ಗೃಹಲಕ್ಷ್ಮಿ ಯೋಜನೆಯು ಬಹುತೇಕ ಎಲ್ಲ ಜಿಲ್ಲೆಗಳ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ನಾಲ್ಕು ಕಂತುಗಳನ್ನು ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಜನವರಿ ಹತ್ತರಂದು 5ನೇ ಕಂತಿನ ಹಣವು ಕೂಡ ಬಿಡುಗಡೆಯಾಗಿದೆ. ಈಗಾಗಲೇ ಐದು ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೂ ಕೂಡ ಹಣ ವರ್ಗಾವಣೆಯಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
5ನೇ ಕಂತಿನ ಹಣ ( 5th installment money ) ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲ ಅಂದ್ರೆ ಈ ಕೆಲಸ ಮಾಡಿ
1. ಈಗಾಗಲೇ ಸರ್ಕಾರ ತಿಳಿಸಿರುವಂತೆ 5ನೇ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಾರದೇ ಇದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ (Aadhaar seeding) ಆಗಿದ್ಯೋ ಇಲ್ಲವೋ ಎಂಬುದನ್ನು ಚೆಕ್ ( Check ) ಮಾಡಿ ಕೊಳ್ಳಬೇಕು.
2. ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ( post office ) ಹೊಸ ಖಾತೆಯನ್ನು ಆರಂಭಿಸಿ. ಅದಕ್ಕೆ ಬೇಕಾದ ದಾಖಲೆಗಳನ್ನು ನೀಡಿದರೆ. ನಿಮ್ಮ ಬ್ಯಾಂಕ್ ಖಾತೆಗೆ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿಯ ಯೋಜನೆಯ ಎಲ್ಲಾ ಕಂತಿನ ಹಣವು ಜಮಾ ಆಗುತ್ತದೆ.
ಡಿಬಿಟಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬೇಕು (Check your DBT status) :
ಹಾಗೆಯೇ ಇನ್ನೊಂದು ಮುಖ್ಯ ವಿಚಾರ ಎಂದರೆ, ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ಲವೋ ಎಂಬುದನ್ನು ಮಾಹಿತಿ ಕಣಜ ವೆಬ್ಸೈಟ್ ಮೂಲಕ ರೇಷನ್ ಕಾರ್ಡ್ ಸಂಖ್ಯೆಯನ್ನು ಹಾಕಿ ತಿಳಿದುಕೊಳ್ಳಬಹುದು. ಅಥವಾ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ DBT Karnataka mobile ಅಪ್ಲಿಕೇಶನ್ ( Application ) ಮೂಲಕ ಆಧಾರ್ ಸಂಖ್ಯೆಯನ್ನು ನಮೂದಿಸಿ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯೋ ಇಲ್ವೋ ಅಂತ ಚೆಕ್ ಮಾಡಿಕೊಳ್ಳಬಹುದು. ಇದೊಂದು ಉತ್ತಮ ವಿಚಾರವಾಗಿದೆ.
6ನೇ ಕಂತಿನ ಹಣ ( 6th installment money ) ಜಮಾ ಆಗುವ ದಿನಾಂಕ
ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣವನ್ನು ಬಹಳಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಾಗೆಯೇ ಇನ್ನು ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕು. ಹಾಗೆಯೇ 6ನೇ ಕಂತಿನ ಹಣ ಬಿಡುಗಡೆ ಫೆಬ್ರವರಿ ( February ) ತಿಂಗಳಿನ ಮೊದಲ ವಾರದಲ್ಲಿ ಆಗಬಹುದು ಎಂಬ ಮಾಹಿತಿ ತಿಳಿದು ಬಂದಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ಮುಂದಿನ ತಿಂಗಳಿನಲ್ಲಿ ಬಿಡುಗಡೆ ಆಗುತ್ತದೆ. ಹೌದು, ಈ ಹಿಂದೆ ಡಿಸೆಂಬರ್ ( December ) ತಿಂಗಳಲ್ಲಿ ಬಿಡುಗಡೆ ಆಗುತ್ತದೆ ಎಂದು ತಿಳಿಸಿದ್ದರು. ನಂತರ ಅದೇ ಹಣ ಜನವರಿಯಲ್ಲಿ ( January ) ಬಿಡುಗಡೆ ಆಗುತ್ತದೆ ಎಂದು ತಿಳಿಸದ್ದರು. ಆದರೆ ಇದೀಗ ಹಣ ಫೆಬ್ರವರಿಯಲ್ಲಿ ಫಲಾನುಭವಿಗಳ ಖಾತೆ ತಲುಪಲಿದೆ ಎಂದು ತಿಳಿಸಿದ್ದಾರೆ.
ಪ್ರತಿ ತಿಂಗಳು ಎಲ್ಲಾ ಫಲಾನುಭವಿಗಳ ಪಡಿತರ ಚೀಟಿಗಳನ್ನು ಪರಿಶೀಲಿಸುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12,000 ರೂಪಾಯಿಗಿಂತಲೂ ಹೆಚ್ಚಿನ ಆದಾಯ ಹೊಂದಿರುವವರು, ಆದಾಯ ತೆರಿಗೆ ಪಾವತಿದಾರರು, ಕಾರುಗಳನ್ನು ಹೊಂದಿದವರು, ಹೀಗೆ ವಿವಿಧ ಕಾರಣಗಳನ್ನು ಪರಿಶೀಲಿಸಿ ಅನರ್ಹ ಜನರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ರೇಷನ್ ಕಾರ್ಡ್ (Ration Card) ಅನ್ನು ಸರ್ಕಾರ ರದ್ದುಪಡಿಸಿದೆ. ಇದೀಗ ಆಹಾರ ಇಲಾಖೆ, ಜನವರಿ ತಿಂಗಳಿನಲ್ಲಿ ರದ್ದುಪಡಿಸಲಾಗಿರುವ ರೇಷನ್ ಕಾರ್ಡ್ ಲಿಸ್ಟ್ ಬಿಡುಗಡೆ ಮಾಡಿದ್ದು, ಈ ಲಿಸ್ಟ್ ನಲ್ಲಿ ಯಾರ ಹೆಸರು ಇದೆಯೋ ಅಂತವರು ಇನ್ನು ಮುಂದೆ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Annabhagya scheme) ಅಥವಾ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ.
ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices
ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.
ನಂತರ ಈ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ/ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ

ಹಂತ 4: ನಂತರ ನೀವು ರದ್ದಾದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ.

ಈ ಮೇಲಿನ ಹಂತಗಳನ್ನು ಅನುಸರಿಸಿಕೊಂಡು, ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬಹುದಾಗಿದೆ. ರದ್ದಾಗಿರುವುದಕ್ಕೆ ಕಾರಣವನ್ನು ನೀಡಿದ್ದರೆ ಅವುಗಳನ್ನು ಸರಿಪಡಿಸುವಂತಿದ್ದರೆ ಸರಿಪಡಿಸಿಕೊಂಡು ಪುನಃ ನೀವು ಅರ್ಜಿಗಳನ್ನು ಕೂಡ ಸಲ್ಲಿಸಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group






