmi – ನವರಾತ್ರಿ ಹಬ್ಬಕ್ಕೆ ಬಂಪರ್ ಗಿಫ್ಟ್, ಈ ಕೆಲಸ ಮಾಡಿದ್ರೆ ಒಟ್ಟಿಗೆ ಸಿಗುತ್ತೆ 4000/- ರೂಪಾಯಿ – ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

  1. ಮೇಡಮ್ ರೇಶನ್ ಕಾರ್ಡ್ ಅಪ್ಡೇಟ್ ಮಾಡಿ 2 ತಿಂಗಳು ಆಯಿತು ಆದರೆ ಫುಡ್ ಇನ್ಸ್ಪೆಕ್ಟರ್ ಅಪ್ರೋಲ್ ಮಾಡಲೇ ಇಲ್ಲ ಉಡುಪಿ ಜಿಲ್ಲೆ ರೇಶನ್ ಕಾರ್ಡ್ no:260300258387

Leave a Reply

Your email address will not be published. Required fields are marked *

error: Content is protected !!