ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್. ಗೃಹಲಕ್ಷ್ಮಿ ಯೋಜನೆ (Gruha Lakshmi Scheme) 2 ಕಂತಿನ ಹಣ ಜಮೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ದಸರಾ ಹಬ್ಬ(Dasara festival)ದ ಸಂಭ್ರಮದಲ್ಲಿರುವ ನಾಡಿನ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ಮೊದಲ ದಿನದ ನವರಾತ್ರಿ (Navaratri) ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವೆ, ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ಶೀಘ್ರದಲ್ಲಿ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣವನ್ನು ಜಮೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಯಾವ ದಿನದಂದು ಗೃಹಲಕ್ಷ್ಮಿ ಹಣ ಬರಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಎಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಲಿದೆ :
ನವರಾತ್ರಿ (Navaratri) ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆಲ್ಲ ಬರುತ್ತಿದ್ದು, ಹಣ ಸಿಕ್ಕ ಬಳಿಕ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ, ದಸರಾ ಹಬ್ಬ ಆಚರಿಸಿ. ಅದೇ ನನಗೆ ಸಂತೋಷ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ಹಣವನ್ನು ಇದೇ ತಿಂಗಳ 7 ಮತ್ತು 9ರಂದು ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣ ಹಾಕಲಾಗುವುದು ಎಂದು ಭರವಸೆ ನೀಡಿದರು.
ಸಿಎಂ ಸಿದ್ದರಾಮಯ್ಯ (CM Siddaramaiah) ನನ್ನ ಬಗ್ಗೆ ಹೇಳಿದ್ದಾರೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar)
ಹೌದು, ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ (Chief Minister) ನನ್ನ ಬಗ್ಗೆ ಹೇಳಿದ್ದಾರೆ, ಫಲಾನುಭವಿ ಮಹಿಳೆಯರು ಆತಂಕ ಪಡಬೇಕಿಲ್ಲ ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ, ಈ ಹೆಣ್ಣು ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




