ಇದುವರೆಗೂ ರಾಜ್ಯದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಶೇಕಡ 90ರಷ್ಟು ಮಹಿಳೆಯರ ಖಾತೆಗೆ ಈಗಾಗಲೇ 8 ಕಂತಿನ ಹಣ ಬಿಡುಗಡೆಯಾಗಿದೆ ಆದರೆ ಈ ಕೆಳಗಿನ ಕಾರಣಗಳಿಂದ ಇನ್ನೂ 10% ಮಹಿಳೆಯರಿಗೆ ಹಣ ಜಮಾ ಆಗುತ್ತಿಲ್ಲ. ಈ ಕುರಿತು ಸಂಪೂರ್ಣ ಮಾಹಿತಿ ಕಳೆದು ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಗೃಹಲಕ್ಷ್ಮಿ ಯೋಜನೆ ಭಾರಿ ಸದ್ದು ಮಾಡುತ್ತಿದೆ, ಹೌದು ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬಂದೇ ಇಲ್ವಾ ಎನ್ನುವ ಹಲವಾರು ಮಹಿಳೆಯರಿಗೆ ಕಳೆದ ತಿಂಗಳು ಬರೋಬ್ಬರಿ 14,000 ಜಮಾ ಆಗಿದೆ. ಇನ್ನೂ ಹಲವಾರು ಕಡೆ ಗೃಹಲಕ್ಷ್ಮಿ ಹಣದಲ್ಲಿ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್ ಗಳನ್ನು ಖರೀದಿಸಿದ ಕೆಲವು ಮಹಿಳೆಯರು ರಾಜ್ಯದಲ್ಲಿ ಭಾರಿ ಸುದ್ದಿಯಲ್ಲಿದ್ದಾರೆ, ಉತ್ತರ ಕರ್ನಾಟಕ ಭಾಗದಲ್ಲಿ ಗೃಹಲಕ್ಷ್ಮಿ ಹಣದಿಂದ ಫ್ರಿಡ್ಜ್ ಮತ್ತು ಟಿವಿ ಖರೀದಿಸಿ ಪೂಜೆ ಮಾಡಿರುವ ವಿಡಿಯೋಗಳು ವೈರಲ್ ಆಗಿವೆ. ಇನ್ನೊಂದೆಡೆ ಕೇವಲ ನಮಗೆ ಎರಡು ಅಥವಾ ಮೂರು ಕಂತುಗಳು ಬಂದು ಇನ್ನುಳಿದ ಕಂತುಗಳು ಬಂದೇ ಇಲ್ಲ ಎನ್ನುವ ಮಹಿಳೆಯರು ಇದ್ದಾರೆ. ಹಾಗಾಗಿ ಹಣ ಬರದೇ ಇದ್ದವರ ಏನು ಮಾಡಬೇಕು, 8ನೇ ಕಂತಿನ ಹಣದ ಅಪ್ಡೇಟ್ ಕೆಳಗೆ ಕೊಡಲಾಗಿದೆ.
8ನೇ ಕಂತಿನ ಹಣ ಬಿಡುಗಡೆ
ಏಪ್ರಿಲ್ ತಿಂಗಳು ಮುಗಿಯುತ್ತ ಬಂದಿದೆ. ಆದ್ದರಿಂದ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಹೌದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಹಣ ಬಿಡುಗಡೆಯಾಗಿದ್ದು, ಎಲ್ಲಾ ಮಹಿಳಾ ಫಲಾನುಭವಿಗಳು ನಿಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಿ.

ಎಲ್ಲಾ ಸರಿ ಇದ್ರೂ ಹಣ ಬಂದಿಲ್ವಾ?
ಸಿಡಿಪಿಓ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿದ ದಾಖಲೆಗಳನ್ನು ನೀಡಬೇಕು (Visit CDPO office)
ಅದೆಷ್ಟೋ ಮಹಿಳೆಯರ ಖಾತೆಗೆ ಇನ್ನು ಒಂದು ಕಂತಿನ ಹಣವೂ ಬಂದಿಲ್ಲ. ಈ ರೀತಿಯ ಸಮಸ್ಯೆ ಇದ್ದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹೋಗಿ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ್ದಕ್ಕೆ ಸಿಕ್ಕಿರುವ ಸ್ವೀಕೃತಿ ಎಲ್ಲವನ್ನು ಕೊಟ್ಟು ನಿಮ್ಮ ಖಾತೆಗೆ ಯಾಕೆ ಹಣ (Money Deposit) ಬಂದಿಲ್ಲ ಎನ್ನುವ ಮಾಹಿತಿಯನ್ನು ಪಡೆಯಿರಿ. ಯಾವ ತಾಂತ್ರಿಕ ಸಮಸ್ಯೆಯಿಂದ ನಿಮ್ಮ ಖಾತೆಗೆ (Bank Account) ಹಣ ಬಂದಿಲ್ಲ ಎನ್ನುವುದನ್ನು ತಿಳಿಸುತ್ತಾರೆ. ಅದರ ಮೂಲಕ ಆ ಸಮಸ್ಯೆಯನ್ನು ಬಗೆಹರಿಸಿ ನಿಮ್ಮ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುವ ಹಾಗೆ ಮಾಡಬಹುದು.
ಸಿ ಡಿ ಪಿ ಓ ಕಚೇರಿಯಲ್ಲಿ ( CDPO Office ) ನಿಮ್ಮ ಅರ್ಜಿ ಅನುಮೋದನೆ ಬಾಕಿ ಇದ್ದರೆ ಆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಿ. ಇದಾದ ಬಳಿಕ ನಿಮ್ಮ ಖಾತೆಗೆ ಕೆವೈಸಿ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದರೆ ಪೆಂಡಿಂಗ್ ಇರುವ ಹಣ ಕೂಡ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಯಾಕಂದ್ರೆ ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿರುತ್ತದೆ.
ಡಿಸೆಂಬರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಜನವರಿ 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನ ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೀವು ನೋಡಬಹುದು.

ಪೆಂಡಿಂಗ್ ಹಣ ಜಮಾ ಆಗದಿರಲು ಇಲ್ಲಿವೇ ಕಾರಣ
– ಆಧಾರ್ ಕಾರ್ಡ್ ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯಲ್ಲಿ ಒಂದೇ ತರನಾಗಿ ಹೆಸರು ಮತ್ತು ಅಡ್ರೆಸ್ ಇಲ್ಲದೆ ಇರುವುದು.
– ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಲಿಂಕ್ ಮಾಡದೆ ಇರುವುದು.
– ಬ್ಯಾಂಕ್ ಖಾತೆಗೆ ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸದೇ ಇರುವುದು.
– ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡದೇ ಇರುವುದು
– ಆಧಾರ್ ಕಾರ್ಡ್ ಅಪ್ಡೇಟ್ ಮಾಡದೇ ಇರುವುದು
– ಅರ್ಜಿ ಸಲ್ಲಿಸುವಾಗ ತಾಂತ್ರಿಕ ದೋಷದಿಂದ ಅರ್ಜಿ ಸಲ್ಲಿಕೆ ಆಗದೆ ಇರುವುದು