ಕರ್ನಾಟಕ ಸರ್ಕಾರವು ‘ಗೃಹಲಕ್ಷ್ಮಿ ಯೋಜನೆ’ಯಡಿ ಮಹಿಳೆಯರಿಗೆ ಹೊಸ ಆರ್ಥಿಕ ಅವಕಾಶಗಳನ್ನು ನೀಡಲಿದೆ. ಈ ಯೋಜನೆಯಡಿ, ಪ್ರತಿ ಮನೆಯ ಯಜಮಾನಿಯರಿಗೆ ಮಾಸಿಕ ₹2,000 ನಗದು ಸಹಾಯಧನ ನೀಡಲಾಗುತ್ತಿದೆ. ಇನ್ನು ಮುಂದೆ ಈ ಹಣವನ್ನು ಉಳಿತಾಯ ಮಾಡಿ, ಸಾಲ ಪಡೆದು ಸ್ವಯಂ ಉದ್ಯೋಗ ಆರಂಭಿಸುವ ಸೌಲಭ್ಯವೂ ಲಭಿಸಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸಾಲಕ್ಕೆ ಶೂರಿಟಿ ಅಗತ್ಯವಿಲ್ಲ
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರು 4 ರಿಂದ 10 ಜನರ ಸಂಘವೊಂದನ್ನು ರಚಿಸಿಕೊಂಡರೆ, ಅವರ ಉಳಿತಾಯದ ಆಧಾರದ ಮೇಲೆ ₹3 ಲಕ್ಷದಿಂದ ₹5 ಲಕ್ಷದವರೆಗೆ ಸಾಲ ಪಡೆಯಬಹುದು. ಈ ಸಾಲಕ್ಕೆ ಯಾವುದೇ ಶೂರಿಟಿ ಅಥವಾ ಭದ್ರತಾ ದಾಖಲೆಗಳ ಅಗತ್ಯವಿರುವುದಿಲ್ಲ. ನಬಾರ್ಡ್, ಗ್ರಾಮೀಣ ವಿಕಾಸ ಬ್ಯಾಂಕ್ ಮತ್ತು ಕರ್ನಾಟಕ ಅಪ್ಪೆಕ್ಸ್ ಬ್ಯಾಂಕ್ ಸಹಭಾಗಿತ್ವದಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
ಯಾವುದಕ್ಕೆ ಸಾಲ ಬಳಸಬಹುದು?
ಸಾಲದ ಹಣವನ್ನು ಕೃಷಿ ಯಂತ್ರೋಪಕರಣಗಳು, ಸಣ್ಣ ಹೋಟೆಲ್, ಟೀ ಸ್ಟಾಲ್, ಹಸ್ತಶಿಲ್ಪ ಉತ್ಪಾದನೆ, ದಿನಸಿ ಅಂಗಡಿ ಅಥವಾ ಇತರೆ ಸ್ವಯಂ ಉದ್ಯೋಗಗಳಿಗೆ ಬಳಸಿಕೊಳ್ಳಬಹುದು. ಈ ಮೂಲಕ ಮಹಿಳೆಯರು ಸ್ವಾವಲಂಬಿಯಾಗಲು ಅವಕಾಶ ಒದಗಿಸಲಾಗುವುದು.
ಯೋಜನೆಯ ಜಾರಿ
ಈ ಯೋಜನೆಯನ್ನು ಅಕ್ಟೋಬರ್ 2025ರಲ್ಲಿ ಪ್ರಾಯೋಗಿಕ ಹಂತದಲ್ಲಿ ಆಯ್ದ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುವುದು. ನಂತರ, ರಾಜ್ಯದ ಎಲ್ಲಾ ಭಾಗಗಳಲ್ಲಿ ವಿಸ್ತರಿಸಲಾಗುವುದು. ಇದರ ಮೂಲಕ 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಲ್ಲಿ ಸಾವಿರಾರು ಜನ ಸ್ವರೋಜಗಾರರಾಗುವ ನಿರೀಕ್ಷೆ ಇದೆ.
ಹೆಚ್ಚಿನ ಮಾಹಿತಿಗೆ
ಯೋಜನೆಯ ವಿವರಗಳಿಗಾಗಿ ಸ್ಥಳೀಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಗೃಹಲಕ್ಷ್ಮಿ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.