Gurantee Scheme: “ಗೃಹಲಕ್ಷ್ಮೀ’ ಜೂನ್‌ ತಿಂಗಳ 2000/- ಹಣ ಈ ದಿನ ಜಮೆ: ಸಚಿವೆ ಹೆಬ್ಬಾಳ್ಕರ್‌

IMG 20240708 WA0002

ಗೃಹಲಕ್ಷ್ಮೀ ಯೋಜನೆಯ (gruhalakshmi  scheme) ಹಣ ಇನ್ನು 2 ದಿನದಲ್ಲಿ ಜಮೆ ಆಗಲಿದೆ.

ಈಗಾಗಲೇ ಗೃಹಲಕ್ಷ್ಮೀ ಯೋಜನೆ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಮುಖ್ಯವಾಗಿ ಜೂನ್ ತಿಂಗಳ ಕಂತಿಗಾಗಿ ಕಾಯುತ್ತಿರುವವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಯಾಕೆಂದರೆ, ಶೀಘ್ರದಲ್ಲೆ ಜೂನ್ ತಿಂಗಳ ಕಂತು ಬಿಡುಗಡೆಯಾಗಲಿದೆ. ಗೃಹಲಕ್ಷ್ಮೀ ಹಣ (gruhalakshmi money) ಫ‌ಲಾನುಭವಿಗಳಿಗೆ ಕಳೆದ ಮೇ 5ರಂದು ಕೊನೆಯದಾಗಿ ಜಮಾ ಆಗಿದೆ. ಜೂನ್‌ ಹಾಗೂ ಜುಲೈ ಎರಡು ತಿಂಗಳ ಹಣ ಮಾತ್ರ ಬಂದಿಲ್ಲ. ಆದರೆ, ಪರಿಶಿಷ್ಟ ಫಲಾನುಭವಿಗಳಿಗೆ ಬಂದಿದೆ. ಉಳಿದವರಿಗೆ ಶೀಘ್ರದಲ್ಲೇ ಡಿಬಿಟಿ (DBT) ಮೂಲಕ ಜಮೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ (Laksmi Hebbalkar) ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜುಲೈ 15 ರ ಒಳಗಾಗಿ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲಾ ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಚುನಾವಣೆ ನೀತಿ ಸಂಹಿತೆಯಿಂದ ವಿಳಂಬವಾಗಿದ್ದ ಜೂನ್ ತಿಂಗಳ ಕಂತು. ಇದೀಗ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಯೋಜನೆಯ 1.23 ಕೋಟಿ ಫಲಾನುಭವಿಗಳಿಗೂ ಸೇರಿದಂತೆ ಹೊಸದಾಗಿ ಅರ್ಜಿ ಸಲ್ಲಿಸಿದ ಅರ್ಹರಿಗೂ ಹಣ ಬೀಳಲಿದೆ. ಆದರೆ ಐಟಿ ತೆರಿಗೆ ವ್ಯಾಪ್ತಿಯಲ್ಲಿರುವ ಹೆಸರು ಯೋಜನೆಯಿಂದ ಡಿಲೀಟ್ ಆಗಲಿದೆ. 2 ಲಕ್ಷ ಅರ್ಜಿ(2 Lakh Application) ಸೇರ್ಪಡೆಯ ಪರಿಶೀಲನೆ ನಡೆಯಲಿದೆ.

ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ನಿಲ್ಲುವುದಿಲ್ಲ :

ಲೋಕಸಭೆ ಚುನಾವಣೆ ನೀತಿ ಸಂಹಿತೆಗೆ (For Code of Conduct for Lok Sabha Elections) ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ಗೃಹಲಕ್ಷ್ಮಿ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಯೋಜನೆಗೆ ಬಿಪಿಎಲ್‌, ಎಪಿಎಲ್‌ ಪಡಿತರ (BPL and APL ration card) ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ. ಆದಾಯ ತೆರಿಗೆ ಪಾವತಿದಾರರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ. ಆದರೂ ಆದಾಯ ತೆರಿಗೆ ಪಾವತಿಸುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದರು. ಇಂತಹ 1.78 ಲಕ್ಷ ಮಂದಿಯನ್ನು ಪತ್ತೆ ಮಾಡಲಾಗಿದೆ. ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ನಿಲ್ಲುವುದಿಲ್ಲ.

ದೃಢೀಕರಣ ಪತ್ರ ಸಲ್ಲಿಸಿದವರಿಗೆ ಮಾತ್ರ 2 ಸಾವಿರ ರೂ.

ಯಾರೆಲ್ಲ ಆದಾಯ ತೆರಿಗೆ ಪಾವತಿಸಿಲ್ಲ, ಅಂತಹವರು ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ನೀಡಬೇಕು ಎಂದು ತಿಳಿಸಿರುವ ಪ್ರಕಾರ, 1.78 ಲಕ್ಷ ಮಂದಿ ಪೈಕಿ 6 ಸಾವಿರಕ್ಕೂ ಹೆಚ್ಚು ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇದೀಗ ಇವರನ್ನು ಯೋಜನೆಗೆ ಪರಿಗಣಿಸಲಾಗಿದೆ. ದೃಢೀಕರಣ ಪತ್ರ ಸಲ್ಲಿಸಿದವರಿಗೆ 2 ಸಾವಿರ ರೂ. ನೀಡಲಾಗುವುದು ಎಂದು ಇಲಾಖೆಯ ಉನ್ನತ ಅಧಿಕಾರಿಗಳು ಹೇಳಿದ್ದಾರೆ.

ಇದೀಗ ರಾಜ್ಯದಲ್ಲಿ 1.23 ಕೋಟಿ ಫಲಾನುಭವಿಗಳಿದ್ದಾರೆ. ಶೀಘ್ರದಲ್ಲೇ ಜೂನ್‌ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಹಣ ಬರಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಯೋಜನೆಯ ಆರಂಭದಲ್ಲಿ ವಿಕೇಂದ್ರೀಕೃತ ವ್ಯವಸ್ಥೆಯ ಮೂಲಕ ಅಂದರೆ ಆಯಾ ಜಿಲ್ಲೆಗಳ ಸಿಇಒಗಳ ನೇತೃತ್ವದಲ್ಲಿ ಫಲಾನುಭವಿಗಳ ಖಾತೆಗೆ ಹಣ ಪಾವತಿಸಲಾಗುತ್ತಿತ್ತು. ಇದೀಗ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಎಲ್ಲಾ 31 ಜಿಲ್ಲೆಗಳ ಫಲಾನುಭವಿಗಳಿಗೆ ಕೇಂದ್ರ ಕಚೇರಿ ಮೂಲಕವೇ ನೇರವಾಗಿ ಫಲಾನುಭವಿಗಳಿಗೆ 2 ಸಾವಿರ ರೂ. ವರ್ಗಾವಣೆ ಮಾಡಲಾಗುವುದು.

ಗೃಹಲಕ್ಷ್ಮಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಚುಣಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜೂನ್‌ ತಿಂಗಳ ಹಣ ಬಿಡುಗಡೆ ಸ್ವಲ್ಪ ತಡವಾಗಿದೆ. ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!