Gruhalakshmi – ಗೃಹಲಕ್ಷಿ ಹಣ ಸಿಗದೇ ಇದ್ದೋರಿಗೆ ಸ್ಥಳದಲ್ಲಿಯೇ ಪರಿಹಾರ, ಇಲ್ಲಿ ಭೇಟಿ ಮಾಡಿ ಹಣ ಪಡೆಯಿರಿ.

IMG 20231227 WA0001

ಇದೀಗ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ( Guaranty scheme ) ಒಂದಾದ ಗೃಹಲಕ್ಷ್ಮಿ ಯೋಜನೆಯ ( Gruhalakshmi Scheme ) ಹಣ ಮಹಿಳೆಯರ ಬ್ಯಾಂಕ್ ಖಾತೆ(Bank account)ಗೆ ಬಂದಿಲ್ಲ ಎಂದಾದರೆ, ಅಂತಹ ಯಾವುದೇ ಸಮಸ್ಯೆ ಇದ್ದರೂ ಕೂಡ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಹಣ ಬಾರದವರಿಗೆ ಸ್ಥಳದಲ್ಲಿಯೇ ಪರಿಹಾರ :

ಹೌದು, ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆಗಳನ್ನು ( Technical Issues ) ಸರಿ ಪಡಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 (ಬುಧವಾರ) ರಿಂದ 29 (ಶುಕ್ರವಾರ) ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ಆಯೋಜಿಸಲಾಗಿದೆ. ಅಂದರೆ ಇಂದಿನಿಂದ ಈ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬಹುದು. ಹಾಗೆಯೇ ಎಲ್ಲ ಸಮಸ್ಯೆಗಳನ್ನು ಶಿಬಿರದಲ್ಲಿಯೇ ಪರಿಹರಿಸಿ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಗೃಹಲಕ್ಷ್ಮಿ ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ( Priyank Kharge ) ತಿಳಿಸಿದ್ದಾರೆ.

tel share transformed

ಮೂರು ದಿನಗಳ ಈ ಶಿಬಿರದ ಮುಖ್ಯ ಉದ್ದೇಶ ( Purpose ) :

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗದಿರಲು ಆಧಾರ್ ಜೋಡಣೆ ( Adhar Link ) , ಬ್ಯಾಂಕಿಗೆ ಸಂಬಂಧಿಸಿದ ತೊಂದರೆ ( Bank Issues ), ಇ-ಕೆವೈಸಿ ಅಪ್ಡೆಟ್( E KYC Update ), ಹೊಸ ಬ್ಯಾಂಕ್ ಖಾತೆ ಆರಂಭ ಸೇರಿದಂತೆ ಹಲವು ಸಮಸ್ಯೆಗಳಿದ್ದಾವೆ. ಈ ಎಲ್ಲಾ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಜಮಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.

ಯಾರೆಲ್ಲ ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ?

ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮೂರು ದಿನಗಳ ಕಾಲ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಈ ಶಿಬಿರಗಳನ್ನು ಆಯೋಜಿಸಲಾಗಿದ್ದು, ಮುಖ್ಯವಾಗಿ, ಬಾಪೂಜಿ ಸೇವಾ ಕೇಂದ್ರದ ಗಣಕಯಂತ್ರ ನಿರ್ವಾಹಕರು
ಅಂಗನವಾಡಿ ಕಾರ್ಯಕರ್ತರು,
ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ (ಇ.ಡಿ.ಸಿ) ತಂಡಗಳು
ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹಾಗೂ ಇತರೆ ಬ್ಯಾಂಕ್ಗಳ ಪ್ರತಿನಿಧಿಗಳು ಈ ಶಿಬಿರಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಶಿಬಿರದಲ್ಲಿ ಏನೆಲ್ಲ ಪರಿಶೀಲನೆ ಮಾಡುತ್ತಾರೆ ?

ಗೃಹಲಕ್ಷ್ಮಿ ಫಲಾನುಭವಿಗಳ ಸಮಸ್ಯೆ ನಿವಾರಣೆಗಾಗಿ ಶಿಬಿರದಲ್ಲಿ ಕೆಲವು ಚಟುವಟಿಕೆಗಳನ್ನು ನಡೆಸಲಾಗುತ್ತದೆ, ಅವುಗಲೆಂದರೆ :
ಬ್ಯಾಂಕ್ ಖಾತೆಗಳನ್ನು ತೆರೆಯುವುದು
ಆಧಾರ್ ಜೋಡಣೆ ಮಾಡುವುದು
ಇ-ಕೆವೈಸಿ ಅಪ್ಡೆಟ್
ಗೃಹಲಕ್ಷ್ಮಿಅರ್ಜಿಯ ಸ್ಥಿತಿ ಪರಿಶೀಲನೆ ಮತ್ತು ಇನ್ನಿತರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಲಾಗುವುದು.

whatss

ಶಿಬಿರ ನಡೆಯುವ ಸಮಯ ಮತ್ತು ದಿನಾಂಕ ( Time and Date ) :

ಶಿಬಿರ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ.27 ರಿಂದ ಡಿ.29ರ ವರೆಗೆ ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜರುಗಲಿದೆ. ಎಲ್ಲ ಮಹಿಳೆಯರು ಈ ಶಿಬಿರದಲ್ಲಿ ಭಾಗವಹಿಸಿ ಗೃಹಲಕ್ಷ್ಮಿ ಯೋಜನೆಯಲ್ಲಿ ಏನೇ ಸಮಸ್ಯೆ ಇದ್ದರೂ ಪರಿಹರಿಸಿಕೊಳ್ಳಬೇಕು.

ಈ ಶಿಬಿರದಲ್ಲಿ ಪಾಲ್ಗೊಳ್ಳಲು ಬೇಕಾಗುವ ದಾಖಲೆಗಳ ( Documents ) ವಿವರ :

ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳು ಈ ಕೆಳಗಿನ ದಾಖಲೆಗಳನ್ನು ಕೊಂಡೊಯ್ಯಬೇಕು :
ತಮ್ಮ ಹಾಗೂ ಪತಿಯ ಆಧಾರ್ ಕಾರ್ಡ್
ಪಡಿತರ ಚೀಟಿ
ಬ್ಯಾಂಕ್ ಪಾಸ್ಬುಕ್
ಹಾಗೂ ಈ ಶಿಬಿರದಲ್ಲಿ ಪಾಲ್ಗೊಳ್ಳುವ ಫಲಾನುಭವಿಗಳನ್ನು ಶಿಬಿರಗಳಿಗೆ ಕರೆ ತರುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!