WhatsApp Image 2025 09 03 at 12.03.10 PM

ಗೃಹಲಕ್ಷ್ಮಿ ದಸರಾ ಹಬ್ಬಕ್ಕೆ ಬಂಪರ್‌ ಗಿಫ್ಟ್: ಬಾಕಿ 22 ಮತ್ತು 23 ನೇ ಕಂತಿನ ಒಟ್ಟು ₹4,000 ಹಣ ಬಿಡುಗಡೆ ,ಈ ದಿನ ಖಾತೆಗೆ.!

WhatsApp Group Telegram Group

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನಾಡಹಬ್ಬ ದಸರಾ ನವರಾತ್ರಿ ಹಬ್ಬದ ಪ್ರಯುಕ್ತ ಸಂತಸದ ಸುದ್ದಿಯೊಂದನ್ನು ಕೊಟ್ಟಿದ್ದಾರೆ, ಈ ಯೋಜನೆಯಡಿ 22 ಮತ್ತು 23ನೇ ಕಂತಿನ ಒಟ್ಟು ₹4,000 ಹಣವನ್ನು ಇದೇ ತಿಂಗಳು ಬರುವ ಸೆಪ್ಟೆಂಬರ್‌ 7 ಮತ್ತು 9ನೇ ತಾರೀಕಿಗೆ ಬಿಡುಗಡೆ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಹೀಗಾಗಿ ಈಗಾಗಲೇ ರಾಜ್ಯ ಖಜಾನೆಯಿಂದ ಜಿಲ್ಲಾ ಖಜಾನೆಗಳಿಗೆ ಹಣವನ್ನು ವರ್ಗಾಯಿಸಲಾಗಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಶೀಘ್ರವೇ ಜಮೆಯಾಗಲಿದೆ ಎಂದು ನಿನ್ನೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ಸಿಹಿ ಸುದ್ದಿಯನ್ನು ದೃಢಪಡಿಸಿದ್ದಾರೆ ಸಚಿವರೇ ಖುದ್ದಾಗಿ ಹೇಳಿರುವ ವಿಡಿಯೋ ಲೇಖನದ ಕೊನೆಯಲ್ಲಿದೆ ನೋಡಿ ಖಚಿತಪಡಿಸಿಕೊಲ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ದಸರಾ ನವರಾತ್ರಿ ಹಬ್ಬಕ್ಕೆ ವಿಶೇಷ ಕೊಡುಗೆ

ನಾಡಹಬ್ಬ ದಸರಾ ನವರಾತ್ರಿ ಹಬ್ಬ ಕರ್ನಾಟಕದಲ್ಲಿ ಆಚರಿಸಲಾಗುವ ಪ್ರಮುಖ ಸಾಂಸ್ಕೃತಿಕ ಉತ್ಸವವಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣಕಾಸಿನ ನೆರವು ಒದಗಿಸಲು ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್‌ 7ಕ್ಕೆ 22ನೇ ಕಂತಿನ ₹2,000 ಹಣ ಮತ್ತು ಸೆಪ್ಟೆಂಬರ್‌ 9ನೇ ತಾರೀಕಿಗೆ 23ನೇ ಕಂತಿನ ₹2,000 ಹಣ ಒಟ್ಟು ಬಾಕಿ 4000ರೂಪಾಯಿಗಲನ್ನು ಈ ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಹಿಂದೆ, ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಒಂದು ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿತ್ತು, ಮತ್ತು ಇದೀಗ ನಾಡಹಬ್ಬ ದಸರಾ ನವರಾತ್ರಿ ಹಬ್ಬಕ್ಕೆ ಮತ್ತೆರಡು ಕಂತಿನ ಹಣವನ್ನು ಬಿಡುಗಡೆಗೊಳಿಸಲಾಗುತ್ತಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ರಿಂದ ಘೋಷಣೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಿನ್ನೆ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ಸಿಹಿ ಸುದ್ದಿಯನ್ನು ದೃಢಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಕಂತಿನ ಹಣವನ್ನು ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಫಲಾನುಭವಿಗಳಿಗೆ ಒದಗಿಸಿದ್ದೇವೆ ಹಾಗೆಯೇ ಬಾಕಿ ಹಣ ಒಟ್ಟು 4000ರೂಪಾಯಿಗಲನ್ನು ಈ ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಸರ್ಕಾರ ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ರಾಜ್ಯ ಖಜಾನೆಯಿಂದ ಜಿಲ್ಲಾ ಖಜಾನೆಗಳಿಗೆ ಅಗತ್ಯ ಮೊತ್ತವನ್ನು ವರ್ಗಾಯಿಸಲಾಗಿದ್ದು, ಶೀಘ್ರದಲ್ಲಿಯೇ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಹಣ ಬಿಡುಗಡೆಯ ಪ್ರಕ್ರಿಯೆ

ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯು ಸರಳ ಮತ್ತು ಪಾರದರ್ಶಕವಾಗಿದೆ. ರಾಜ್ಯ ಖಜಾನೆಯಿಂದ ಜಿಲ್ಲಾ ಖಜಾನೆಗಳಿಗೆ ಸಹಾಯಧನವನ್ನು ವರ್ಗಾಯಿಸಲಾಗುತ್ತದೆ, ಮತ್ತು ಅಲ್ಲಿಂದ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ಖಾತೆ ವರ್ಗಾವಣೆ (DBT) ಮೂಲಕ ಹಣವನ್ನು ಜಮೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಈ ವಾರದೊಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಹಣ ತಲುಪಲಿದೆ ಎಂದು ಭರವಸೆ ನೀಡಲಾಗಿದೆ.

ಫಲಾನುಭವಿಗಳಿಗೆ ಯಾವಾಗ ತಲುಪಲಿದೆ ಹಣ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಗಳ ಪ್ರಕಾರ, 22 ಮತ್ತು 23ನನೇ ಕಂತಿನ ₹4,000 ಹಣವನ್ನು ದಸರಾ ನವರಾತ್ರಿ ಹಬ್ಬದ ಸಂದರ್ಭದಲ್ಲಿ, ಅಂದರೆ ಈ ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು. ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸುವ ಮೂಲಕ ಹಣ ಜಮೆಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬಹುದು.

ಅಂಕಣ

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕದ ಮಹಿಳೆಯರಿಗೆ ಆರ್ಥಿಕ ಸಬಲೀಕರಣದ ದಾರಿದೀಪವಾಗಿದೆ. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಜೂನ್ ತಿಂಗಳ ಕಂತಿನ ಹಣವನ್ನು ಬಿಡುಗಡೆ ಮಾಡುವ ಸರ್ಕಾರದ ನಿರ್ಧಾರವು ಫಲಾನುಭವಿಗಳಿಗೆ ಹಬ್ಬದ ಸಂತೋಷವನ್ನು ದ್ವಿಗುಣಗೊಳಿಸಲಿದೆ. ಈ ಯೋಜನೆಯ ಮೂಲಕ, ಸರ್ಕಾರವು ಮಹಿಳೆಯರ ಆರ್ಥಿಕ ಭದ್ರತೆಯನ್ನು ಖಾತರಿಪಡಿಸುವ ಜೊತೆಗೆ, ಕುಟುಂಬಗಳ ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸುತ್ತಿದೆ. ಫಲಾನುಭವಿಗಳಿಗೆ ಶೀಘ್ರವೇ ಹಣ ತಲುಪಲಿದೆ

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories