gruhalakshmi deepavali

ಹಬ್ಬದ ದಿನವೇ ಗೃಹಲಕ್ಷ್ಮಿ ಬಾಕಿ ₹2000/- ಈಗ ಖಾತೆಗೆ ಜಮಾ! ನಿಮಗಿನ್ನೂ ಬಂದಿಲ್ಲ ಅಂದ್ರೆ ಈ ಲಿಸ್ಟ್ ಚೆಕ್ ಮಾಡಿಕೊಳ್ಳಿ

WhatsApp Group Telegram Group

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಘೋಷಣೆಯಂತೆ, ಗೃಹಲಕ್ಷ್ಮಿ ಯೋಜನೆಯ ಹಣವು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರಲು ಆರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರಿಗೂ ಹಣ ಬರುತ್ತಿಲ್ಲ, ಅರ್ಹತೆ ಮುಖ್ಯ

ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲ ಫಲಾನುಭವಿಗಳಿಗೂ ಏಕಕಾಲದಲ್ಲಿ ಸಂದಾಯವಾಗುತ್ತಿಲ್ಲ. ಈ ಯೋಜನೆಯ ಲಾಭ ಪಡೆಯಲು ನೀವು ಕೇವಲ ಫಲಾನುಭವಿಗಳಾಗಿದ್ದರೆ ಸಾಲದು, ನಿಮ್ಮ ಹೆಸರು ಕಡ್ಡಾಯವಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ‘ಇ-ರೇಷನ್ ಕಾರ್ಡ್’ ಪಟ್ಟಿಯಲ್ಲಿ ದಾಖಲಾಗಿರಬೇಕು. ಈ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಆಗುತ್ತದೆ. ಹೀಗಾಗಿ, ಆಸಕ್ತರು ಈ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಲಹೆಗಳನ್ನು ಬಳಸಿಕೊಳ್ಳಬಹುದು.

ಬಾಕಿ ಹಣ ಪಾವತಿಗೆ ಚಾಲನೆ

ಸರ್ಕಾರದ ಮಹತ್ವಾಕಾಂಕ್ಷೆಯ ಐದು ಉಚಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣಕಾಸು ಬಿಡುಗಡೆಯ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ವಿಳಂಬದ ಆರೋಪಗಳು ಕೇಳಿಬಂದಿದ್ದವು. ನಿರ್ದಿಷ್ಟವಾಗಿ ಜುಲೈ ತಿಂಗಳಿನಿಂದ ಹಣ ಬರುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿದ್ದವು. ಈಗ, ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಗೃಹಲಕ್ಷ್ಮಿಯ ಬಾಕಿ ಕಂತುಗಳ ಪಾವತಿಗೆ ಸರ್ಕಾರವು ಚಾಲನೆ ನೀಡಿದೆ.

ಸಚಿವರ ಭರವಸೆ ನಿಜವಾಯಿತು

ಇತ್ತೀಚೆಗೆ ಹಾಸನಾಂಬ ದೇಗುಲಕ್ಕೆ ಭೇಟಿ ನೀಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಜುಲೈ ತಿಂಗಳ ಬಾಕಿ ಹಣವನ್ನು ದಸರಾ ಸಮಯದಲ್ಲಿ ನೀಡಲಾಗಿದೆ ಮತ್ತು ಆಗಸ್ಟ್ ತಿಂಗಳ ಹಣವನ್ನು ದೀಪಾವಳಿಯ ವೇಳೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು. ಅಲ್ಲದೆ, ಸೆಪ್ಟೆಂಬರ್ ತಿಂಗಳ ಕಂತನ್ನು ಆದಷ್ಟು ಶೀಘ್ರದಲ್ಲಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಸಚಿವರ ಈ ಮಾತು ಈಗ ನಿಜವಾಗಿದ್ದು, ದೀಪಾವಳಿಯ ಈ ಸಮಯದಲ್ಲಿ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಕಂತು ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿದೆ.

ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಇರುವವರಿಗೆ ಮಾತ್ರ ಯೋಜನೆಯ ಹಣ ಬರುತ್ತದೆ. ಪಟ್ಟಿಯನ್ನು ಪರಿಶೀಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ:

ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://ahara.karnataka.gov.in/Home/EServices

ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

rat

ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ

rat1

This image has an empty alt attribute; its file name is WhatsApp-Image-2025-09-05-at-11.51.16-AM-12-1024x330.jpeg

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories