Gruhalakshmi – ಗೃಹಲಕ್ಷ್ಮಿ ಯೋಜನೆಯ ನೇರ ಅರ್ಜಿ ಸಲ್ಲಿಕೆ ಪ್ರಾರಂಭ, ಮೆಸೇಜ್ ಇಲ್ಲದೇ ಅರ್ಜಿ ಸಲ್ಲಿಸಿ – ಲಕ್ಷ್ಮಿ ಹೆಬ್ಬಾಳ್ಕರ್

Picsart 23 07 26 19 24 02 424 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ(Gruhalakshmi Yojane) ಅರ್ಜಿ ಸಲ್ಲಿಸುವಿಕೆಯಲ್ಲಿ ಬಂದಿರುವ ಹೊಸ ಬದಲಾವಣೆಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅದೇನೆಂದರೆ ಅರ್ಜಿಯನ್ನು ಸಲ್ಲಿಸಲು ಇನ್ನು ಮುಂದೆ ಮೆಸೇಜನ್ನು ಕಳಿಸುವಂತಹ ಅವಶ್ಯಕತೆ ಇಲ್ಲ. ನೇರವಾಗಿ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಸೇರಿದಂತೆ ಸರ್ಕಾರಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಇನ್ನು ಮುಂದೆ ಮೆಸೇಜ್ ಬೇಡ :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾದಾಗ, ಕಡ್ಡಾಯವಾಗಿ ಮೆಸೇಜನ್ನು ಕಳುಹಿಸಿ ನಂತರ ನಮಗೆ ಸರ್ಕಾರದ ವತಿಯಿಂದ ಸ್ಥಳ ದಿನಾಂಕ ಹಾಗೂ ಸಮಯದ ಮೆಸೇಜ್ ಬಂದ ನಂತರ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕಿತ್ತು. ಈ ಮೆಸೇಜ್ ಕಳುಹಿಸುವ ಕ್ರಮದಿಂದಾಗಿ ಅದೆಷ್ಟೋ ಜನರಿಗೆ ಗೊಂದಲ ಉಂಟಾಗಿತ್ತು. ಏಕೆಂದರೆ ಕೆಲವರಿಗೆ ಸರ್ಕಾರದ ವತಿಯಿಂದ ಮೆಸೇಜ್ ಬರುತ್ತಿರಲಿಲ್ಲ. ಇನ್ನು ಕೆಲವರಿಗೆ ಮೆಸೇಜ್ ಮಾಡುವುದು ಹೇಗೆ ಎಂದೇ ತಿಳಿದಿರುತ್ತಿರಲಿಲ್ಲ. ಇಂತಹ ಕೆಲಸದಿಂದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ತಡವಾಗುತ್ತಿತ್ತು. ಆದರೆ ಇನ್ನು ಮುಂದೆ ಇಂತಹ ಮೆಸೇಜ್ ಗಳನ್ನು ಕಳುಹಿಸುವ ಅವಶ್ಯಕತೆ ಇಲ್ಲ. ಇಂತಹ ಗೊಂದಲಗಳನ್ನು ತಪ್ಪಿಸಿ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನೆರವಾಗಲೆಂದು, ಎಸ್‌ಎಂಎಸ್‌ ಇಲ್ಲದೆ ನೇರವಾಗಿ ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

whatss

ಇದುವರೆಗೂ ಸುಮಾರು 22.90 ಲಕ್ಷ ಫಲಾನುಭವಿಗಳ ನೋಂದಣಿಯಾಗಿದೆ. ನೀವು ಕೂಡ ಇನ್ನೂ ಏನಾದರೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಂಡಿಲ್ಲವೆಂದರೆ, ಮೆಸೇಜ್ ಬಂದಿಲ್ಲ ಎಂದು ಕಾಯಬೇಕಾಗಿಲ್ಲ. ನೇರವಾಗಿ ಹತ್ತಿರದ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಅಥವಾ ಬಾಪೂಜಿ ಸೇವಾ ಕೇಂದ್ರಗಳಿಗೆ ಬೇಕಾದ ಅಗತ್ಯ ದಾಖಲೆಗಳೊಂದಿಗೆ ತೆರಳಿ ನೇರವಾಗಿ ನೋಂದಣಿಯನ್ನು ಮಾಡಿಸಬಹುದು. ಇದರ ಕುರಿತಾಗಿ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಅಷ್ಟೇ ಅಲ್ಲದೆ ಸರ್ಕಾರವು ಈಗಾಗಲೇ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಿದ್ದಾರೆ. ಪ್ರಜಾ ಪ್ರತಿನಿಧಿಗಳ ಆಯ್ಕೆ ನಡೆದ ಕೂಡಲೇ, ಸರ್ಕಾರದಿಂದ ನೇಮಕಗೊಂಡ ಪ್ರಜಾಪ್ರತಿನಿಧಿಗಳ ಮೂಲಕ ಸಹ ನೋಂದಣಿ ಮಾಡಿಕೊಳ್ಳಬಹುದು. ಅವರು ಮನೆ-ಮನೆಗೆ ಭೇಟಿ ನೀಡಿ ಸ್ಥಳದಲ್ಲಿಯೇ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲಿದ್ದಾರೆ. ಹಾಗಾಗಿ ಇನ್ನು ಮುಂದೆ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಲು ಯಾವುದೇ ರೀತಿಯ ತೊಂದರೆ ಹಾಗೂ ಗೊಂದಲಗಳಿಗೆ ಒಳಗಾಗುವ ಸಮಸ್ಯೆವಿಲ್ಲ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಮುಖ್ಯವಾಗಿ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

Picsart 23 07 16 14 24 41 584 transformed 1

 ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

3 thoughts on “Gruhalakshmi – ಗೃಹಲಕ್ಷ್ಮಿ ಯೋಜನೆಯ ನೇರ ಅರ್ಜಿ ಸಲ್ಲಿಕೆ ಪ್ರಾರಂಭ, ಮೆಸೇಜ್ ಇಲ್ಲದೇ ಅರ್ಜಿ ಸಲ್ಲಿಸಿ – ಲಕ್ಷ್ಮಿ ಹೆಬ್ಬಾಳ್ಕರ್

Leave a Reply

Your email address will not be published. Required fields are marked *

error: Content is protected !!